AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Asia Cup 2025: ಫೈನಲ್​ಗೇರಲು ಟೀಮ್ ಇಂಡಿಯಾ ಎಷ್ಟು ಪಂದ್ಯ ಗೆಲ್ಲಬೇಕು?

Asia Cup 2025 India vs Pakistan: ಏಷ್ಯಾಕಪ್ 2025ರ ಸೂಪರ್-4 ಹಂತದ 2ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗಲಿದೆ. ದುಬೈ ಇಂಟರ್​ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

ಝಾಹಿರ್ ಯೂಸುಫ್
|

Updated on: Sep 21, 2025 | 3:55 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ ಟೂರ್ನಿಯು (Asia Cup 2025) ಭರದಿಂದ ಸಾಗುತ್ತಿದೆ. ಈ ಟೂರ್ನಿಯ ಮೊದಲ ಸುತ್ತು  ಪೂರ್ಣಗೊಂಡಿದ್ದು, ಈ ಸುತ್ತಿನ ಮೂಲಕ 4 ತಂಡಗಳು ಮುಂದಿನ ರೌಂಡ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಇದೀಗ ಸೂಪರ್-4 ಹಂತದ ಪಂದ್ಯಗಳು ಜರುಗುತ್ತಿದೆ.

1 / 5
ಸೂಪರ್-4 ಹಂತದಲ್ಲಿ ಭಾರತ, ಪಾಕಿಸ್ತಾನ್, ಬಾಂಗ್ಲಾದೇಶ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯುತ್ತಿವೆ. ಈ ಸುತ್ತು ಕೂಡ ರೌಂಡ್ ರಾಬಿನ್ ಮಾದರಿಯಲ್ಲೇ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ತಲಾ ಮೂರು ಪಂದ್ಯಗಳನ್ನಾಡಲಿದೆ. ಅದರಂತೆ ಟೀಮ್ ಇಂಡಿಯಾ ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳನ್ನು ಎದುರಿಸಲಿದೆ.

2 / 5
ಈ ಮೂರು ಪಂದ್ಯಗಳಲ್ಲಿ ಭಾರತ ತಂಡವು ಗೆಲುವು ದಾಖಲಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಫೈನಲ್​ಗೇರಲಿದೆ. ಅಂದರೆ ಈ ಬಾರಿಯ ಏಷ್ಯಾಕಪ್ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯುತ್ತಿರುವುದರಿಂದ ಯಾವುದೇ ಸೆಮಿಫೈನಲ್ ಇರುವುದಿಲ್ಲ. ಬದಲಾಗಿ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್​ ಆಡಲಿದೆ.

3 / 5
ಅದರಂತೆ ಟೀಮ್ ಇಂಡಿಯಾ ಮೂರು ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದರೆ ಫೈನಲ್ ಆಡುವುದು ಖಚಿತವಾಗಲಿದೆ. ಇನ್ನು ಎರಡು ಪಂದ್ಯಗಳಲ್ಲಿ ಗೆಲುವು ದಾಖಲಿಸಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಪಡೆದರೂ ಫೈನಲ್​ಗೆ ಅರ್ಹತೆ ಪಡೆಯಬಹುದು. ಆದರೆ ಉಳಿದ ಮೂರು ತಂಡಗಳು ಕೂಡ ಎರಡೆರಡು ಪಂದ್ಯಗಳನ್ನು ಗೆದ್ದರೆ ನೆಟ್​ ರನ್​ ರೇಟ್ ಗಣನೆಗೆ ಬರಲಿದೆ.

4 / 5
ಹೀಗಾಗಿ ಭಾರತ ತಂಡವು ನೇರವಾಗಿ ಫೈನಲ್​ಗೆ ಪ್ರವೇಶಿಸಬೇಕಿದ್ದರೆ ಪಾಕಿಸ್ತಾನ್ (ಸೆಪ್ಟೆಂಬರ್ 21), ಬಾಂಗ್ಲಾದೇಶ್ (ಸೆಪ್ಟೆಂಬರ್ 24) ಹಾಗೂ ಶ್ರೀಲಂಕಾ (ಸೆಪ್ಟೆಂಬರ್ 26) ವಿರುದ್ಧ ಗೆಲುವು ದಾಖಲಿಸಬೇಕು. ಈ ಮೂಲಕ ಟೀಮ್ ಇಂಡಿಯಾ ಸೆಪ್ಟೆಂಬರ್ 28 ರಂದು ನಡೆಯಲಿರುವ ಫೈನಲ್ ಪಂದ್ಯಕ್ಕೆ ಡೈರೆಕ್ಟ್ ಎಂಟ್ರಿ ಪಡೆಯಬಹುದು.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ

NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!