AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC final: ಇನ್ನೊಂದು ಪಂದ್ಯ ಸೋತರೂ ಟೀಮ್ ಇಂಡಿಯಾದ WTC ಫೈನಲ್ ಕನಸು ಉಲ್ಟಾ ಪಲ್ಟಾ

WTC final 2025: ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ 2025ರ ಫೈನಲ್​ ಪಂದ್ಯವು ಮುಂದಿನ ವರ್ಷ ಜೂನ್ 11 ರಿಂದ 15 ರವರಗೆ ನಡೆಯಲಿದೆ. ಈ ಪಂದ್ಯಕ್ಕೆ ಇಂಗ್ಲೆಂಡ್​ನ ಲಾರ್ಡ್ಸ್ ಮೈದಾನ ಆತಿಥ್ಯವಹಿಸಲಿದ್ದು, ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಈ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ.

ಝಾಹಿರ್ ಯೂಸುಫ್
|

Updated on: Dec 09, 2024 | 12:10 PM

Share
ಆಸ್ಟ್ರೇಲಿಯಾ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಸೋಲು ಟೀಮ್ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದೆ. ಏಕೆಂದರೆ ಈ ಸೋಲಿನ ಬೆನ್ನಲ್ಲೇ ಟೀಮ್ ಇಂಡಿಯಾ WTC ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಮತ್ತೆ ಟಾಪ್-2 ಹಂತಕ್ಕೇರಲು ಉಳಿದ ಮೂರು ಪಂದ್ಯಗಳಲ್ಲಿ ಜಯಗಳಿಸಲೇಬೇಕು.

1 / 8
ಪ್ರಸ್ತುತ ಅಂಕ ಪಟ್ಟಿಯಲ್ಲಿ 60.710% ಅಂಕಗಳನ್ನು ಹೊಂದಿರುವ ಆಸ್ಟ್ರೇಲಿಯಾ ಅಗ್ರಸ್ಥಾನದಲ್ಲಿದ್ದರೆ, ಸೌತ್ ಆಫ್ರಿಕಾ (	59.260%) ದ್ವಿತೀಯ ಸ್ಥಾನದಲ್ಲಿದೆ. ಇನ್ನು 57.290% ಹೊಂದಿರುವ ಟೀಮ್ ಇಂಡಿಯಾ ಮೂರನೇ ಸ್ಥಾನದಲ್ಲಿದೆ. ಈ ಮೂರನೇ ಸ್ಥಾನದಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಳ್ಳಲು ಭಾರತ ತಂಡ ಆಸ್ಟ್ರೇಲಿಯಾವನ್ನು ಎಲ್ಲಾ ಪಂದ್ಯಗಳಲ್ಲೂ ಸೋಲಿಸಬೇಕು.

2 / 8
ಈ ಮೂಲಕ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 4-1 ಅಂತರದಿಂದ ಸರಣಿ ಗೆದ್ದರೆ, ಟೀಮ್ ಇಂಡಿಯಾದ ಅಂಕ 64.04% ಆಗಲಿದೆ. ಇದರಿಂದ ದ್ವಿತೀಯ ಸ್ಥಾನವನ್ನು ಖಚಿತಪಡಿಸಿಕೊಂಡು ವಿಶ್ವ ಟೆಸ್ಟ್ ಚಾಂಪಿಯನ್​​​ಶಿಪ್​ ಫೈನಲ್​​ಗೆ ನೇರ ಅರ್ಹತೆ ಪಡೆಯಬಹುದು.

3 / 8
ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಗೆದ್ದರೂ 60% ಅಂಕಗಳನ್ನು ಮಾತ್ರ ಪಡೆಯಲಿದೆ. ಅಂದರೆ ನೇರವಾಗಿ ಅರ್ಹತೆ ಪಡೆಯಲು ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಜಯಭೇರಿ ಬಾರಿಸಬೇಕು. ಇದರಿಂದ ಎರಡನೇ ಸ್ಥಾನದೊಂದಿಗೆ ಟೀಮ್ ಇಂಡಿಯಾ ಫೈನಲ್​​ಗೆ ಪ್ರವೇಶಿಸಲಿದೆ.

4 / 8
ಇನ್ನು ಮುಂದಿನ 3 ಪಂದ್ಯಗಳಲ್ಲಿ 1 ಡ್ರಾ ಹಾಗೂ 2 ಜಯದೊಂದಿಗೆ ಟೀಮ್ ಇಂಡಿಯಾ 3-1 ಅಂತರದಿಂದ ಸರಣಿ ಗೆದ್ದರೆ, ಒಟ್ಟು 60.52% ಅಂಕಗಳನ್ನು ಪಡೆಯಲಿದೆ. ಅತ್ತ ಆಸ್ಟ್ರೇಲಿಯಾ ತಂಡವು ಶ್ರೀಲಂಕಾ ವಿರುದ್ಧ 2 ಪಂದ್ಯಗಳನ್ನು ಗೆದ್ದರೂ 57% ಅಂಕಗಳನ್ನು ಮಾತ್ರ ಗಳಿಸಲಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲೂ ಒಂದೇ ಒಂದು ಸೋಲು ಕಾಣಬಾರದು. ಈ ಮೂಲಕ 3-1 ಅಂತರದಿಂದ ಸರಣಿ ಗೆದ್ದು ಫೈನಲ್​ಗೆ ಅರ್ಹತೆ ಪಡೆಯಬಹುದು.

5 / 8
ಒಂದು ವೇಳೆ ಟೀಮ್ ಇಂಡಿಯಾ ಮುಂದಿನ ಮೂರು ಪಂದ್ಯಗಳಲ್ಲಿ ಒಂದು ಸೋಲನುಭವಿಸಿ ಸರಣಿಯನ್ನು 3-2 ಅಂತರದಿಂದ ಕೊನೆಗೊಳಿಸಿದರೆ, ಫೈನಲ್ ಅರ್ಹತೆಗಾಗಿ ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವಣ ಸರಣಿಯನ್ನು ಅವಲಂಭಿಸಬೇಕಾಗುತ್ತದೆ. ಅಂದರೆ ಇಲ್ಲಿ ಶ್ರೀಲಂಕಾ ತಂಡವು ಆಸ್ಟ್ರೇಲಿಯಾ ವಿರುದ್ಧ ಒಂದು ಗೆಲುವು ಅಥವಾ ಒಂದು ಡ್ರಾ ಸಾಧಿಸಿದರೆ ಭಾರತ ತಂಡ ಫೈನಲ್​ಗೆ ಅರ್ಹತೆ ಪಡೆಯಲಿದೆ.

6 / 8
ಇನ್ನು ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟೆಸ್ಟ್ ಸರಣಿಯು 2-2 ಅಂತರದಿಂದ ಕೊನೆಗೊಂಡರೆ, ಶ್ರೀಲಂಕಾ ವಿರುದ್ಧದ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆಲ್ಲಬೇಕು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ ಶ್ರೀಲಂಕಾ ಒಂದು ಮ್ಯಾಚ್​​ನಲ್ಲಿ ಗೆಲ್ಲುವುದು ಟೀಮ್ ಇಂಡಿಯಾ ಪಾಲಿಗೆ ಅನಿವಾರ್ಯವಾಗಲಿದೆ.

7 / 8
ಇನ್ನು ಸೌತ್ ಆಫ್ರಿಕಾ ತಂಡವು ಶ್ರೀಲಂಕಾ ಹಾಗೂ ಪಾಕಿಸ್ತಾನ್ ವಿರುದ್ಧದ ಟೆಸ್ಟ್​ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡರೆ  69.44% ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​​ಗೆ ಪ್ರವೇಶಿಸುವುದು ಖಚಿತ. ಹೀಗಾದಲ್ಲಿ ಟೀಮ್ ಇಂಡಿಯಾ ದ್ವಿತೀಯ ಸ್ಥಾನದೊಂದಿಗೆ ಫೈನಲ್​ಗೆ ಅರ್ಹತೆ ಪಡೆಯುವುದನ್ನು ಎದುರು ನೋಡಬೇಕಾಗುತ್ತದೆ.

8 / 8
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್

ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ

ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್

ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ

ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?

ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!

ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ

ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ

ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ