AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಭರ್ಜರಿ ಸಿಕ್ಸ್, 9 ಫೋರ್​: ದಾಖಲೆಯ ಸೆಂಚುರಿ ಸಿಡಿಸಿದ ಹ್ಯಾರಿ ಬ್ರೂಕ್

Harry Brook Century: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಬ್ರೂಕ್ 101 ಎಸೆತಗಳಲ್ಲಿ 11 ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಬರೋಬ್ಬರಿ 135 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 26, 2025 | 11:24 AM

Share
ಇಂಗ್ಲೆಂಡ್ ತಂಡದ ನಾಯಕ ಹ್ಯಾರಿ ಬ್ರೂಕ್ (Harry Brook) ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಮೌಂಟ್ ಮೌಂಗನುಯಿನ ಬೇ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದರು.

1 / 6
ಅದರಂತೆ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 33 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಇಂಗ್ಲೆಂಡ್ ತಂಡಕ್ಕೆ ಹ್ಯಾರಿ ಬ್ರೂಕ್ ಆಸರೆಯಾಗಿ ನಿಂತರು. ಅದು ಕೂಡ ಸಿಡಿಲಬ್ಬರದ ಬ್ಯಾಟಿಂಗ್​ನೊಂದಿಗೆ ವಿಶೇಷ.

2 / 6
ಒಂದೆಡೆ ವಿಕೆಟ್ ಪತನಗೊಳ್ಳುತ್ತಿದ್ದರೆ, ಮತ್ತೊಂದೆಡೆ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿ ಹ್ಯಾರಿ ಬ್ರೂಕ್ ನ್ಯೂಝಿಲೆಂಡ್ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಬ್ರೂಕ್​ ಬ್ಯಾಟ್​ನಿಂದ ಕೇವಲ 82 ಎಸೆತಗಳಲ್ಲಿ ಶತಕ ಮೂಡಿಬಂತು. ಈ ಶತಕದ ಬಳಿಕ ಕೂಡ ಆರ್ಭಟ ಮುಂದುವರೆಸಿದ ಬ್ರೂಕ್ ಇಂಗ್ಲೆಂಡ್ ತಂಡದ ಸ್ಕೋರ್ ಅನ್ನು 200ರ ಗಡಿದಾಟಿಸಿದರು.

3 / 6
ಕೊನೆಯ ವಿಕೆಟ್​ವರೆಗೆ ಬ್ಯಾಟ್ ಬೀಸಿದ ಹ್ಯಾರಿ ಬ್ರೂಕ್ 101 ಎಸೆತಗಳಲ್ಲಿ 11 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ 135 ರನ್​ ಬಾರಿಸಿದರು. ಈ ಭರ್ಜರಿ ಶತಕದ ನೆರವಿನೊಂದಿಗೆ ಇಂಗ್ಲೆಂಡ್ ತಂಡವು 35.2 ಓವರ್​ಗಳಲ್ಲಿ 223 ರನ್​ಗಳಿಸಿ ಆಲೌಟ್ ಆಯಿತು. ಇನ್ನು ಈ ಭರ್ಜರಿ ಶತಕದೊಂದಿಗೆ ಬ್ರೂಕ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡರು.

4 / 6
ಅಂದರೆ ಈ ಪಂದ್ಯದಲ್ಲಿ ಇಂಗ್ಲೆಂಡ್​ ಕಲೆಹಾಕಿದ್ದು 223 ರನ್​ಗಳು. ಇದರಲ್ಲಿ ಹ್ಯಾರಿ ಬ್ರೂಕ್​ ಬ್ಯಾಟ್​ನಿಂದ ಮೂಡಿಬಂದ ಸ್ಕೋರ್ 135 ರನ್​​ಗಳು. ಈ ಮೂಲಕ ಇಂಗ್ಲೆಂಡ್ ಏಕದಿನ ಕ್ರಿಕೆಟ್​ ಇತಿಹಾಸದಲ್ಲೇ ಒಟ್ಟು ಸ್ಕೋರ್​ನ 60.53% ರನ್​ಗಳಿಸಿದ ಮೊದಲ ನಾಯಕನೆಂಬ ದಾಖಲೆ ಬ್ರೂಕ್ ಪಾಲಾಯಿತು.

5 / 6
ಅಷ್ಟೇ ಅಲ್ಲದೆ ನ್ಯೂಝಿಲೆಂಡ್ ವಿರುದ್ಧ ಕಿವೀಸ್ ನಾಡಿನಲ್ಲಿ ಗರಿಷ್ಠ ಸ್ಕೋರ್​ಗಳಿಸಿದ ಆಂಗ್ಲ ನಾಯಕನೆಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡರು. ಇದರ ಜೊತೆಗೆ ನ್ಯೂಝಿಲೆಂಡ್ ವಿರುದ್ಧ ಏಕದಿನ ಪಂದ್ಯವೊಂದರಲ್ಲಿ 11 ಸಿಕ್ಸ್ ಸಿಡಿಸಿದ ಇಂಗ್ಲೆಂಡ್​ನ ಮೊದಲ ಕ್ಯಾಪ್ಟನ್ ಎಂಬ ದಾಖಲೆಯನ್ನು ಕೂಡ ನಿರ್ಮಿಸಿದ್ದಾರೆ. ಒಟ್ಟಿನಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಹ್ಯಾರಿ ಬ್ರೂಕ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ