AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಒಂದು ಸ್ಥಾನಕ್ಕಾಗಿ 3 ತಂಡಗಳ ನಡುವೆ ಪೈಪೋಟಿ: ಹೀಗಿದೆ ಲೆಕ್ಕಾಚಾರ

IPL 2025: ಐಪಿಎಲ್​ನ ಲೀಗ್ ಹಂತದ 60 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮುಕ್ತಾಯದೊಂದಿಗೆ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಪ್ಲೇಆಫ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನೊಂದು ಸ್ಥಾನಕ್ಕಾಗಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ನಡುವೆ ಪೈಪೋಟಿ ಏರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on: May 19, 2025 | 10:03 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ 3 ತಂಡಗಳು ಪ್ಲೇಆಫ್​ಗೆ ಪ್ರವೇಶಿಸಿದರೆ, ಒಂದು ಸ್ಥಾನಕ್ಕಾಗಿ ಮೂರು ತಂಡಗಳ ನಡುವೆ ಪ್ಲೇಆಫ್​ ಪೈಪೋಟಿ ಮುಂದುವರೆದಿದೆ. ಈ ಮೂರು ಟೀಮ್​ಗಳಲ್ಲಿ ಒಂದು ತಂಡವು ಪ್ಲೇಆಫ್​ಗೇರುವುದು ಖಚಿತ. ಹಾಗಿದ್ರೆ ಮೂರು ತಂಡಗಳ ಪ್ಲೇಆಫ್ ಸಮೀಕರಣ ಹೇಗಿದೆ ಎಂದು ನೋಡೋಣ...

1 / 5
ಮುಂಬೈ ಇಂಡಿಯನ್ಸ್: ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಇನ್ನೂ 2 ಪಂದ್ಯಗಳಿವೆ. ಈ ಮ್ಯಾಚ್​ಗಳಲ್ಲಿ ಜಯಗಳಿಸಿದರೆ ಪ್ಲೇಆಫ್​ಗೇರುವುದು ಖಚಿತ. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಗೆದ್ದರೆ ಮುಂಬೈ ಇಂಡಿಯನ್ಸ್ ತಂಡದ ಪ್ಲೇಆಫ್ ಸ್ಥಾನ ಬಹುತೇಕ ದೃಢವಾಗಲಿದೆ. ಒಂದು ವೇಳೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆದ್ದು, ಪಂಜಾಬ್ ಕಿಂಗ್ಸ್ ವಿರುದ್ಧ ಸೋತರೂ ಪ್ಲೇಆಫ್​ಗೆ ಎಂಟ್ರಿ ಕೊಡಬಹುದು. ಏಕೆಂದರೆ ಲಕ್ನೋ ಸೂಪರ್ ಜೈಂಟ್ಸ್ ಮುಂದಿನ ಮೂರು ಪಂದ್ಯಗಳಲ್ಲಿ ಜಯಗಳಿಸಿ ಉತ್ತಮ ನೆಟ್ ರನ್ ರೇಟ್ ಅನ್ನು ಹೊಂದಿದರೆ ಮಾತ್ರ ಮುಂಬೈ ಇಂಡಿಯನ್ಸ್ ತಂಡವನ್ನು ಹಿಂದಿಕ್ಕಬಹುದು. ಹೀಗಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಪಡೆ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಬಹುತೇಕ ಖಚಿತವಾಗಲಿದೆ.

2 / 5
ಡೆಲ್ಲಿ ಕ್ಯಾಪಿಟಲ್ಸ್: ಅಂಕ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಪ್ಲೇಆಫ್​ಗೆ ಅರ್ಹತೆ ಪಡೆಯಲು ತಮ್ಮ ಎರಡೂ ಪಂದ್ಯಗಳನ್ನು ಗೆಲ್ಲಲೇಬೇಕು. ಹಾಗೆಯೇ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಒಂದು ಮ್ಯಾಚ್ ಸೋಲುವುದನ್ನು ಎದುರು ನೋಡಬೇಕು. ಈ ಮೂಲಕ ಒಟ್ಟು 17 ಅಂಕಗಳೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್​ ಪ್ಲೇಆಫ್​ಗೇರಬಹುದು.

3 / 5
ಲಕ್ನೋ ಸೂಪರ್ ಜೈಂಟ್ಸ್ : LSG ತಂಡವು ಅಂಕ ಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ. ಇದಾಗ್ಯೂ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಇನ್ನೂ ಮೂರು ಪಂದ್ಯಗಳಿವೆ. ಈ ಮೂರು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರಷ್ಟೇ ಸಾಕಾಗುವುದಿಲ್ಲ. ಬದಲಾಗಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ ಸೋಲುವುದನ್ನು ಎದುರು ನೋಡಬೇಕು. ಹಾಗೆಯೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆಲ್ಲಬೇಕು. ಹೀಗಾದ್ರೆ ಮಾತ್ರ ನೆಟ್ ರನ್ ರೇಟ್​ ಮೂಲಕ ಲಕ್ನೋ ಸೂಪರ್ ಜೈಂಟ್ಸ್ ಅಂಕ ಪಟ್ಟಿಯಲ್ಲಿ 4ನೇ ಸ್ಥಾನ ಪಡೆದು ಪ್ಲೇಆಫ್​ಗೇರಬಹುದು.

4 / 5
ಅಂದರೆ ಇಲ್ಲಿ ಮುಂಬೈ ಇಂಡಿಯನ್ಸ್, ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳಲ್ಲಿ ಒಂದು ಟೀಮ್ ಪ್ಲೇಆಫ್​ಗೇರುವುದು ಖಚಿತ. ಇನ್ನುಳಿದಂತೆ ಚೆನ್ನೈ ಸೂಪರ್ ಕಿಂಗ್ಸ್, ಸನ್​ರೈಸರ್ಸ್ ಹೈದರಾಬಾದ್, ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳು ಈಗಾಗಲೇ ಪ್ಲೇಆಫ್ ರೇಸ್​ನಿಂದ ಹೊರಬಿದ್ದಿದೆ. ಹೀಗಾಗಿ ದ್ವಿತೀಯ ಸುತ್ತಿನಲ್ಲಿ ಈ 4 ತಂಡಗಳು ಕಾಣಿಸಿಕೊಳ್ಳುವುದಿಲ್ಲ.

5 / 5
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು

ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ