Harry Brook: ಬ್ರೂಕ್ ಸಿಡಿಲಬ್ಬರಕ್ಕೆ ಕೊಹ್ಲಿ ದಾಖಲೆ ಧೂಳೀಪಟ

Harry Brook Records: ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಕ್ರಮವಾಗಿ 39, 4, 110*, 87 ಮತ್ತು 72 ರನ್ ಬಾರಿಸಿದ್ದಾರೆ. ಈ ಮೂಲಕ ಒಟ್ಟು 312 ರನ್​ ಕಲೆಹಾಕಿ ಏಕದಿನ ಕ್ರಿಕೆಟ್​ ಸರಣಿಯಲ್ಲಿ ಹೊಸ ವಿಶ್ವ ದಾಖಲೆ ಬರೆದಿದ್ದಾರೆ.

ಝಾಹಿರ್ ಯೂಸುಫ್
|

Updated on: Sep 30, 2024 | 11:54 AM

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಮೂಲಕ ಇಂಗ್ಲೆಂಡ್ ತಂಡದ ಹಂಗಾಮಿ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಸಹ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಸರಣಿವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕನೆಂಬ ವಿಶ್ವ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿತ್ತು. 2019 ರಲ್ಲಿ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ಕಿಂಗ್ ಕೊಹ್ಲಿ 310 ರನ್ ಬಾರಿಸಿ ಈ ವರ್ಲ್ಡ್ ರೆಕಾರ್ಡ್ ನಿರ್ಮಿಸಿದ್ದರು. ಇದೀಗ ಕ್ಯಾಪ್ಟನ್ ಕೊಹ್ಲಿಯ ಹೆಸರಿನ್ಲಲಿದ್ದ ಈ ದಾಖಲೆಯನ್ನು ಬ್ರೂಕ್ ಮುರಿದಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಇಂಗ್ಲೆಂಡ್ ಏಕದಿನ ತಂಡದ ನಾಯಕನಾಗಿ ಪಾದಾರ್ಪಣೆ ಮಾಡಿದ್ದ ಹ್ಯಾರಿ ಬ್ರೂಕ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ಐದು ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಬ್ರೂಕ್ ಒಂದು ಶತಕ ಹಾಗೂ ಎರಡು ಅರ್ಧಶತಕಗೊಂದಿಗೆ ಒಟ್ಟು 312 ರನ್​ ಕಲೆಹಾಕಿದ್ದಾರೆ. ಈ ಮೂಲಕ ಏಕದಿನ ಸರಣಿಯವೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಕ್ಯಾಪ್ಟನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

3 / 6
ಹಾಗೆಯೇ ಇದೇ ಸರಣಿಯ ಮೂರನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಹ್ಯಾರಿ ಬ್ರೂಕ್ ಇಂಗ್ಲೆಂಡ್ ಪರ ಒನ್​ಡೇ ಕ್ರಿಕೆಟ್​ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ನಾಯಕನೆಂಬ ದಾಖಲೆ ಬರೆದಿದ್ದಾರೆ. ಅದು ಸಹ ತಮ್ಮ 25ನೇ ವಯಸ್ಸಿನಲ್ಲಿ ಎಂಬುದು ವಿಶೇಷ.

4 / 6
ಇದಕ್ಕೂ ಮುನ್ನ ಈ ದಾಖಲೆ ಮಾಜಿ ನಾಯಕ ಅಲೆಸ್ಟರ್ ಕುಕ್ ಹೆಸರಿನಲ್ಲಿತ್ತು. 2011 ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯದಲ್ಲಿ ಶತಕ ಸಿಡಿಸುವ ಮೂಲಕ 26 ವರ್ಷದ ಕುಕ್, ಇಂಗ್ಲೆಂಡ್ ಪರ ಒನ್​ಡೇನಲ್ಲಿ ಸೆಂಚುರಿ ಬಾರಿಸಿದ ಅತ್ಯಂತ ಕಿರಿಯ ನಾಯಕ ಎನಿಸಿಕೊಂಡಿದ್ದರು.

5 / 6
ಇದೀಗ ಏಕದಿನ ಕ್ರಿಕೆಟ್​ಗೆ ನಾಯಕನಾಗಿ ಪಾದಾರ್ಪಣೆ ಮಾಡಿದ ಸರಣಿಯಲ್ಲೇ ಹ್ಯಾರಿ ಬ್ರೂಕ್ ಎರಡು ಭರ್ಜರಿ ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದರಲ್ಲೂ ಕಳೆದ 5 ವರ್ಷಗಳಿಂದ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ವಿಶ್ವ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದ್ದಾರೆ.

6 / 6
Follow us