AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

Team India: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿದೆ. ಇದೀಗ ಟಿ20 ವಿಶ್ವಕಪ್​ನಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಬ್ಯಾಕ್ ಟು ಬ್ಯಾಕ್ ಎರಡು ಟ್ರೋಫಿಗಳನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ಮುಂದಿರುವುದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್. ಈ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Mar 17, 2026 | 9:24 AM

Share
2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು.

1 / 7
ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ ವರ್ಲ್ಡ್ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ.

2 / 7
ಇತ್ತ ಫೈನಲ್​ ಆಡಲು ಅರ್ಹತೆ ಪಡೆಯಬೇಕಿದ್ದರೆ ಟಾಪ್-2 ನಲ್ಲಿ ಕಾಣಿಸಿಕೊಳ್ಳಬೇಕು. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡುತ್ತವೆ. ಅದರಂತೆ ಇದೀಗ 6ನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಮುಂದೆ ಇನ್ನೂ 9 ಪಂದ್ಯಗಳಿವೆ.

3 / 7
ಈ 9 ಪಂದ್ಯಗಳಲ್ಲಿ ಭಾರತ ತಂಡವು ಕನಿಷ್ಠ 7 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಲೇಬೇಕು. ಏಳು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಶೇಕಡಾವಾರು ಅಂಕ 62.96% ಗೆ ತಲುಪುತ್ತದೆ. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಫೈನಲ್ ಹಾದಿಯನ್ನು ಸುಲಭಗೊಳಿಸಬಹುದು.

4 / 7
ಇನ್ನು ಟೀಮ್ ಇಂಡಿಯಾ ಉಳಿದ 9 ಮ್ಯಾಚ್​ಗಳಲ್ಲಿ ಎಲ್ಲಾ ಪಂದ್ಯಗಳನ್ನು ಅಥವಾ 8 ಮ್ಯಾಚ್​ಗಳನ್ನು ಗೆದ್ದುಕೊಂಡರೆ ನೇರವಾಗಿ ಫೈನಲ್‌ಗೇರಲಿದೆ. ಅಂದರೆ 9 ರಲ್ಲಿ 7 ಪಂದ್ಯ ಗೆದ್ದರೂ ಕೆಲ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಇತ್ತ 8 ಮ್ಯಾಚ್​ಗಳನ್ನು ಗೆದ್ದುಕೊಂಡರೆ 64% ರಿಂದ 65% ಅಂಕಗಳನ್ನು ಪಡೆದು ಫೈನಲ್​ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು.

5 / 7
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ಭಾರತ ತಂಡದ ಮುಂದಿನ ಎದುರಾಳಿಗಳು ಶ್ರೀಲಂಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ. ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ 5 ಟೆಸ್ಟ್ ಪಂದ್ಯಗಳನ್ನಾಡಲಿದೆ. ಹಾಗೆಯೇ ನ್ಯೂಝಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧ ತಲಾ 2 ಪಂದ್ಯಗಳನ್ನಾಡಬೇಕಿದೆ.

6 / 7
ಇಲ್ಲಿ ಶ್ರೀಲಂಕಾ ಹಾಗೂ ನ್ಯೂಝಿಲೆಂಡ್ ತಂಡಗಳನ್ನು ಅವರ ನೆಲದಲ್ಲಿ ಎದುರಿಸಬೇಕಿರುವುದು ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ 5-0 ಅಂತರದಿಂದ ಗೆಲ್ಲುವುದು ಕೂಡ ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ನವೆಂಬರ್​ವರೆಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಮುಂದುವರೆಯಲಿದೆ ಎನ್ನಬಹುದು.

7 / 7
Follow Us
ಗೃಹ ಸಚಿವರಿಗೇ 50 ಲಕ್ಷ ಲಂಚ ಕೊಟ್ಟಿದ್ರಾ ಇನ್ಸ್‌ಪೆಕ್ಟರ್? ಸಂತ್ರಸ್ತೆ ಆರೋಪ

ಕರವೇ ಹೋರಾಟಕ್ಕೆ ಮಣಿದ ರೈಲ್ವೆ ಇಲಾಖೆ: ಮುಂಬಡ್ತಿ ಪರೀಕ್ಷೆ ಮುಂದೂಡಿಕೆ

ಪುನೀತ್ ಸಮಾಧಿಗೆ ಪೂಜೆ ಮಾಡಿದ ಕುಟುಂಬಸ್ಥರು; ಅಪ್ಪುನ ನೆನಪಿಸಿಕೊಂಡ ಕುಟುಂಬ

ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಇನ್ಸ್‌ಪೆಕ್ಟರ್ ಸಂದೇಶ್ ಹೇಳಿದ್ದಿಷ್ಟು

ಕನ್ನಡದಲ್ಲಿ ರೇಲ್ವೆ ಇಲಾಖೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ

ಅಡುಗೆ ಮನೆಯಲ್ಲಿ ಹೆಡೆ ಎತ್ತಿ ಕುಳಿತಿದ್ದ ನಾಗಪ್ಪ!

ಎಲ್​ಪಿಜಿ ಸಿಲಿಂಡರ್ ಸಮಸ್ಯೆ ಇದ್ರೂ ಇವರಿಗೆ ನೋ ಟೆನ್ಶನ್! ಯಾಕೆ ಗೊತ್ತೇ?

ಮಹಿಳೆ ಜತೆ ಅಕ್ರಮ ಸಂಬಂಧಕ್ಕಾಗಿ ತಡರಾತ್ರಿ ಕಂಪೌಂಡ್ ಹಾರಿದ್ದ ಪೊಲೀಸ್!

‘ವಿಜಯಲಕ್ಷ್ಮೀ ದರ್ಶನ್ಗೆ ಸಿನಿಮಾ ತೋರಿಸೋಕೆ ರೆಡಿ’; ‘ಬಾಸ್’ ನಿರ್ದೇಶಕ

ಪೂಜೆ, ಪುನಸ್ಕಾರ ಮಾಡುವುದರಿಂದ ಕಷ್ಟಗಳು ನಿವಾರಣೆಯಾಗುತ್ತವಾ?