- Kannada News Photo gallery Cricket photos Harry Brook Creates New World Record in T20 World Cup 2026
ವಿಶ್ವಕಪ್ನಲ್ಲಿ ‘ಬ್ರೂಕ್ ಬ್ಲಸ್ಟರ್’ ವಿಶ್ವ ದಾಖಲೆ
Harry Brook World Record: ಪಾಕಿಸ್ತಾನ್ ವಿರುದ್ಧದ ಸೂಪರ್-8 ಪಂದ್ಯದಲ್ಲಿ ಇಂಗ್ಲೆಂಡ್ ತಂಡ 2 ವಿಕೆಟ್ಗಳ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಇಂಗ್ಲೆಂಡ್ ತಂಡವು ಸೆಮಿಫೈನಲ್ಗೇರಿದೆ. ಇನ್ನು ಈ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸುವ ಮೂಲಕ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
Updated on: Feb 25, 2026 | 1:41 PM

T20 World Cup 2026: ಟಿ20 ವಿಶ್ವಕಪ್ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ಬರೆದಿರುವುದು ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook). ಅದು ಸಹ ಭರ್ಜರಿ ಶತಕ ಸಿಡಿಸುವ ಮೂಲಕ. ಈ ಶತಕದೊಂದಿಗೆ ಕ್ರಿಸ್ ಗೇಲ್ ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ಪಲ್ಲೆಕೆಲೆ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹ್ಯಾರಿ ಬ್ರೂಕ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಬ್ಯಾಟಿಂಗ್ನೊಂದಿಗೆ ಕೇವಲ 50 ಎಸೆತಗಳಲ್ಲಿ ಶತಕ ಪೂರೈಸಿದ್ದರು.

ಈ ಶತಕದೊಂದಿಗೆ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಎಂಬ ವಿಶ್ವ ದಾಖಲೆಯನ್ನು ಹ್ಯಾರಿ ಬ್ರೂಕ್ ತಮ್ಮದಾಗಿಸಿಕೊಂಡಿದ್ದಾರೆ. ಅಲ್ಲದೆ ವಿಶ್ವಕಪ್ನಲ್ಲಿ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ನಾಯಕನೆಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್ನ ಕ್ರಿಸ್ ಗೇಲ್ ಹೆಸರಿನಲ್ಲಿತ್ತು. 2010ರ ಟಿ20 ವಿಶ್ವಕಪ್ನಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕನಾಗಿ ಕಣಕ್ಕಿಳಿದಿದ್ದ ಗೇಲ್ ಭಾರತದ ವಿರುದ್ಧದ ಪಂದ್ಯದಲ್ಲಿ 98 ರನ್ ಬಾರಿಸಿದ್ದರು. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ನಾಯಕ ಎನಿಸಿಕೊಂಡಿದ್ದರು.

ಇದೀಗ ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ 51 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ 10 ಫೋರ್ಗಳೊಂದಿಗೆ 100 ರನ್ ಬಾರಿಸುವ ಮೂಲಕ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ20 ವಿಶ್ವಕಪ್ನಲ್ಲಿ ಸೆಂಚುರಿ ಸಿಡಿಸಿದ ಮೊದಲ ಕ್ಯಾಪ್ಟನ್ ಹಾಗೂ ಗರಿಷ್ಠ ವೈಯುಕ್ತಿಕ ಸ್ಕೋರ್ಗಳಿಸಿದ ನಾಯಕ ಎನಿಸಿಕೊಂಡಿದ್ದಾರೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More
