IND vs BAN: ಪ್ರಧಾನಿಗೆ ರಕ್ತದಲ್ಲಿ ಪತ್ರ; ಭಾರತ- ಬಾಂಗ್ಲಾ ಟಿ20 ಪಂದ್ಯ ನಡೆಯುವುದು ಅನುಮಾನ

|

Updated on: Aug 19, 2024 | 4:54 PM

IND vs BAN: ಅಕ್ಟೋಬರ್ 6 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೊದಲ ಟಿ20 ಪಂದ್ಯ ನಡೆಯಬೇಕಿದೆ. ಆದರೆ ಈ ಪಂದ್ಯಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಈ ಪಂದ್ಯವನ್ನು ಪ್ರತಿಭಟಿಸಲಾಗುತ್ತಿದೆ ಎಂದು ಸಾಮಾನ್ಯ ಸಭೆ ಹೇಳಿದೆ.

1 / 8
ಪ್ರಸ್ತುತ ಯಾವುದೇ ಸರಣಿಗಳಿಲ್ಲದೆ ವಿಶ್ರಾಂತಿಗೆ ಜಾರಿರುವ ಟೀಂ ಇಂಡಿಯಾ ಮುಂದಿನ ತಿಂಗಳು ಅಂದರೆ, ಸೆಪ್ಟೆಂಬರ್​ನಿಂದ ಮತ್ತೆ ಅಖಾಡಕ್ಕಿಳಿಯಲಿದೆ. ಭಾರತದ ಮೊದಲ ಎದುರಾಳಿಯಾಗಿ ಬಾಂಗ್ಲಾದೇಶ ತಂಡವಿರಲಿದೆ. ಉಭಯ ತಂಡಗಳ ನಡುವೆ ಮೊದಲು ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲ್ಲಿದೆ. ಆ ಬಳಿಕ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದೆ.

2 / 8
ಮೊದಲೆರಡು ಟೆಸ್ಟ್ ಪಂದ್ಯಗಳು ಕ್ರಮವಾಗಿ ಚೆನ್ನೈ ಹಾಗೂ ಕಾನ್ಪುರದಲ್ಲಿ ನಡೆಯಲ್ಲಿವೆ. ಆ ಬಳಿಕ ಆರಂಭವಾಗಲಿರುವ ಮೂರು ಪಂದ್ಯಗಳ ಟಿ20 ಸರಣಿಗೆ  ಮಧ್ಯಪ್ರದೇಶ, ದೆಹಲಿ ಹಾಗೂ ಹೈದರಾಬಾದ್ ಕ್ರೀಡಾಂಗಳು ಆತಿಥ್ಯವಹಿಸಲಿವೆ. ಆದರೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಬೇಕಿದ್ದ ಮೊದಲ ಟಿ20 ಪಂದ್ಯಕ್ಕೆ ವಿರೋಧ ವ್ಯಕ್ತವಾಗುತ್ತಿದೆ.

3 / 8
ವಾಸ್ತವವಾಗಿ ಅಕ್ಟೋಬರ್ 6 ರಂದು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವೆ ಮೊದಲ ಟಿ20 ಪಂದ್ಯ ನಡೆಯಬೇಕಿದೆ. ಆದರೆ ಈ ಪಂದ್ಯಕ್ಕೆ ಅಖಿಲ ಭಾರತ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯದ ವಿರುದ್ಧ ಈ ಪಂದ್ಯವನ್ನು ಪ್ರತಿಭಟಿಸಲಾಗುತ್ತಿದೆ ಎಂದು ಸಾಮಾನ್ಯ ಸಭೆ ಹೇಳಿದೆ.

4 / 8
ಅಖಿಲ ಭಾರತ ಹಿಂದೂ ಮಹಾಸಭಾ, ಬಾಂಗ್ಲಾದೇಶದ ತಂಡದೊಂದಿಗೆ ಭಾರತದ ನೆಲದಲ್ಲಿ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಹಿಂಸಿಸಲಾಗುತ್ತಿದೆ. ಹೀಗಾಗಿ ಈ ಸಂಪೂರ್ಣ ವಿಚಾರದಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕು ಎಂದು ಹಿಂದೂ ಮಹಾಸಭಾ ಆಗ್ರಹಿಸಿದೆ.

5 / 8
ಇಷ್ಟೇ ಅಲ್ಲದೆ ಭಾರತ-ಬಾಂಗ್ಲಾದೇಶ ಕ್ರಿಕೆಟ್ ಪಂದ್ಯಗಳ ಸರಣಿಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಮಹಾಸಭೆಯ ಪದಾಧಿಕಾರಿಗಳು ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂಗಳನ್ನು ಕಗ್ಗೊಲೆ ಮಾಡುತ್ತಿರುವ ಕಾರಣ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಕ್ರಿಕೆಟ್ ಪಂದ್ಯವನ್ನು ವಿರೋಧಿಸಲಾಗುತ್ತಿದೆ ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಜೈವೀರ್ ಭಾರದ್ವಾಜ್ ಹೇಳಿದ್ದಾರೆ.

6 / 8
ಈ ಬಗ್ಗೆ ಮಾತನಾಡಿರುವ ಹಿಂದೂ ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಡಾ.ಜೈವೀರ್ ಭಾರದ್ವಾಜ್, ಯುವಕರನ್ನು ಲೂಟಿ ಮಾಡಿ ಅಲ್ಲಿಂದ ಓಡಿಸಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಹಿಂದೂಗಳ ಮನೆಗಳಿಗೆ ಬೆಂಕಿ ಹಚ್ಚಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ನಮ್ಮ ದೇಶದ ಕ್ರಿಕೆಟ್ ತಂಡ ಇಂತಹ ಭಾವನೆಗಳಿರುವ ದೇಶದ ತಂಡದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು.

7 / 8
ಹೀಗಾಗಿ ಪಂದ್ಯಾವಳಿ ರದ್ದುಗೊಳಿಸುವಂತೆ ಹಿಂದೂ ಮಹಾಸಭಾ ದೇಶದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಕ್ತದಲ್ಲಿ ಪತ್ರ ಬರೆದಿದೆ. ಬಾಂಗ್ಲಾದೇಶ ತಂಡವನ್ನು ದೇಶದ ನೆಲದಲ್ಲಿ ಆಡುವುದನ್ನು ತಡೆಯದಿದ್ದರೆ ಗ್ವಾಲಿಯರ್‌ನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯವನ್ನು ಹಿಂದೂ ಮಹಾಸಭಾ ತೀವ್ರವಾಗಿ ವಿರೋಧಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

8 / 8
14 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಗ್ವಾಲಿಯರ್ ನಗರಕ್ಕೆ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯವನ್ನು ಆಯೋಜಿಸುವ ಉಡುಗೊರೆ ಸಿಕ್ಕಿದೆ. ಅಕ್ಟೋಬರ್ 6 ರಂದು ನಗರದ ಶಂಕರಪುರದಲ್ಲಿರುವ ಶ್ರೀಮಂತ್ ಮಾಧವರಾವ್ ಸಿಂಧಿಯಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದ್ದು, ಈ ಬಗ್ಗೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪುತ್ರ ಆರ್ಯಮನ್ ಸಿಂಧಿಯಾ ಮಾಹಿತಿ ನೀಡಿದ್ದರು.  ಆದರೆ ಇದೀಗ ಈ ಪಂದ್ಯಕ್ಕೆ ಹಿಂದೂ ಮಹಾಸಭಾ ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಬಿಸಿಸಿಐ ಈ ಬಗ್ಗೆ ಯಾವ ಕ್ರಮ ಕೈಗೊಳ್ಳಿದೆ ಎಂಬುದನ್ನು ಕಾದುನೋಡಬೇಕಿದೆ.

Published On - 4:52 pm, Mon, 19 August 24