ಆಸ್ಟ್ರೇಲಿಯಾದಲ್ಲಿ ನಡೆದ ಟಿ20 ವಿಶ್ವಕಪ್‌ಗೆ ಅದ್ಧೂರಿ ತೆರೆಬಿದ್ದಿದೆ. ಫೈನಲ್ನಲ್ಲಿ ಪಾಕಿಸ್ತಾನವನ್ನು ಮಣಿಸುವುದರೊಂದಿಗೆ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕಳೆದ ಎಲ್ಲಾ ಸೀಸನ್ಗಳಿಗಿಂತ ಈ ಸೀಸನ್ ಹಲವು ವಿಚಾರಗಳಲ್ಲಿ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನೇ ನೀಡಿತು. ಈ ಟೂರ್ನಿಯಲ್ಲಿ ಹಲವು ಕ್ರಿಕೆಟಿಗರು ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹಲವು ದಾಖಲೆಗಳನ್ನು ಬರೆದರು. ಅದರಲ್ಲೂ ಬ್ಯಾಟಿಂಗ್ನಲ್ಲಿ ತಮ್ಮ ಪರಾಕ್ರಮ ತೋರಿದ ಬ್ಯಾಟ್ಸ್ಮನ್ಗಳು ಬೌಂಡರಿ ಸಿಕ್ಸರ್ಗಳ ಮಳೆಯನ್ನೇ ಸುರಿಸಿದರು. ಅಂತಹವರಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಟಾಪ್ 5 ಆಟಗಾರರು ಯಾರು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ