AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಸತತ 5 ಸೋಲು: CSK ಪ್ಲೇಆಫ್​ಗೇರಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

IPL 2025 CSK: ಈ ಬಾರಿಯ ಐಪಿಎಲ್​ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದಿರುವುದು ಮುಂಬೈ ಇಂಡಿಯನ್ಸ್ ವಿರುದ್ಧ ಮಾತ್ರ. ಇನ್ನುಳಿದಂತೆ ಆರ್​​ಸಿಬಿ, ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್, ರಾಜಸ್ಥಾನ್ ರಾಯಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸಿಎಸ್​ಕೆ ಮುಗ್ಗರಿಸಿದೆ.

ಝಾಹಿರ್ ಯೂಸುಫ್
|

Updated on: Apr 12, 2025 | 8:32 AM

Share
IPL 2025: ಐಪಿಎಲ್ 2025 ರಲ್ಲಿ 5 ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ (CSK) ಅತ್ಯಂತ ಪ್ರದರ್ಶನ ಮುಂದುವರೆಸಿದೆ. ಈವರೆಗೆ ಆಡಿದ 6 ಪಂದ್ಯಗಳಲ್ಲಿ ಸಿಎಸ್​ಕೆ ತಂಡ ಗೆದ್ದಿರುವುದು ಕೇವಲ ಒಂದು ಮ್ಯಾಚ್​ನಲ್ಲಿ ಮಾತ್ರ. ಇನ್ನುಳಿದ ಐದು ಪಂದ್ಯಗಳಲ್ಲೂ ಮುಗ್ಗರಿಸಿದೆ. ಈ ಸೋಲುಗಳೊಂದಿಗೆ ಚೆನ್ನೈ ಪಡೆ ಅಂಕ ಪಟ್ಟಿಯಲ್ಲಿ 9ನೇ ಸ್ಥಾನದಲ್ಲಿದೆ.

1 / 5
ಈ ಸೋಲುಗಳ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್​ಗೆ ಪ್ರವೇಶಿಸಬಹುದು. ಏಕೆಂದರೆ ಸಿಎಸ್​ಕೆ ತಂಡಕ್ಕೆ ಇನ್ನೂ 8 ಪಂದ್ಯಗಳಿವೆ. ಈ ಪಂದ್ಯಗಳ ಮೂಲಕ  16 ಅಂಕಗಳನ್ನು ಪಡೆದರೆ ಆ ತಂಡ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ. ಅದರಂತೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಮುಂದಿನ 7 ಪಂದ್ಯಗಳಲ್ಲಿ 7 ಜಯ ಸಾಧಿಸಿದರೆ ಪ್ಲೇಆಫ್ ಪ್ರವೇಶಿಸಬಹುದು.

2 / 5
ಇನ್ನು ಮುಂದಿನ 8 ಪಂದ್ಯಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮೂರು ಪಂದ್ಯಗಳಲ್ಲಿ ಸೋಲುಂಡರೆ ಪ್ಲೇಆಫ್ ಹಾದಿ ಕಠಿಣವಾಗಲಿದೆ. ಏಕೆಂದರೆ ಎಂಟರಲ್ಲಿ 5 ಜಯ ಮಾತ್ರ ಸಾಧಿಸಿದರೆ, ಸಿಎಸ್​ಕೆ ತಂಡದ ಒಟ್ಟು ಪಾಯಿಂಟ್ಸ್ 12 ಆಗಲಿದೆ. ಈ ವೇಳೆ ನೆಟ್ ರನ್ ರೇಟ್ ಲೆಕ್ಕಾಚಾರಗಳು ಕೂಡ ಗಣನೆಗೆ ಬರುವ ಸಾಧ್ಯತೆ ಹೆಚ್ಚು.

3 / 5
ಹೀಗಾಗಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನೇರವಾಗಿ ಪ್ಲೇಆಫ್ ಪ್ರವೇಶಿಸಬೇಕಿದ್ದರೆ, ಮುಂದಿನ 8 ಪಂದ್ಯಗಳಲ್ಲಿ 7 ರಲ್ಲಿ ಜಯ ಸಾಧಿಸಲೇಬೇಕು. ಇನ್ನು ಮುಂದಿನ 6 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೂ 14 ಅಂಕಗಳೊಂದಿಗೆ ಪ್ಲೇಆಫ್​ಗೆ ಪ್ರವೇಶಿಸಲು ಅವಕಾಶ ಸಿಗಬಹುದು. ಆದರೆ ಅದು ಟಾಪ್-4 ನಲ್ಲಿರುವ ಒಂದು ತಂಡವು 14 ಅಂಕಗಳನ್ನು ಪಡೆದಿದ್ದರೆ ಮಾತ್ರ.

4 / 5
ಅಂದರೆ ಟಾಪ್-4 ನಲ್ಲಿ ಕಾಣಿಸಿಕೊಳ್ಳುವ ನಾಲ್ಕು ತಂಡಗಳು 16 ಅಂಕಗಳನ್ನು ಪಡೆದು, ಸಿಎಸ್​ಕೆ ತಂಡವು 14 ಅಂಕಗಳನ್ನು ಪಡೆದರೆ ಪ್ಲೇಆಫ್ ರೇಸ್​ನಿಂದ ಹೊರಬೀಳಲಿದೆ. ಹೀಗಾಗಿಯೇ ಚೆನ್ನೈ ಸೂಪರ್ ಕಿಂಗ್ಸ್ ಪಾಲಿಗೆ ಮುಂದಿನ 8 ಪಂದ್ಯಗಳು ಕೂಡ ತುಂಬಾ ಮಹತ್ವದ್ದಾಗಿ ಪರಿಣಮಿಸಿದೆ.

5 / 5
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು

ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ

ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!

ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ

ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್

ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್

ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ

ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ

ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ