- Kannada News Photo gallery Cricket photos How Can Australia, South Africa and Afghanistan Qualify For Semis?
ಹೀಗಾದ್ರೆ ಅಫ್ಘಾನಿಸ್ತಾನ್ ಸೆಮಿಫೈನಲ್ಗೇರುವುದು ಖಚಿತ
Champions Trophy 2025: ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ್ ತಂಡ ಜಯಭೇರಿ ಬಾರಿಸಿದೆ. ಲಾಹೋರ್ನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ 50 ಓವರ್ಗಳಲ್ಲಿ 350 ರನ್ ಬಾರಿಸಿದರೆ, ಇಂಗ್ಲೆಂಡ್ ತಂಡವು 317 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನ್ ಪಡೆ 8 ರನ್ಗಳ ಗೆಲುವು ದಾಖಲಿಸಿದೆ.
Updated on: Feb 27, 2025 | 1:53 PM

ಚಾಂಪಿಯನ್ಸ್ ಟ್ರೋಫಿ ನಾಕೌಟ್ ಹಂತಕ್ಕೇರಲು ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ. ಅದು ಸಹ ಗ್ರೂಪ್-B ನಲ್ಲಿ. ಗ್ರೂಪ್-A ಯಿಂದ ಈಗಾಗಲೇ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ಇದೀಗ ಗ್ರೂಪ್-ಬಿ ಯಿಂದ ಇಂಗ್ಲೆಂಡ್ ತಂಡ ಹೊರಬಿದ್ದಿದೆ.

ಇಂಗ್ಲೆಂಡ್ ವಿರುದ್ಧದ ರೋಚಕ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ ಆಸೆಯನ್ನು ಜೀವಂತವಿರಿಸಿಕೊಂಡಿದೆ. ಅದರಂತೆ ಅಫ್ಘಾನಿಸ್ತಾನ್ ತಂಡ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಅಫ್ಘಾನ್ ಪಡೆ ಜಯ ಸಾಧಿಸಿದರೆ ಸೆಮಿಫೈನಲ್ಗೆ ಏರುವುದು ಖಚಿತ.

ಒಂದು ವೇಳೆ ಅಫ್ಘಾನಿಸ್ತಾನ್ ವಿರುದ್ಧ ಆಸ್ಟ್ರೇಲಿಯಾ ತಂಡ ಗೆಲುವು ದಾಖಲಿಸಿದರೆ, ಆಸೀಸ್ ಪಡೆ ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಫೆಬ್ರವರಿ 28 ರಂದು ನಡೆಯಲಿರುವ ಅಫ್ಘಾನಿಸ್ತಾನ್-ಆಸ್ಟ್ರೇಲಿಯಾ ನಡುವಣ ಪಂದ್ಯವು ಉಭಯ ತಂಡಗಳ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ ಎನ್ನಬಹುದು.

ಮತ್ತೊಂದೆಡೆ ಮಾರ್ಚ್ 1 ರಂದು ಸೌತ್ ಆಫ್ರಿಕಾ ಹಾಗೂ ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಮ್ಯಾಚ್ನಲ್ಲಿ ಸೌತ್ ಆಫ್ರಿಕಾ ಗೆಲುವು ದಾಖಲಿಸಿದರೆ ಸೆಮಿಫೈನಲ್ಗೇರಲಿದೆ. ಒಂದು ವೇಳೆ ಅಫ್ಘಾನಿಸ್ತಾನ್ ತಂಡ ಆಸ್ಟ್ರೇಲಿಯಾ ವಿರುದ್ಧ ಸೋತರೆ, ಕೊನೆಯ ಪಂದ್ಯಕ್ಕೂ ಮುನ್ನವೇ ಸೌತ್ ಆಫ್ರಿಕಾ ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ.

ಏಕೆಂದರೆ ಸೌತ್ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಪಡೆದುಕೊಂಡಿದೆ. ಅಲ್ಲದೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ತಮ್ಮ ಮೊದಲ ಪಂದ್ಯದಲ್ಲಿ ಜಯ ಸಾಧಿಸಿತ್ತು. ಅದರಂತೆ ಇದೀಗ ಉಭಯ ತಂಡಗಳು ತಲಾ 3 ಅಂಕಗಳನ್ನು ಹೊಂದಿದೆ.

ಇತ್ತ ಸೆಮಿಫೈನಲ್ ರೇಸ್ನಲ್ಲಿರುವ ಅಫ್ಘಾನಿಸ್ತಾನ್ ತಂಡ ಹೊಂದಿರುವುದು ಕೇವಲ 2 ಅಂಕಗಳು ಮಾತ್ರ. ಹೀಗಾಗಿ ಅಫ್ಘಾನಿಸ್ತಾನ್ ತಂಡ ಸೆಮಿಫೈನಲ್ಗೇರಬೇಕಿದ್ದರೆ ಆಸ್ಟ್ರೇಲಿಯಾ ವಿರುದ್ಧ ಗೆಲ್ಲಲೇಬೇಕು. ಒಂದು ವೇಳೆ ಸೋತರೆ ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯಲಿದೆ.
























