ಬಾಂಗ್ಲಾದೇಶ್ ಸೋತರೆ, ಭಾರತ vs ಪಾಕಿಸ್ತಾನ್ ನಡುವೆ ಫೈನಲ್

Updated on: Sep 24, 2025 | 7:32 AM

Asia Cup 2025 India vs Bangladesh: ಏಷ್ಯಾಕಪ್ ಟೂರ್ನಿಯಿಂದ ಶ್ರೀಲಂಕಾ ತಂಡ ಹೊರಬಿದ್ದಿದೆ. ಇದೀಗ ಫೈನಲ್ ರೇಸ್ ನಲ್ಲಿ ಉಳಿದಿರುವುದು ಭಾರತ, ಪಾಕಿಸ್ತಾನ್ ಮತ್ತು ಬಾಂಗ್ಲಾದೇಶ್. ಈ ಮೂರು ತಂಡಗಳಲ್ಲಿ ಎರಡು ಟೀಮ್ ಈ ಬಾರಿಯ ಏಷ್ಯಾಕಪ್ ಫೈನಲ್ ಆಡುವುದು ಖಚಿತ.

1 / 5
Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

Asia Cup 2025: ಏಷ್ಯಾಕಪ್ ಟೂರ್ನಿಯ 16ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ್ (India vs Bangladesh) ತಂಡಗಳು ಮುಖಾಮುಖಿಯಾಗಲಿದೆ. ದುಬೈನಲ್ಲಿ ಇಂದು (ಸೆ.24) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಫೈನಲ್ ಗೇರುವುದು ಖಚಿತವಾಗಲಿದೆ.

2 / 5

ಇನ್ನು ಭಾರತದ ವಿರುದ್ಧ ಸೋಲುಂಡರೆ ಬಾಂಗ್ಲಾದೇಶ್ ತಂಡದ ಫೈನಲ್ ಹಾದಿ ಕಠಿಣವಾಗಲಿದೆ. ಏಕೆಂದರೆ ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳು ಒಂದೊಂದು ಪಂದ್ಯ ಗೆದ್ದಿದ್ದು, ಉಭಯ ತಂಡಗಳು ತಲಾ 2 ಅಂಕಗಳನ್ನು ಹೊಂದಿವೆ.

3 / 5

ಇತ್ತ ಟೀಮ್ ಇಂಡಿಯಾ ವಿರುದ್ಧ ಬಾಂಗ್ಲಾದೇಶ್ ಸೋತರೆ, ಬಾಂಗ್ಲಾ ಪಡೆಗೆ ಪಾಕಿಸ್ತಾನ್ ವಿರುದ್ಧದ ಪಂದ್ಯ ನಿರ್ಣಾಯಕವಾಗಲಿದೆ. ಏಕೆಂದರೆ ಸೂಪರ್-4 ಹಂತದ ತಮ್ಮ ಪಂದ್ಯಗಳಲ್ಲಿ ಬಾಂಗ್ಲಾದೇಶ್ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಬೇಕಿದೆ.

4 / 5

ಈ ಪಂದ್ಯವು ಉಭಯ ತಂಡಗಳ ಪಾಲಿಗೆ  ಮಾಡು ಇಲ್ಲವೇ ಮಡಿ ಪಂದ್ಯವಾಗಿ ಮಾರ್ಪಡಲಿದೆ. ಏಕೆಂದರೆ ಭಾರತದ ವಿರುದ್ಧ ಸೋತರೆ, ಬಾಂಗ್ಲಾದೇಶ್ ತಂಡವು ಫೈನಲ್​ಗೇರಲು ಪಾಕಿಸ್ತಾನ್ ವಿರುದ್ಧ ಗೆಲ್ಲಲೇಬೇಕು. ಅತ್ತ ಕೊನೆಯ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮಾತ್ರ ಪಾಕಿಸ್ತಾನ್ ತಂಡ ಫೈನಲ್ ಗೆ ಎಂಟ್ರಿ ಕೊಡಲಿದೆ.

5 / 5

ಅಂದರೆ ಮುಂದಿನ ಎರಡು ಪಂದ್ಯಗಳಲ್ಲಿ ಬಾಂಗ್ಲಾದೇಶ್ ತಂಡ ಸೋತರೆ, ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿ ಆಗುವುದು ಖಚಿತ. ಅದರಂತೆ ಒಂದೇ ಟೂರ್ನಿಯಲ್ಲಿ 3ನೇ ಬಾರಿ ಇಂಡೊ-ಪಾಕ್ ಕದನ ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ಸಿಗಲಿದೆಯಾ ಕಾದು ನೋಡಬೇಕಿದೆ.

Loading...
Unable to load recommendations.
Follow Us