IPL 2025: ಸತತ 5 ಸೋಲು: CSK ಪ್ಲೇಆಫ್ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?
IPL 2025 CSK: ಈ ಬಾರಿಯ ಐಪಿಎಲ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದಿರುವುದು ಮುಂಬೈ ಇಂಡಿಯನ್ಸ್ ವಿರುದ್ಧ ಮಾತ್ರ. ಇನ್ನುಳಿದಂತೆ ಆರ್ಸಿಬಿ, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸಿಎಸ್ಕೆ ಮುಗ್ಗರಿಸಿದೆ.
Updated on: Apr 12, 2025 | 8:32 AM

IPL 2025: ಐಪಿಎಲ್ 2025 ರಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಅತ್ಯಂತ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಸಿಎಸ್ಕೆ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್ನಲ್ಲಿ ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲೂ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ಚೆನ್ನೈ ಪಡೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

ಈ ಸೋಲುಗಳ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ಗೆ ಪ್ರವೇಶಿಸಬಹುದು. ಏಕೆಂದರೆ ಸಿಎಸ್ಕೆ ತಂಡಕ್ಕೆ ಇನ್ನೂ 8 ಪಂದ್ಯಗಳಿವೆ. ಈ ಪಂದ್ಯಗಳ ಮೂಲಕ 16 ಅಂಕಗಳನ್ನು ಪಡೆದರೆ ಆ ತಂಡ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 7 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.

ಇನ್ನು ಮುಂದಿನ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಸೋಲುಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಎಂಟರಲ್ಲಿ 5 ಜಯ ಮಾತ್ರ ಸಾಧಿಸಿದರೆ, ಸಿಎಸ್ಕೆ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈ ವೇಳೆ ನೆಟ್ ರನ್ ರೇಟ್ ಲೆಕ್ಕಾಚಾರಗಳು ಕೂಡ ಗಣನೆಗೆ ಬರುವ ಸಾಧ್ಯತೆ ಹೆಚ್ಚು.

ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಲೇಬೇಕು. ಇನ್ನು ಮುಂದಿನ 6 ಮ್ಯಾಚ್ಗಳಲ್ಲಿ ಗೆಲುವು ದಾಖಲಿಸಿದರೂ 14 ಅಂಕಗಳೊಂದಿಗೆ ಪ್ಲೇಆಫ್ಗೆ ಪ್ರವೇಶಿಸಲು ಅವಕಾಶ ಸಿಗಬಹುದು. ಆದರೆ ಅದು ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಪಡೆದಿದ್ದರೆ ಮಾತ್ರ.

ಅಂದರೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು 16 ಅಂಕಗಳನ್ನು ಪಡೆದು, ಸಿಎಸ್ಕೆ ತಂಡವು 14 ಅಂಕಗಳನ್ನು ಪಡೆದರೆ ಪ್ಲೇಆಫ್ ರೇಸ್ನಿಂದ ಹೊರಬೀಳಲಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ಮುಂದಿನ 8 ಪಂದ್ಯಗಳು ಕೂಡ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More



