AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC ಫೈನಲ್​ಗೇರಲು ಟೀಮ್ ಇಂಡಿಯಾ ಇನ್ನೆಷ್ಟು ಪಂದ್ಯ ಗೆಲ್ಲಬೇಕು?

Team India: ಭಾರತ ತಂಡವು ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಂಡಿದೆ. ಇದೀಗ ಟಿ20 ವಿಶ್ವಕಪ್​ನಲ್ಲೂ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಹೀಗೆ ಬ್ಯಾಕ್ ಟು ಬ್ಯಾಕ್ ಎರಡು ಟ್ರೋಫಿಗಳನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ಮುಂದಿರುವುದು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್. ಈ ಚಾಂಪಿಯನ್​ಶಿಪ್​ನ ಫೈನಲ್​ಗೇರಲು ಭಾರತದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ.

ಝಾಹಿರ್ ಯೂಸುಫ್
|

Updated on: Mar 17, 2026 | 9:24 AM

Share
2027ರ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ (WTC) ಫೈನಲ್‌ ಲೆಕ್ಕಾಚಾರಗಳು ಶುರುವಾಗಿದೆ. ಅದರಲ್ಲೂ ಪ್ರಸ್ತುತ ಅಂಕ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾಗೆ ಮುಂದಿನ 9 ಮ್ಯಾಚ್​ಗಳು ನಿರ್ಣಾಯಕ. ಅಂದರೆ ಈ ಒಂಭತ್ತು ಪಂದ್ಯಗಳಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರ ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್​ಗೇರಬಹುದು. (PC: BCCI)

1 / 7
ಟೀಮ್ ಇಂಡಿಯಾ ಈವರೆಗೆ ಆಡಿದ 9 ಪಂದ್ಯಗಳಲ್ಲಿ 4 ಗೆಲುವು, 4 ಸೋಲು ಹಾಗೂ 1 ಡ್ರಾ ಸಾಧಿಸಿದೆ. ಈ ಮೂಲಕ ಶೇಕಡಾವಾರು  48.15% ಅಂಕಗಳೊಂದಿಗೆ ವರ್ಲ್ಡ್ ಟೆಸ್ಟ್ ಚಾಂಪಿಯನ್​ಶಿಪ್ ಪಾಯಿಂಟ್ಸ್ ಟೇಬಲ್​ನಲ್ಲಿ 6ನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. (PC: BCCI)

2 / 7
ಇತ್ತ ಫೈನಲ್​ ಆಡಲು ಅರ್ಹತೆ ಪಡೆಯಬೇಕಿದ್ದರೆ ಟಾಪ್-2 ನಲ್ಲಿ ಕಾಣಿಸಿಕೊಳ್ಳಬೇಕು. ಅಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡಗಳು ಫೈನಲ್ ಆಡುತ್ತವೆ. ಅದರಂತೆ ಇದೀಗ 6ನೇ ಸ್ಥಾನದಲ್ಲಿರುವ ಟೀಮ್ ಇಂಡಿಯಾ ಮುಂದೆ ಇನ್ನೂ 9 ಪಂದ್ಯಗಳಿವೆ. (PC: BCCI)

3 / 7
ಈ 9 ಪಂದ್ಯಗಳಲ್ಲಿ ಭಾರತ ತಂಡವು ಕನಿಷ್ಠ 7 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಲೇಬೇಕು. ಏಳು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಶೇಕಡಾವಾರು ಅಂಕ 62.96% ಗೆ ತಲುಪುತ್ತದೆ. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಫೈನಲ್ ಹಾದಿಯನ್ನು ಸುಲಭಗೊಳಿಸಬಹುದು..(PC: BCCI)

ಈ 9 ಪಂದ್ಯಗಳಲ್ಲಿ ಭಾರತ ತಂಡವು ಕನಿಷ್ಠ 7 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಲೇಬೇಕು. ಏಳು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ ಶೇಕಡಾವಾರು ಅಂಕ 62.96% ಗೆ ತಲುಪುತ್ತದೆ. ಈ ಮೂಲಕ ಇತರೆ ತಂಡಗಳನ್ನು ಹಿಂದಿಕ್ಕಿ ಫೈನಲ್ ಹಾದಿಯನ್ನು ಸುಲಭಗೊಳಿಸಬಹುದು.(PC: BCCI)

4 / 7
ಇನ್ನು ಟೀಮ್ ಇಂಡಿಯಾ ಉಳಿದ 9 ಮ್ಯಾಚ್​ಗಳಲ್ಲಿ ಎಲ್ಲಾ ಪಂದ್ಯಗಳನ್ನು ಅಥವಾ 8 ಮ್ಯಾಚ್​ಗಳನ್ನು ಗೆದ್ದುಕೊಂಡರೆ ನೇರವಾಗಿ ಫೈನಲ್‌ಗೇರಲಿದೆ. ಅಂದರೆ 9 ರಲ್ಲಿ 7 ಪಂದ್ಯ ಗೆದ್ದರೂ ಕೆಲ ತಂಡಗಳ ಫಲಿತಾಂಶವನ್ನು ಎದುರು ನೋಡಬೇಕಾಗುತ್ತದೆ. ಇತ್ತ 8 ಮ್ಯಾಚ್​ಗಳನ್ನು ಗೆದ್ದುಕೊಂಡರೆ 64% ರಿಂದ 65% ಅಂಕಗಳನ್ನು ಪಡೆದು ಫೈನಲ್​ ಸ್ಥಾನವನ್ನು ಖಚಿತಪಡಿಸಿಕೊಳ್ಳಬಹುದು. (PC: BCCI)

5 / 7
ಆದರೆ ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ, ಭಾರತ ತಂಡದ ಮುಂದಿನ ಎದುರಾಳಿಗಳು ಶ್ರೀಲಂಕಾ, ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ. ಇಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತವರಿನಲ್ಲಿ 5 ಟೆಸ್ಟ್ ಪಂದ್ಯಗಳನ್ನಾಡಲಿದೆ. ಹಾಗೆಯೇ ನ್ಯೂಝಿಲೆಂಡ್ ಹಾಗೂ ಶ್ರೀಲಂಕಾ ವಿರುದ್ಧ ತಲಾ 2 ಪಂದ್ಯಗಳನ್ನಾಡಬೇಕಿದೆ. (PC: BCCI)

6 / 7
ಇಲ್ಲಿ ಶ್ರೀಲಂಕಾ ಹಾಗೂ ನ್ಯೂಝಿಲೆಂಡ್ ತಂಡಗಳನ್ನು ಅವರ ನೆಲದಲ್ಲಿ ಎದುರಿಸಬೇಕಿರುವುದು ಟೀಮ್ ಇಂಡಿಯಾ ಮುಂದಿರುವ ದೊಡ್ಡ ಸವಾಲು. ಹಾಗೆಯೇ ಆಸ್ಟ್ರೇಲಿಯಾ ವಿರುದ್ಧ 5-0 ಅಂತರದಿಂದ ಗೆಲ್ಲುವುದು ಕೂಡ ಕಷ್ಟಸಾಧ್ಯ ಎಂದೇ ಹೇಳಬಹುದು. ಹೀಗಾಗಿ ನವೆಂಬರ್​ವರೆಗೆ ಟೀಮ್ ಇಂಡಿಯಾದ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಲೆಕ್ಕಾಚಾರ ಮುಂದುವರೆಯಲಿದೆ ಎನ್ನಬಹುದು. (PC: BCCI)

7 / 7
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ

ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ

ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ

ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ

ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ

ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ

ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ

ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ