- Kannada News Photo gallery Cricket photos Heinrich Klaasen Captain South Africa for T20I series vs Pakistan
ಸೌತ್ ಆಫ್ರಿಕಾ ತಂಡಕ್ಕೆ ಹೆನ್ರಿಕ್ ಕ್ಲಾಸೆನ್ ಕ್ಯಾಪ್ಟನ್
South Africa vs Pakistan: ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ನಡುವಣ ಟಿ20 ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳು ನಡೆಯಲಿದೆ. ಮೊದಲ ಮ್ಯಾಚ್ ಡರ್ಬನ್ನಲ್ಲಿ ನಡೆದರೆ ಎರಡನೇ ಪಂದ್ಯವು ಡಿ.13 ರಂದು ಸೆಂಚುರಿಯನ್ನಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಜೋಹಾನ್ಸ್ಬರ್ಗ್ ಆತಿಥ್ಯವಹಿಸಲಿದೆ.
Updated on: Dec 05, 2024 | 11:58 AM

ಪಾಕಿಸ್ತಾನ್ ವಿರುದ್ಧದ ಟಿ20 ಸರಣಿಗಾಗಿ ಸೌತ್ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡವನ್ನು ಸ್ಪೋಟಕ ದಾಂಡಿಗ ಹೆನ್ರಿಕ್ ಕ್ಲಾಸೆನ್ ಮುನ್ನಡೆಸಲಿರುವುದು ವಿಶೇಷ. ಸೌತ್ ಆಫ್ರಿಕಾ ಟಿ20 ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಈ ಸರಣಿಗೆ ಅಲಭ್ಯರಾಗಿದ್ದಾರೆ.

ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಕಣಕ್ಕಿಳಿಯುತ್ತಿರುವ ಐಡೆನ್ ಮಾರ್ಕ್ರಾಮ್ ಅನುಪಸ್ಥಿತಿಯಲ್ಲಿ ಕ್ಲಾಸೆನ್ ಸೌತ್ ಆಫ್ರಿಕಾ ಟಿ20 ತಂಡದ ಹಂಗಾಮಿ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹಾಗೆಯೇ ಟೆಸ್ಟ್ ತಂಡದಲ್ಲಿರುವ ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ ಮತ್ತು ಟ್ರಿಸ್ಟಾನ್ ಸ್ಟಬ್ಸ್ ಕೂಡ ಪಾಕ್ ವಿರುದ್ಧದ ಟಿ20 ಸರಣಿಗೆ ಅಲಭ್ಯರಾಗಲಿದ್ದಾರೆ.

ಸೌತ್ ಆಫ್ರಿಕಾ ಮತ್ತು ಪಾಕಿಸ್ತಾನ್ ನಡುವಣ ಟಿ20 ಸರಣಿಯು ಡಿಸೆಂಬರ್ 10 ರಿಂದ ಶುರುವಾಗಲಿದೆ. ಈ ಸರಣಿಯಲ್ಲಿ ಒಟ್ಟು ಮೂರು ಪಂದ್ಯಗಳನ್ನಾಡಲಿದ್ದು, ಮೊದಲ ಮ್ಯಾಚ್ ಡರ್ಬನ್ನಲ್ಲಿ ನಡೆದರೆ ಎರಡನೇ ಪಂದ್ಯವು ಡಿ.13 ರಂದು ಸೆಂಚುರಿಯನ್ನಲ್ಲಿ ನಡೆಯಲಿದೆ. ಹಾಗೆಯೇ ಮೂರನೇ ಪಂದ್ಯವು ಜೋಹಾನ್ಸ್ಬರ್ಗ್ನಲ್ಲಿ ಡಿಸೆಂಬರ್ 14 ರಂದು ಜರುಗಲಿದೆ. ಈ ಸರಣಿಗಾಗಿ ಉಭಯ ತಂಡಗಳು ಈ ಕೆಳಗಿನಂತಿದೆ...

ಸೌತ್ ಆಫ್ರಿಕಾ ಟಿ20 ತಂಡ: ಹೆನ್ರಿಕ್ ಕ್ಲಾಸೆನ್ (ನಾಯಕ), ಒಟ್ನೀಲ್ ಬಾರ್ಟ್‌ಮ್ಯಾನ್, ಮ್ಯಾಥ್ಯೂ ಬ್ರೀಟ್ಝ್ಕ್, ಡೊನೊವನ್ ಫೆರೀರಾ, ರೀಝ ಹೆಂಡ್ರಿಕ್ಸ್, ಪ್ಯಾಟ್ರಿಕ್ ಕ್ರುಗರ್, ಜಾರ್ಜ್ ಲಿಂಡೆ, ಕ್ವೆನಾ ಮಫಕಾ, ಡೇವಿಡ್ ಮಿಲ್ಲರ್, ಆನ್ರಿಕ್ ನೋಕಿಯಾ, ಎನ್‌ಕಾಬಾ ಪೀಟರ್, ರಿಯಾನ್ ರಿಕೆಲ್ಟನ್, ತಬ್ರೇಝ್ ಶಮ್ಸಿ, ಆಂಡಿಲ್ ಸಿಮೆಲೇನ್, ಮತ್ತು ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್.

ಪಾಕಿಸ್ತಾನ್ ಟಿ20 ತಂಡ: ಮೊಹಮ್ಮದ್ ರಿಝ್ವಾನ್ (ನಾಯಕ), ಅಬ್ರಾರ್ ಅಹ್ಮದ್, ಬಾಬರ್ ಆಝಂ, ಹ್ಯಾರಿಸ್ ರೌಫ್, ಜಹಂದಾದ್ ಖಾನ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಹಸ್ನೇನ್, ಮುಹಮ್ಮದ್ ಇರ್ಫಾನ್ ಖಾನ್, ಒಮೈರ್ ಬಿನ್ ಯೂಸುಫ್, ಸೈಮ್ ಅಯ್ಯೂಬ್, ಸಲ್ಮಾನ್ ಅಲಿ ಅಘಾ, ಸೂಫಿಯಾನ್ ಮುಖೀಮ್, ಶಾಹೀನ್ ಅಫ್ರಿದಿ, ತಯ್ಯಬ್ ತಾಹಿರ್ ಮತ್ತು ಉಸ್ಮಾನ್ ಖಾನ್ (ವಿಕೆಟ್ ಕೀಪರ್)
