AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಲಾಸೆನ್ ಕ್ಲಾಸ್​ಗೆ ಹಳೆಯ ದಾಖಲೆ ಧೂಳೀಪಟ

Heinrich Klaasen Records: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡದ ಸ್ಫೋಟಕ ಬ್ಯಾಟರ್ ಹೆನ್ರಿಕ್ ಕ್ಲಾಸೆನ್ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಅದು ಕೂಡ 8 ವರ್ಷಗಳ ಹಿಂದೆ ರಿಷಭ್ ಪಂತ್ ಬರೆದಿದ್ದ ಭರ್ಜರಿ ದಾಖಲೆಯನ್ನು ಅಳಿಸಿ ಹಾಕುವ ಮೂಲಕ. ಈ ದಾಖಲೆಯೊಂದಿಗೆ ಕ್ಲಾಸೆನ್ ಕ್ಲಾಸ್ ರೆಕಾರ್ಡ್ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: May 23, 2026 | 10:01 AM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಹೆನ್ರಿಕ್ ಕ್ಲಾಸೆನ್ (Heinrich Klaasen) ಹೊಸ ಇತಿಹಾಸ ಬರೆದಿದ್ದಾರೆ. ಅದು ಕೂಡ ನಾಲ್ಕನೇ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಈ ಭರ್ಜರಿ ಪ್ರದರ್ಶನದೊಂದಿಗೆ ಕ್ಲಾಸೆನ್ ಈ ಬಾರಿಯ ಐಪಿಎಲ್​ನಲ್ಲಿ 600+ ರನ್ ಕಲೆಹಾಕಿದ್ದಾರೆ. (PC: IPL)

1 / 5
ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆದ ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ 24 ಎಸೆತಗಳಲ್ಲಿ 5 ಭರ್ಜರಿ ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ 51 ರನ್ ಬಾರಿಸಿದ್ದರು.  (PC: IPL)

2 / 5
ಈ ಐವತ್ತೊಂದು ರನ್​ಗಳೊಂದಿಗೆ ಹೆನ್ರಿಕ್ ಕ್ಲಾಸೆನ್ ಈ ಬಾರಿಯ ಐಪಿಎಲ್​ನಲ್ಲಿ ಒಟ್ಟು 600 ರನ್​ ಪೂರೈಸಿದ್ದಾರೆ. ಈ ಮೂಲಕ ಐಪಿಎಲ್​ ಇತಿಹಾಸದಲ್ಲೇ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 600+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎಂಬ ಭರ್ಜರಿ ದಾಖಲೆಯನ್ನು ಕ್ಲಾಸೆನ್ ತಮ್ಮದಾಗಿಸಿಕೊಂಡಿದ್ದಾರೆ. (PC: IPL)

3 / 5
ಇದಕ್ಕೂ ಮುನ್ನ ಈ ದಾಖಲೆ ರಿಷಭ್ ಪಂತ್ ಹೆಸರಿನಲ್ಲಿತ್ತು. 2018 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್​ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿದಿದ್ದ ಪಂತ್ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ 579 ರನ್​ ಬಾರಿಸಿದ್ದರು. ಈ ಮೂಲಕ ಐಪಿಎಲ್​ನಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ ಮಾಡಿ 550+ ರನ್​ ಗಳಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದರು. (PC: IPL)

4 / 5
ಇದೀಗ ಈ ಎಲ್ಲಾ ದಾಖಲೆಗಳನ್ನು ಹೆನ್ರಿಕ್ ಕ್ಲಾಸೆನ್ ಅಳಿಸಿ ಹಾಕಿದ್ದಾರೆ. ಈ ಬಾರಿಯ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ 4ನೇ ಕ್ರಮಾಂಕದಲ್ಲಿ 14 ಇನಿಂಗ್ಸ್​ ಆಡಿರುವ ಕ್ಲಾಸೆನ್ ಒಟ್ಟು 606 ರನ್ ಕಲೆಹಾಕಿದ್ದಾರೆ. ಈ ಮೂಲಕ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಐಪಿಎಲ್​ನಲ್ಲಿ 600+ ರನ್​ ಗಳಿಸಿದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. (PC: IPL)

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?

11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು

ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ

ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ

ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ

ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು

'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ

‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು

ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್

ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ