3468 ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ಹ್ಯಾರಿ ಬ್ರೂಕ್

Updated on: Dec 27, 2025 | 7:54 AM

Australia vs England: ಆ್ಯಶಸ್ ಸರಣಿಯ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 152 ರನ್​ಗಳಿಗೆ ಆಲೌಟ್ ಆದರೆ, ಇಂಗ್ಲೆಂಡ್ 110 ರನ್​ಗಳಿಸಿ ಸರ್ವಪತನ ಕಂಡಿದೆ. ಇದರ ನಡುವೆ 41 ರನ್​ಗಳಿಸುವ ಮೂಲಕ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಭರ್ಜರಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

1 / 5
ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದ ಮೂಲಕ ಇಂಗ್ಲೆಂಡ್ ತಂಡದ ಸ್ಫೋಟಕ ಬ್ಯಾಟ್ಸ್​ಮನ್ ಹ್ಯಾರಿ ಬ್ರೂಕ್ (Harry Brook) ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಅದು ಕೂಡ ಆಸೀಸ್ ದಾಂಡಿಗ ಆ್ಯಡಂ ಗಿಲ್​ಕ್ರಿಸ್ಟ್ ಅವರ ವರ್ಲ್ಡ್​ ರೆಕಾರ್ಡ್ ಮುರಿಯುವ ಮೂಲಕ ಎಂಬುದು ವಿಶೇಷ.

2 / 5
ಎಂಸಿಜಿ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ 34 ಎಸೆತಗಳಲ್ಲಿ 41 ರನ್ ಬಾರಿಸಿದ್ದಾರೆ. ಈ 41 ರನ್​ಗಳೊಂದಿಗೆ ಹ್ಯಾರಿ ಬ್ರೂಕ್ ಟೆಸ್ಟ್ ಕ್ರಿಕೆಟ್​ನಲ್ಲಿ 3000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳಲ್ಲಿ.

3 / 5
ಅಂದರೆ 148 ವರ್ಷಗಳ ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 3000 ರನ್ ಕಲೆಹಾಕಿದ ವಿಶ್ವ ದಾಖಲೆ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಪಾಲಾಗಿದೆ. ಇದಕ್ಕೂ ಮುನ್ನ ಈ ಸಿಡಿಲಬ್ಬರದ ದಾಖಲೆ ಆಸ್ಟ್ರೇಲಿಯಾ ತಂಡದ ಮಾಜಿ ವಿಕೆಟ್ ಕೀಪರ್ ಆ್ಯಡಂ ಗಿಲ್​ಕ್ರಿಸ್ಟ್ ಅವರ ಹೆಸರಿನಲ್ಲಿತ್ತು.

4 / 5
ಆ್ಯಡಂ ಗಿಲ್​ಕ್ರಿಸ್ಟ್​ ಕೇವಲ 3610 ಎಸೆತಗಳಲ್ಲಿ 3000 ರನ್​ ಕಲೆಹಾಕುವ ಮೂಲಕ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗವಾಗಿ 3 ಸಾವಿರ ರನ್​ ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ಮುರಿಯುವಲ್ಲಿ ಹ್ಯಾರಿ ಬ್ರೂಕ್ ಯಶಸ್ವಿಯಾಗಿದ್ದಾರೆ.

5 / 5
ಹ್ಯಾರಿ ಬ್ರೂಕ್ 3000 ರನ್​ಗಳಿಸಲು ತೆಗೆದುಕೊಂಡಿರುವುದು ಕೇವಲ 3468 ಎಸೆತಗಳನ್ನು ಮಾತ್ರ. ಈ ಮೂಲಕ ಟೆಸ್ಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 3 ಸಾವಿರ ರನ್​ ಕಲೆಹಾಕಿದ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಕೂಡ 54.18 ಸರಾಸರಿಯೊಂದಿಗೆ. ಹೀಗಾಗಿ ಮುಂಬರುವ ದಿನಗಳಲ್ಲೂ ಬ್ರೂಕ್ ಕಡೆಯಿಂದ ಭರ್ಜರಿ ದಾಖಲೆಗಳನ್ನು ನಿರೀಕ್ಷಿಸಬಹುದು.