ಬ್ರೂಕ್ ಬೂಮ್ ಬೂಮ್: ದಾಖಲೆಯ ಸೆಂಚುರಿ ಸಿಡಿಸಿದ ಹ್ಯಾರಿ

Updated on: Sep 25, 2024 | 9:31 AM

England vs Australia 2024: ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯ ಮೂರನೇ ಮ್ಯಾಚ್​ನಲ್ಲಿ ಇಂಗ್ಲೆಂಡ್ ತಂಡವು ಜಯಭೇರಿ ಬಾರಿಸಿದೆ. ಇದಕ್ಕೂ ಮುನ್ನ ಮೊದಲೆರಡು ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ಗೆಲುವು ದಾಖಲಿಸಿತ್ತು. ಇದೀಗ ನಿರ್ಣಾಯಕ ಪಂದ್ಯದಲ್ಲಿ ಇಂಗ್ಲೆಂಡ್ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ನಾಯಕ ಹ್ಯಾರಿ ಬ್ರೂಕ್ ಯಶಸ್ವಿಯಾಗಿದ್ದಾರೆ.

1 / 6
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ವಿಶೇಷ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 304 ರನ್ ಕಲೆಹಾಕಿತು.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ವಿಶೇಷ ದಾಖಲೆ ಬರೆದಿದ್ದಾರೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 304 ರನ್ ಕಲೆಹಾಕಿತು.

2 / 6

305 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆದರೆ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಇಂಗ್ಲೆಂಡ್ ತಂಡದ ನಾಯಕ ಬ್ರೂಕ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಲ್ಲಿ ತುಸು ಎಚ್ಚರಿಕೆಯ ಆಟವಾಡಿದ್ದ ಬ್ರೂಕ್ ಬಳಿಕ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

3 / 6

ಪರಿಣಾಮ ಹ್ಯಾರಿ ಬ್ರೂಕ್ ಬ್ಯಾಟ್​ನಿಂದ ಕೇವಲ 87 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಇಂಗ್ಲೆಂಡ್ ಪರ ಸೆಂಚುರಿ ಸಿಡಿಸಿದ ಅತ್ಯಂತ ಕಿರಿಯ ನಾಯಕ ಎಂಬ ದಾಖಲೆ ಬ್ರೂಕ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಅಲೆಸ್ಟರ್ ಕುಕ್ ಹೆಸರಿನಲ್ಲಿತ್ತು.

4 / 6

2011 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ 26 ವರ್ಷದ ಅಲೆಸ್ಟರ್ ಕುಕ್ ಭರ್ಜರಿ ಶತಕ ಬಾರಿಸಿದ್ದರು. ಈ ಮೂಲಕ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಇದೀಗ ಈ ದಾಖಲೆಯನ್ನು ಬ್ರೂಕ್ ಅಳಿಸಿ ಹಾಕಿದ್ದಾರೆ.

5 / 6

ಪ್ರಸ್ತುತ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ತಂಡವನ್ನು ಮುನ್ನಡೆಸುತ್ತಿರುವ ಹ್ಯಾರಿ ಬ್ರೂಕ್ ಅವರ ವಯಸ್ಸು 25. ಅಲ್ಲದೆ ಇದೀಗ ಮೂರನೇ ಏಕದಿನ ಪಂದ್ಯದಲ್ಲಿ 94 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 13 ಫೋರ್​ಗಳೊಂದಿಗೆ 110 ರನ್ ಬಾರಿಸಿದ್ದಾರೆ. ಈ ಮೂಲಕ ಇಂಗ್ಲೆಂಡ್ ಪರ ಏಕದಿನ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಕ್ಯಾಪ್ಟನ್ ಎಂಬ ದಾಖಲೆಯನ್ನು ಹ್ಯಾರಿ ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ.

6 / 6

ಇನ್ನು ಈ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ಬಾರಿಸಿದ ಸ್ಪೋಟಕ ಸೆಂಚುರಿಯಿಂದಾಗಿ ಇಂಗ್ಲೆಂಡ್ ತಂಡ ಗೆಲುವು ದಾಖಲಿಸಿದೆ. ಇಂಗ್ಲೆಂಡ್ ತಂಡವು 254/4 (37.4) ರನ್​​ ಗಳಿಸಿದ್ದ ವೇಳೆ ಮಳೆ ಬಂದಿದ್ದರಿಂದ ಫಲಿತಾಂಶ ನಿರ್ಧಾರಕ್ಕಾಗಿ ಡಕ್​ವರ್ತ್ ಲೂಯಿಸ್ ನಿಯದಮ ಮೊರೆ ಹೋಗಲಾಯಿತು. ಈ ವೇಳೆ ಆಸ್ಟ್ರೇಲಿಯಾಗಿಂತ 45 ರನ್​ಗಳಿಂದ ಮುಂದಿದ್ದರಿಂದ ಇಂಗ್ಲೆಂಡ್ ತಂಡವನ್ನು ವಿಜಯಿ ಎಂದು ಘೋಷಿಸಲಾಗಿದೆ.

Loading...
Unable to load recommendations.
Follow Us