IND vs AUS, WTC Final: ಭಾರತ-ಆಸ್ಟ್ರೇಲಿಯಾ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮೊದಲ ದಿನದಾಟ ಹೇಗಿತ್ತು ನೋಡಿ?
India vs Australia Final: ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.
1 / 7
ಲಂಡನ್ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಆರಂಭವಾಗಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ನಲ್ಲಿ ಮೊದಲ ದಿನ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಯಶಸ್ಸು ಸಾಧಿಸಿದೆ. ಪಿಚ್ ಮರ್ಮವನ್ನು ಅರಿತು ಭಾರತೀಯ ಬೌಲರ್ಗಳನ್ನು ದಿಟ್ಟವಾಗಿ ಎದುರಿಸಿದ ಕಾಂಗರೂ ಪಡೆ ಮೊದಲ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 327 ರನ್ ಕಲೆಹಾಕಿ ದೊಡ್ಡ ಮೊತ್ತದ ಮುನ್ಸೂಚನೆ ನೀಡಿದೆ.
2 / 7
ಟ್ರಾವಿಸ್ ಹೆಡ್ ಸ್ಫೋಟಕ ಶತಕ ಸಿಡಿಸಿ ಕ್ರೀಸ್ನಲ್ಲಿದ್ದರೆ ಸ್ಟೀವ್ ಸ್ಮಿತ್ ಶತಕದ ಅಂಚಿನಲ್ಲಿದ್ದಾರೆ. ಇಂದು ದ್ವಿತೀಯ ದಿನದಾಟ ಉಭಯ ತಂಡಗಳಿಗೆ ಮುಖ್ಯವಾಗಿದೆ.
3 / 7
ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ಕಾಂಗರೂ ಪಡೆಗೆ ಉತ್ತಮ ಆರಂಭ ಸಿಗಲಿಲ್ಲ. 4ನೇ ಓವರ್ನ ಮೊಹಮ್ಮದ್ ಸಿರಾಜ್ ಬೌಲಿಂಗ್ನಲ್ಲಿ ಉಸ್ಮಾನ್ ಖ್ವಾಜಾ ಸೊನ್ನೆಗೆ ನಿರ್ಗಮಿಸಿದರು. ಈ ಸಂದರ್ಭ ಜೊತೆಯಾದ ಡೇವಿಡ್ ವಾರ್ನರ್ ಹಾಗೂ ಮಾರ್ನಸ್ ಲಾಬುಶೇನ್ 69 ರನ್ಗಳ ಜೊತೆಯಾಟ ಆಡಿದರಷ್ಟೆ.
4 / 7
ಮಾರ್ನಸ್ 62 ಎಸೆತಗಳಲ್ಲಿ 26 ರನ್ ಗಳಿಸಿ ಶಮಿ ಬೌಲಿಂಗ್ನಲ್ಲಿ ಬೌಲ್ಡ್ ಆದರೆ, ವಾರ್ನರ್ 60 ಎಸೆತಗಳಲ್ಲಿ 43 ರನ್ ಬಾರಿಸಿ ಶಾರ್ದೂಲ್ ಥಾಕೂರ್ಗೆ ವಿಕೆಟ್ ಒಪ್ಪಿಸಿದರು.
5 / 7
ನಂತರ ಶುರುವಾಗಿದ್ದು ಸ್ಟೀವ್ ಸ್ಮಿತ್ ಹಾಗೂ ಟ್ರಾವಿಸ್ ಹೆಡ್ ಆಟ. ಆಕ್ರಮಣಕಾರಿ ಆಟದ ಮೂಲಕ ಆರಂಭದಿಂದಲೇ ಭಾರತಕ್ಕೆ ಎಚ್ಚರಿಕೆ ನೀಡಿದ ಹೆಡ್ ಅವರನ್ನು ಕಟ್ಟಿಹಾಕಲು ರೋಹಿತ್ ನಡೆಸಿದ ಪ್ರಯತ್ನಗಳೆಲ್ಲಾ ವಿಫಲವಾದವು.
6 / 7
ಹೆಡ್ (146) ಅವರಿಗೆ ಉತ್ತಮವಾಗಿ ಸಾಥ್ ನೀಡಿದ್ದು ಅನುಭವಿ ಆಟಗಾರ ಸ್ಟೀವ್ ಸ್ಮಿತ್ (95). ಈ ಜೋಡಿ ಈಗಾಗಲೇ ದ್ವಿಶತಕದ ಜೊತೆಯಾಟದಲ್ಲಿ ಭಾಗಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ದಿನದಾಟದಲ್ಲಿ ದೊಡ್ಡ ಹಿನ್ನಡೆ ಅನುಭವಿಸಿದಂತಾಗಿದೆ.
7 / 7
ನಾಲ್ಕನೇ ವಿಕೆಟ್ಗೆ ಹಡ್-ಸ್ಮಿತ್ 370 ಬಾಲ್ಗಳಲ್ಲಿ 251 ರನ್ಗಳ ಭರ್ಜರಿ ಜೊತೆಯಾಟ ನೀಡಿದರು. ಇಂಡಿಯಾ ಪರ ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ತಲಾ ಒಂದು ವಿಕೆಟ್ ಪಡೆದಿದ್ದಾರೆ.