ಪ್ರಸ್ತುತ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಹ್ಯಾರಿ ಬ್ರೂಕ್ ಅವರ ವಯಸ್ಸು 25. ಅಲ್ಲದೆ ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 94 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 13 ಫೋರ್ಗಳೊಂದಿಗೆ 110 ರನ್ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಕ್ಯಾಪ್ಟನ್ ಎಂಬ ದಾಖಲೆಯನ್ನು ಹ್ಯಾರಿ ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ.