AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AFG: ಕೊನೆಯ ಏಕದಿನ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಕ್ಕೆ ಯುವ ವೇಗಿಯ ಆಗಮನ

India vs Afghanistan ODI: ಗಾಯದಿಂದ ಚೇತರಿಸಿಕೊಂಡ ಯುವ ವೇಗಿ ಹರ್ಷಿತ್ ರಾಣಾ ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಸೇರಿದ್ದಾರೆ. ಚೆನ್ನೈನಲ್ಲಿ ನಡೆಯುವ ಈ ಪಂದ್ಯದಲ್ಲಿ ಅವರು ಆಡುವ ಸಾಧ್ಯತೆ ಇದೆ. ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಮುನ್ನ ತಮ್ಮ ಲಯ ಕಂಡುಕೊಳ್ಳಲು ಹರ್ಷಿತ್‌ಗೆ ಇದು ಉತ್ತಮ ಅವಕಾಶ. ಜನವರಿ 2026 ರಿಂದ ಯಾವುದೇ ಅಂತರರಾಷ್ಟ್ರೀಯ ಪಂದ್ಯಗಳನ್ನು ಅವರು ಆಡಿರಲಿಲ್ಲ.

ಪೃಥ್ವಿಶಂಕರ
|

Updated on: Jun 19, 2026 | 6:49 PM

Share
ಅಫ್ಘಾನಿಸ್ತಾನ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾ ಅದ್ಭುತ ಪ್ರದರ್ಶನ ನೀಡಿದೆ. ಮೊದಲ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ, ಟೀಂ ಇಂಡಿಯಾ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ. ಇದೀಗ ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ಜೂನ್ 20 ರಂದು ಚೆನ್ನೈನ ಐತಿಹಾಸಿಕ ಎಂ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 5
ಈ ಪಂದ್ಯಕ್ಕೂ ಮುನ್ನ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ ಎಂದು ಬಿಸಿಸಿಐ ಪ್ರಕಟಿಸಿದೆ. ಗಾಯದಿಂದಾಗಿ ಕ್ರಿಕೆಟ್​ನಿಂದ ದೂರ ಉಳಿದಿದ್ದ ಹರ್ಷಿತ್, ಬೆಂಗಳೂರಿನ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್​ನಲ್ಲಿ ಪುನರ್ವಸತಿಗೆ ಒಳಗಾಗಿದ್ದರು. ಗಾಯದಿಂದ ಚೇತರಿಸಿಕೊಂಡ ನಂತರ ಫಿಟ್ನೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಹರ್ಷಿತ್, ಚೆನ್ನೈನಲ್ಲಿ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ವಾಸ್ತವವಾಗಿ ಗಾಯದಿಂದಾಗಿ ಹರ್ಷಿತ್ ರಾಣಾ ಜನವರಿ 2026 ರಿಂದ ಯಾವುದೇ ಅಂತರರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಗಾಯದಿಂದಾಗಿ ಅವರು 2026 ರ ಐಪಿಎಲ್ ಅನ್ನು ಸಹ ತಪ್ಪಿಸಿಕೊಂಡಿದ್ದರು. ಇದೀಗ ಸಂಪೂರ್ಣವಾಗಿ ಚೇತರಿಸಿಕೊಂಡಿರುವ ಹರ್ಷಿತ್, ಅಫ್ಘಾನಿಸ್ತಾನ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿವೆ.

3 / 5
ಅಲ್ಲದೆ ಐರ್ಲೆಂಡ್ ಮತ್ತು ಇಂಗ್ಲೆಂಡ್ ಪ್ರವಾಸಗಳಿಗೆ ಭಾರತ ಟಿ20 ತಂಡದಲ್ಲೂ ಹರ್ಷಿತ್ ರಾಣಾ ಅವರನ್ನು ಆಯ್ಕೆ ಮಾಡಲಾಗಿದೆ. ಈ ಪ್ರಮುಖ ಸರಣಿಗೂ ಮುಂಚಿತವಾಗಿ ಹರ್ಷಿತ್ ತಮ್ಮ ಲಯ ಕಂಡುಕೊಳ್ಳಲು ಇದು ಉತ್ತಮ ಅವಕಾಶವಾಗಿದೆ. ರಾಣಾ ಇದುವರೆಗೆ ಟೀಂ ಇಂಡಿಯಾ ಪರ 14 ಏಕದಿನ ಪಂದ್ಯಗಳನ್ನು ಆಡಿದ್ದು, ಒಟ್ಟು 26 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

4 / 5
ಮೂರನೇ ಏಕದಿನ ಪಂದ್ಯಕ್ಕೆ ಟೀಂ ಇಂಡಿಯಾ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಪ್ರಸಿದ್ಧ್ ಕೃಷ್ಣ, ಪ್ರಿನ್ಸ್ ಯಾದವ್, ಗುರ್ನೂರ್ ಬ್ರಾರ್, ಹರ್ಷ್ ದುಬೆ, ಯಶಸ್ವಿ ಜೈಸ್ವಾಲ್, ಹರ್ಷಿತ್ ರಾಣಾ.

5 / 5
Follow Us
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ

‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು

ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು

ಕೊಚ್ಚಿಹೋದ ದುಧಿಯಾ ಸೇತುವೆ; ಡಾರ್ಜಿಲಿಂಗ್-ಸಿಲಿಗುರಿ ಸಂಪರ್ಕ ಸಂಪೂರ್ಣ ಕಡಿತ

ಪರಿಷತ್​​ ಚುನಾವಣೆ: ಜೆಡಿಎಸ್​​ ಶಾಸಕರ ಅಡ್ಡ ಮತದಾನದ ಹಿಂದಿದೆ ಹಲವು ಕಾರಣ

ಮೈತ್ರಿ ಕುಸ್ತಿ? ರೇವಣ್ಣಗೆ ಮಾತಾಡೋ ಅಧಿಕಾರವಿಲ್ಲ: ಅಶೋಕ್ ತಿರುಗೇಟು

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿ.ಕೆ. ಶಿವಕುಮಾರ್

ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆ ಬಂದ್​​ ಮಾಡಿ ಪ್ರತಿಭಟನೆ

ಮೊಬೈಲ್ ಕಸಿದು ಪರಾರಿಯಾಗಲು ಯತ್ನಿಸಿದವ‌ ಕ್ಷಣ ಮಾತ್ರದಲ್ಲಿ ಸಾವು!

ನೀಟ್ ಪರೀಕ್ಷೆಗೆ ಇನ್ನೊಂದೇ ದಿನ ಬಾಕಿ; ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ