ಕ್ಲಾಸೆನ್ ಕ್ಲಾಸ್ಗೆ ಹಳೆಯ ದಾಖಲೆ ಧೂಳೀಪಟ
Heinrich Klaasen Records: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ರಿಷಭ್ ಪಂತ್ ಬರೆದಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ. ಈ ದಾಖಲೆಯೊಂದಿಗೆ ಕ್ಲಾಸೆನ್ ಕ್ಲಾಸ್ ರೆಕಾರ್ಡ್ ನಿರ್ಮಿಸಿದ್ದಾರೆ.
Updated on: May 23, 2026 | 10:01 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಹೆನ್ರಿಕ್ ಕ್ಲಾಸೆನ್ (Heinrich Klaasen) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಲ್ಕನೇ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಈ ಭರ್ಜರಿ ಪ್ರದರ್ಶನದೊಂದಿಗೆ ಕ್ಲಾಸೆನ್ ಈ ಬಾರಿಯ ಐಪಿಎಲ್ನಲ್ಲಿ 600+ ರನ್ ಕಲೆಹಾಕಿದ್ದಾರೆ. (PC: IPL)

ಹೈದರಾಬಾದ್ನ ರಾಜೀವ್ ಗಾಂಧಿ ಇಂಟರ್ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 51 ರನ್ ಬಾರಿಸಿದ್ದರು. (PC: IPL)

ಈ ಐವತ್ತೊಂದು ರನ್ಗಳೊಂದಿಗೆ ಹೆನ್ರಿಕ್ ಕ್ಲಾಸೆನ್ ಈ ಬಾರಿಯ ಐಪಿಎಲ್ನಲ್ಲಿ ಒಟ್ಟು 600 ರನ್ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 600+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ಕ್ಲಾಸೆನ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿದಿದ್ದ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 579 ರನ್ ಬಾರಿಸಿದ್ದರು. ಈ ಮೂಲಕ ಐಪಿಎಲ್ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 550+ ರನ್ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು. (PC: IPL)

ಇದೀಗ ಈ ಎಲ್ಲಾ ದಾಖಲೆಗಳನ್ನು ಹೆನ್ರಿಕ್ ಕ್ಲಾಸೆನ್ ಅಳಿಸಿ ಹಾಕಿದ್ದಾರೆ. ಈ ಬಾರಿಯ ಐಪಿಎಲ್ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ 4ನೇ ಕ್ರಮಾಂಕದಲ್ಲಿ 14 ಇನಿಂಗ್ಸ್ ಆಡಿರುವ ಕ್ಲಾಸೆನ್ ಒಟ್ಟು 606 ರನ್ ಕಲೆಹಾಕಿದ್ದಾರೆ. ಈ ಮೂಲಕ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಐಪಿಎಲ್ನಲ್ಲಿ 600+ ರನ್ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




