6,6,6,6,6,6: ಸಿಡಿಲಬ್ಬರದ ಅರ್ಧಶತಕ ಸಿಡಿಸಿ ದಾಖಲೆ ಬರೆದ ಕ್ಲಾಸೆನ್
TV9 Web | Updated By: ಝಾಹಿರ್ ಯೂಸುಫ್
Updated on:
Jan 29, 2024 | 1:04 PM
Heinrich Klaasen: ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಡರ್ಬನ್ ಸೂಪರ್ ಜೈಂಟ್ಸ್ ತಂಡದ ಪರ ಆಡುತ್ತಿರುವ ಹೆನ್ರಿಕ್ ಕ್ಲಾಸೆನ್ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಪರ ಕಣಕ್ಕಿಳಿಯಲಿದ್ದಾರೆ.
1 / 7
ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಹೆನ್ರಿಕ್ ಕ್ಲಾಸೆನ್ ಹೊಸ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ ಅರ್ಧಶತಕ ಸಿಡಿಸುವ ಮೂಲಕ ಎಂಬುದು ವಿಶೇಷ. ಈ ಟೂರ್ನಿಯ 22ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಡರ್ಬನ್ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು.
2 / 7
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ತಂಡಕ್ಕೆ ಮ್ಯಾಥ್ಯೂ ಬ್ರೀಟ್ಝ್ಕ್ ಸ್ಪೋಟಕ ಆರಂಭ ಒದಗಿಸಿದ್ದರು. 43 ಎಸೆತಗಳನ್ನು ಎದುರಿಸಿದ ಮ್ಯಾಥ್ಯೂ 6 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 78 ರನ್ ಬಾರಿಸಿದರು.
3 / 7
ಇನ್ನು 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಹೆನ್ರಿಕ್ ಕ್ಲಾಸೆನ್ ತೂಫಾನ್ ಬ್ಯಾಟಿಂಗ್ ಪ್ರದರ್ಶಿಸಿದರು. ಡೆತ್ ಓವರ್ಗಳಲ್ಲಿ ಪಾರ್ಲ್ ರಾಯಲ್ಸ್ ಬೌಲರ್ಗಳ ಬೆಂಡೆತ್ತಿದ ಕ್ಲಾಸೆನ್ ಸಿಕ್ಸ್ಗಳ ಸುರಿಮಳೆಗೈದರು. ಮೈದಾನದ ಮೂಲೆ ಮೂಲೆಗೂ ಒಟ್ಟು 6 ಸಿಕ್ಸ್ ಸಿಡಿಸಿದ ಕ್ಲಾಸೆನ್ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
4 / 7
ಈ ಅರ್ಧಶತಕದೊಂದಿಗೆ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಅತೀ ವೇಗವಾಗಿ ಹಾಫ್ ಸೆಂಚುರಿ ಸಿಡಿಸಿದ ದಾಖಲೆ ಹೆನ್ರಿಕ್ ಕ್ಲಾಸೆನ್ ಪಾಲಾಯಿತು. ಇದಕ್ಕೂ ಮುನ್ನ ಈ ದಾಖಲೆ ಡೊನೊವನ್ ಫೆರೆರಾ ಹೆಸರಿನಲ್ಲಿತ್ತು.
5 / 7
ಜೋಬರ್ಗ್ ಸೂಪರ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಡೊನೊವನ್ ಫೆರೆರಾ ಪಾರ್ಲ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ 3 ಸಿಕ್ಸ್ ಹಾಗೂ 7 ಫೋರ್ಗಳೊಂದಿಗೆ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ದಾಖಲೆ ನಿರ್ಮಿಸಿದ್ದರು.
6 / 7
ಇದೀಗ ಕೇವಲ 16 ಎಸೆತಗಳಲ್ಲಿ ಅರ್ಧಶತಕ ಸಿಡಿಸುವ ಮೂಲಕ ಹೆನ್ರಿಕ್ ಕ್ಲಾಸೆನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿ 17 ಎಸೆತಗಳನ್ನು ಎದುರಿಸಿದ ಕ್ಲಾಸೆನ್ 2 ಫೋರ್ ಹಾಗೂ 6 ಸಿಕ್ಸ್ಗಳೊಂದಿಗೆ 50 ರನ್ ಬಾರಿಸಿದ್ದರು. ಈ ಅರ್ಧಶತಕದ ನೆರವಿನಿಂದ ಡರ್ಬನ್ ಸೂಪರ್ ಜೈಂಟ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಿತು.
7 / 7
ಈ ಗುರಿಯನ್ನು ಬೆನ್ನತ್ತಿದ ಪಾರ್ಲ್ ರಾಯಲ್ಸ್ ತಂಡವು ಯುವ ಸ್ಪಿನ್ನರ್ ನೂರ್ ಅಹ್ಮದ್ (5/11) ಸ್ಪಿನ್ ದಾಳಿಗೆ ತತ್ತರಿಸಿತು. ಪರಿಣಾಮ 13.2 ಓವರ್ಗಳಲ್ಲಿ ಕೇವಲ 83 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ ತಂಡ 125 ರನ್ಗಳ ಭರ್ಜರಿ ಜಯ ಸಾಧಿಸಿದೆ.