AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬೈ ಇಂಡಿಯನ್ಸ್ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರ್​ಸಿಬಿ ತಂಡವು ಅಗ್ರಸ್ಥಾನದಲ್ಲಿದ್ದರೆ, ಗುಜರಾತ್ ಜೈಂಟ್ಸ್ ತಂಡವು ದ್ವಿತೀಯ ಸ್ಥಾನದಲ್ಲಿದೆ. ಇನ್ನು ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಲಾ 6 ಅಂಕಗಳೊಂದಿಗೆ 3ನೇ ಮತ್ತು 4ನೇ ಸ್ಥಾನಗಳಲ್ಲಿದೆ. ಅತ್ತ 4 ಅಂಕಗಳನ್ನು ಮಾತ್ರ ಹೊಂದಿರುವ ಯುಪಿ ವಾರಿಯರ್ಸ್ 5ನೇ ಸ್ಥಾನದಲ್ಲಿದೆ. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ವಿರುದ್ಧ ಗೆದ್ದರೆ 8 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: Jan 31, 2026 | 9:12 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಫೈನಲ್​ಗೇರಿದರೆ, ಗುಜರಾತ್ ಜೈಂಟ್ಸ್ ತಂಡವು ಎಲಿಮಿನೇಟರ್ ಪಂದ್ಯವಾಡಲು ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ನಡುವೆ ಪೈಪೋಟಿ ಇದೆ.

1 / 5
ಇಲ್ಲಿ ಮುಂಬೈ ಇಂಡಿಯನ್ಸ್ ತಂಡದ ಲೀಗ್​ ಹಂತದ ಪಂದ್ಯಗಳು ಮುಗಿದಿರುವುದರಿಂದ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲು ಯುಪಿ ವಾರಿಯರ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವಣ ಪಂದ್ಯದ ಫಲಿತಾಂಶವನ್ನು ಎದುರು ನೋಡಬೇಕಿದೆ. ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಪಾಲಿಗೆ ಯಾರು ಗೆಲ್ಲಬೇಕು? ಯಾರು ಸೋಲಬೇಕು ಎಂದು ನೋಡುವುದಾದರೆ...

2 / 5
ವುಮೆನ್ಸ್ ಪ್ರೀಮಿಯರ್ ಲೀಗ್​ನ ಕೊನೆಯ ಲೀಗ್​ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಮುಂಬೈ ಇಂಡಿಯನ್ಸ್​ ಟೂರ್ನಿಯಿಂದ ಹೊರಬೀಳಲಿದೆ. ಅಂದರೆ ಕೊನೆಯ ಪಂದ್ಯದ ಗೆಲುವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ಎಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಇಂದಿನ (ಜ.31) ಮ್ಯಾಚ್​ನಲ್ಲಿ ಮುಂಬೈ ಇಂಡಿಯನ್ಸ್ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆಲ್ಲಬಾರದು.

3 / 5
ಮತ್ತೊಂದೆಡೆ ಮುಂಬೈ ಇಂಡಿಯನ್ಸ್ ಪಾಲಿಗೆ ಯುಪಿ ವಾರಿಯರ್ಸ್ ತಂಡವು ಗೆಲ್ಲಬೇಕು. ಆದರೆ 156 ರನ್​ಗಳಿಗಿಂತ ಹೆಚ್ಚಿನ ರನ್​ಗಳ ಅಂತರದಿಂದ ಗೆಲ್ಲಬಾರದು. ಅಂದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಯುಪಿ ವಾರಿಯರ್ಸ್ 156 ರನ್​ಗಳ ಅಂತರದಿಂದ ಗೆದ್ದರೆ ನೆಟ್​ ರನ್ ರೇಟ್​ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರುವ ಮೂಲಕ ಎಲಿಮಿನೇಟರ್ ಸುತ್ತಿಗೆ ಅರ್ಹತೆ ಪಡೆಯಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪಾಲಿಗೆ ಯುಪಿ ವಾರಿಯರ್ಸ್ ಗೆಲ್ಲಬೇಕು, ಆದರೆ 156 ರನ್​ಗಳ ಅಂತರದಿಂದ ಮಾತ್ರ ಗೆಲ್ಲಬಾರದು.

4 / 5
ಅಂದರೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ತಂಡವು ಗೆದ್ದರೆ ಯುಪಿ ವಾರಿಯರ್ಸ್ ಹಾಗೂ ಮುಂಬೈ ಇಂಡಿಯನ್ಸ್ ವುಮೆನ್ಸ್ ಪ್ರೀಮಿಯರ್ ಲೀಗ್​ನಿಂದ ಹೊರಬೀಳಲಿದೆ. ಇನ್ನು ಯುಪಿ ವಾರಿಯರ್ಸ್ ತಂಡವು 156 ಕ್ಕಿಂತ ಕಡಿಮೆ ರನ್​ಗಳ ಅಂತರದಿಂದ ಗೆದ್ದರೆ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಯುಪಿ ವಾರಿಯರ್ಸ್ ತಂಡಗಳು ಹೊರಬೀಳಲಿದೆ. ಹೀಗಾಗಿ ಮುಂಬೈ ಇಂಡಿಯನ್ಸ್ ಪಾಲಿಗೆ ಇಂದು ಯುಪಿ ವಾರಿಯರ್ಸ್ ತಂಡವು ಸಾಧಾರಣ ಗೆಲುವು ದಾಖಲಿಸುವುದು ಅನಿವಾರ್ಯ. ಈ ಮೂಲಕ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಯ್ದುಕೊಳ್ಳುವ ಮೂಲಕ ಎಲಿಮಿನೇಟರ್​ ಸುತ್ತಿಗೆ ಅರ್ಹತೆ ಪಡೆದುಕೊಳ್ಳಬಹುದು.

5 / 5