Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಭಾರತ vs ಆಸ್ಟ್ರೇಲಿಯಾ ಗಾಬಾ ಟೆಸ್ಟ್ ಡ್ರಾ ಆದರೆ ಯಾರಿಗೆ ಲಾಭ?

WTC final 2025: ಬ್ರಿಸ್ಬೇನ್​ನಲ್ಲಿ ನಡೆಯುತ್ತಿರುವ ಗಾಬಾ ಟೆಸ್ಟ್ ಪಂದ್ಯವು ಡ್ರಾ ಆದರೆ ಟೀಮ್ ಇಂಡಿಯಾಗೆ ಪ್ಲಸ್ ಪಾಯಿಂಟ್. ಏಕೆಂದರೆ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬೇಕಿದ್ದರೆ, ಯಾವುದೇ ಪಂದ್ಯಗಳನ್ನು ಸೋಲಬಾರದು. ಇತ್ತ ಮೊದಲ ಇನಿಂಗ್ಸ್​ನಲ್ಲಿ ಹಿನ್ನಡೆ ಅನುಭವಿಸಿರುವ ಟೀಮ್ ಇಂಡಿಯಾ ಈ ಪಂದ್ಯವನ್ನು ಡ್ರಾ ಮಾಡಿಕೊಂಡರೆ ಫೈನಲ್ ಪ್ರವೇಶಿಸಲು ಮುಂದಿನ ಪಂದ್ಯಗಳನ್ನು ಗೆದ್ದರೆ ಸಾಕು.

ಝಾಹಿರ್ ಯೂಸುಫ್
|

Updated on: Dec 18, 2024 | 8:35 AM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಮೂರನೇ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಳ್ಳುವುದು ಬಹುತೇಕ ಖಚಿತ. ಏಕೆಂದರೆ ಈ ಪಂದ್ಯವು ಐದನೇ ದಿನದಾಟಕ್ಕೆ ಕಾಲಿಟ್ಟಿದ್ದು, ಇದೀಗಷ್ಟೇ ದ್ವಿತೀಯ ಇನಿಂಗ್ಸ್ ಆರಂಭವಾಗಿದೆ. ಹೀಗಾಗಿ ಬ್ರಿಸ್ಬೇನ್​ನ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಫಲಿತಾಂಶ ಹೊರಹೊಮ್ಮುವ ಸಾಧ್ಯತೆಯಿಲ್ಲ. ಇತ್ತ ಗಾಬಾ ಟೆಸ್ಟ್ ಡ್ರಾ ಆದರೆ ಯಾವ ತಂಡಕ್ಕೆ ಲಾಭ ಎಂಬ ಲೆಕ್ಕಾಚಾರಗಳು ಕೂಡ ಶುರುವಾಗಿದೆ.

1 / 6
ಏಕೆಂದರೆ ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ರೇಸ್​ನಲ್ಲಿದೆ. ಹೀಗಾಗಿ ಎರಡೂ ತಂಡಳಿಗೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಪಂದ್ಯಗಳು ಬಹಳ ಮಹತ್ವದ್ದು. ಇದೀಗ ಈ ಸರಣಿಯ ಮೂರನೇ ಪಂದ್ಯವು ಡ್ರಾನಲ್ಲಿ ಕೊನೆಗೊಂಡರೂ, ಟೀಮ್ ಇಂಡಿಯಾಗೆ ಚಿಂತೆಯಿಲ್ಲ.

2 / 6
ಏಕೆಂದರೆ ಭಾರತ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಬಹುದು. ಅಂದರೆ ಈ ಸರಣಿಯನ್ನು ಟೀಮ್ ಇಂಡಿಯಾ 3-1 ಅಂತರದಿಂದ ಗೆದ್ದರೆ ಫೈನಲ್​ಗೆ ಪ್ರವೇಶಿಸುವುದು ಬಹುತೇಕ ಖಚಿತ.

3 / 6
ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ನಡೆಯಲಿರುವ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ 60.52% ಪಾಯಿಂಟ್ಸ್ ಪಡೆಯಲು ಉತ್ತಮ ಅವಕಾಶವಿದೆ. ಈ ಮೂಲಕ ದ್ವಿತೀಯ ಸ್ಥಾನದೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನಲ್ಲಿ ಫೈನಲ್​ಗೇರಬಹುದು.

4 / 6
ಅತ್ತ ಆಸ್ಟ್ರೇಲಿಯಾ ತಂಡವು ಮುಂದಿನ ಎರಡು ಪಂದ್ಯಗಳಲ್ಲಿ ಸೋತರೆ ಫೈನಲ್ ರೇಸ್​ನಿಂದ ಹೊರಬೀಳಲಿದೆ. ಏಕೆಂದರೆ ಟೀಮ್ ಇಂಡಿಯಾ 3-1 ಅಂತರದಿಂದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಗೆದ್ದರೆ, ಆಸ್ಟ್ರೇಲಿಯಾ ತಂಡದ ಶೇಕಡಾವಾರು ಅಂಕ ಕಡಿಮೆಯಾಗಲಿದೆ. ಅಲ್ಲದೆ ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಪಡೆಯಲಿದೆ.

5 / 6
ಇದರಿಂದ 60.52% ಅಂಕಗಳೊಂದಿಗೆ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡುವುದು ಖಚಿತವಾಗಲಿದೆ. ಆದರೆ ಅದಕ್ಕೂ ಮುನ್ನ ಭಾರತ ತಂಡವು ಮೆಲ್ಬೋರ್ನ್ ಹಾಗೂ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿಯಬೇಕು. ಈ ಮೂಲಕ ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​​ನಲ್ಲಿ ಫೈನಲ್​ಗೇರಲಿದೆಯಾ ಕಾದು ನೋಡಬೇಕಿದೆ.

6 / 6
Follow us
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ

ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು

ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ

ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ

ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್

ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ

ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ

ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್