IPL 2025: ಐಪಿಎಲ್​ನಿಂದ ಹ್ಯಾರಿ ಬ್ರೂಕ್​ 2 ವರ್ಷ ಬ್ಯಾನ್

Updated on: Mar 10, 2025 | 11:31 AM

IPL 2025 Harry Brook: ಇಂಡಿಯನ್ ಪ್ರೀಮಿಯರ್ ಲೀಗ್​ಗೆ (ಐಪಿಎಲ್​) ಆಯ್ಕೆಯಾದ ಆಟಗಾರರು ಟೂರ್ನಿ ಆಡುವುದು ಕಡ್ಡಾಯ. ಅಂದರೆ ಯಾವುದೇ ನಿರ್ದಿಷ್ಟ ಕಾರಣಗಳಿಲ್ಲದೆ ಐಪಿಎಲ್​ನಿಂದ ಹಿಂದೆ ಸರಿಯುವಂತಿಲ್ಲ. ಒಂದು ವೇಳೆ ವಿನಾಕಾರಣ ಟೂರ್ನಿಗೆ ಅಲಭ್ಯರಾದರೆ ಅವರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ. ಅದರಂತೆ ಇದೀಗ ಹ್ಯಾರಿ ಬ್ರೂಕ್ ಬ್ಯಾನ್​ಗೆ ಒಳಗಾಗಿದ್ದಾರೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಿಂದ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಹಿಂದೆ ಸರಿದಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್​ಗಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಬ್ರೂಕ್ ಈ ಬಾರಿಯ ಐಪಿಎಲ್​ಗೆ ಅಲಭ್ಯರಾಗುವುದಾಗಿ ತಿಳಿಸಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (IPL 2025)​ ಸೀಸನ್-18 ರಿಂದ ಇಂಗ್ಲೆಂಡ್ ಬ್ಯಾಟರ್ ಹ್ಯಾರಿ ಬ್ರೂಕ್ ಹಿಂದೆ ಸರಿದಿದ್ದಾರೆ. ಅಂತರರಾಷ್ಟ್ರೀಯ ಕ್ರಿಕೆಟ್​ಗಾಗಿ ಹೆಚ್ಚಿನ ಸಿದ್ಧತೆ ಮಾಡಿಕೊಳ್ಳುವ ಸಲುವಾಗಿ ಬ್ರೂಕ್ ಈ ಬಾರಿಯ ಐಪಿಎಲ್​ಗೆ ಅಲಭ್ಯರಾಗುವುದಾಗಿ ತಿಳಿಸಿದ್ದಾರೆ.

2 / 5

ಹ್ಯಾರಿ ಬ್ರೂಕ್ ಅವರ ಈ ನಿರ್ಧಾರವೇ ಇದೀಗ ಅವರಿಗೆ ಮುಳುವಾಗಲಿದೆ. ಏಕೆಂದರೆ ಇಂಡಿಯನ್ ಪ್ರೀಮಿಯರ್ ಲೀಗ್​ನ ಹೊಸ ನಿಯಮದ ಪ್ರಕಾರ, ಐಪಿಎಲ್​ ಮೆಗಾ ಹರಾಜಿನ ಮೂಲಕ ಆಯ್ಕೆಯಾದ ಆಟಗಾರರು ಟೂರ್ನಿಯಿಂದ ಹಿಂದೆ ಸರಿದರೆ ಅಂತಹ ಆಟಗಾರರ ಮೇಲೆ 2 ವರ್ಷಗಳ ನಿಷೇಧ ಹೇರಲಾಗುತ್ತದೆ.

3 / 5

ಇಂತಹದೊಂದು ನಿಯಮ ಜಾರಿಗೊಳಿಸಲು ಮುಖ್ಯ ಕಾರಣ, ಕೆಲ ಆಟಗಾರರು ಆಯ್ಕೆಯಾದರೂ ಐಪಿಎಲ್ ಆರಂಭದ ವೇಳೆ ಹಿಂದೆ ಸರಿಯುತ್ತಿರುವುದು. ವಿದೇಶಿ ಆಟಗಾರರ ಇಂತಹ ನಡೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬಿಸಿಸಿಐ ಹೊಸ ನಿಯಮವನ್ನು ಪರಿಚಯಿಸಿದೆ.

4 / 5

ಅದರಂತೆ ಈ ಬಾರಿಯ ಐಪಿಎಲ್​ನ ಮೆಗಾ ಹರಾಜಿನಲ್ಲಿ ಕಾಣಿಸಿಕೊಂಡಿದ್ದ ಹ್ಯಾರಿ ಬ್ರೂಕ್ ಅವರನ್ನು ಡೆಲ್ಲಿ ಕ್ಯಾಪಿಟಲ್ಸ್ ಫ್ರಾಂಚೈಸಿ ಬರೋಬ್ಬರಿ 6.25 ಕೋಟಿ ರೂ.ಗೆ ಖದೀಸಿತ್ತು. ಇದೀಗ ಟೂರ್ನಿ ಆರಂಭಕ್ಕೆ ದಿನಗಳು ಮಾತ್ರ ಉಳಿದಿರುವಾಗ ಬ್ರೂಕ್ ಐಪಿಎಲ್​ನಿಂದ ಹಿಂದೆ ಸರಿದಿದ್ದಾರೆ.

5 / 5

ಹೀಗಾಗಿ ಹ್ಯಾರಿ ಬ್ರೂಕ್ ಇನ್ನು ಎರಡು ವರ್ಷಗಳ ಕಾಲ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವಂತಿಲ್ಲ. ಅದರಂತೆ ಐಪಿಎಲ್ 2026 ಮತ್ತು 2027 ರ ಹರಾಜಿಗೆ ಇಂಗ್ಲೆಂಡ್ ಆಟಗಾರನನ್ನು ಪರಿಣಿಸಲಾಗುವುದಿಲ್ಲ ಎಂದು ತಿಳಿದು ಬಂದಿದೆ. ಹಾಗಾಗಿ ಹ್ಯಾರಿ ಬ್ರೂಕ್ ಮತ್ತೆ ಐಪಿಎಲ್ ಆಡಬೇಕೆಂದರೆ 2028 ರವರೆಗೆ ಕಾಯಲೇಬೇಕು.

Loading...
Unable to load recommendations.
Follow Us