- Kannada News Photo gallery Cricket photos how many matches to win rcb women to qualify Playoffs 2026
ಪ್ಲೇಆಫ್ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 11 ಪಂದ್ಯಗಳು ಮುಗಿದಿವೆ. ಈ ಹನ್ನೊಂದು ಪಂದ್ಯಗಳ ಬಳಿಕ ಕೂಡ ಸೋಲಿಲ್ಲದೆ ಮುಂದುವರೆಯುತ್ತಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಈ ಗೆಲುವಿನ ನಾಗಾಲೋಟದೊಂದಿಗೆ ಆರ್ಸಿಬಿ ಪಡೆ ಪ್ಲೇಆಫ್ನತ್ತ ಹೆಜ್ಜೆಯನ್ನಿಟ್ಟಿದೆ. ಅದರಂತೆ ಈ ಬಾರಿಯ ಟೂರ್ನಿಯಲ್ಲೂ ಆರ್ಸಿಬಿ ಪ್ಲೇಆಫ್ಗೇರುವುದು ಬಹುತೇಕ ಖಚಿತ ಎನ್ನಬಹುದು.
Updated on: Jan 18, 2026 | 8:53 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದೆ. ಈವರೆಗೆ ಆಡಿದ 4 ಮ್ಯಾಚ್ಗಳಲ್ಲೂ ಭರ್ಜರಿ ಜಯ ಸಾಧಿಸಿರುವ ಆರ್ಸಿಬಿ ತಂಡವು ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಅದು ಕೂಡ +1.600 ನೆಟ್ ರನ್ ರೇಟ್ನೊಂದಿಗೆ.

ಅತ್ಯುತ್ತಮ ನೆಟ್ ರನ್ ರೇಟ್ನೊಂದಿಗೆ ರಾಯಲ್ ಪಡೆಯುವ ಪ್ಲೇಆಫ್ನತ್ತ ಮುಖ ಮಾಡಿದೆ. ಅಂದರೆ ಉಳಿದ ನಾಲ್ಕು ಮ್ಯಾಚ್ಗಳಲ್ಲಿ ಆರ್ಸಿಬಿ ತಂಡವು 2 ಪಂದ್ಯಗಳಲ್ಲಿ ಭರ್ಜರಿ ಜಯ ಸಾಧಿಸಿದರೆ ಪ್ಲೇಆಫ್ ಆಡುವುದು ಖಚಿತವಾಗಲಿದೆ. ಇನ್ನು ಮೂರು ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ನೇರವಾಗಿ ಫೈನಲ್ಗೇರಲಿದೆ.

ಏಕೆಂದರೆ ಬಹುತೇಕ ಎಲ್ಲಾ ತಂಡಗಳು ಕನಿಷ್ಠ 4 ಪಂದ್ಯಗಳನ್ನಾಡಿದೆ. ಈ ನಾಲ್ಕು ಮ್ಯಾಚ್ಗಳ ಮೂಲಕ 5 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವುದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮಾತ್ರ. ಅದರಲ್ಲೂ ದ್ವಿತೀಯ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು 5 ಪಂದ್ಯಗಳಿಂದ 4 ಪಾಯಿಂಟ್ಸ್ ಮಾತ್ರ ಕಲೆಹಾಕಿದೆ.

ಮುಂಬೈ ಇಂಡಿಯನ್ಸ್ ತಂಡವು ಇನ್ನುಳಿದ 3 ಪಂದ್ಯಗಳಲ್ಲೂ ಜಯ ಸಾಧಿಸಿದರೆ ಒಟ್ಟು 10 ಅಂಕಗಳನ್ನು ಮಾತ್ರ ಪಡೆಯಲಿದೆ. ಹಾಗೆಯೇ 4 ಪಂದ್ಯಗಳಲ್ಲಿ 2 ಜಯ ಸಾಧಿಸಿರುವ ಗುಜರಾತ್ ಜೈಂಟ್ಸ್ ಮುಂದಿನ 4 ಪಂದ್ಯಗಳಲ್ಲಿ ಗೆಲುವು ದಾಖಲಿಸಿದರೆ ಒಟ್ಟು 12 ಪಾಯಿಂಟ್ಸ್ ಪಡೆಯಲಿದೆ.

ಇನ್ನು 5 ಮ್ಯಾಚ್ಗಳನ್ನಾಡಿರುವ ಯುಪಿ ವಾರಿಯರ್ಸ್ ಮುಂದಿನ 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಪಡೆಯುವ ಒಟ್ಟು ಅಂಕಗಳು 10. ಹಾಗೆಯೇ ಕೊನೆಯ ಸ್ಥಾನದಲ್ಲಿರುವ ಡೆಲ್ಲಿ ಕ್ಯಾಪಿಟಲ್ಸ್ ಮುಂದಿನ 4 ಪಂದ್ಯಗಳಲ್ಲೂ ಜಯ ಸಾಧಿಸಿದರೆ 8 ಅಂಕಗಳನ್ನು ಮಾತ್ರ ಪಡೆಯಲಿದೆ.

ಇತ್ತ ಮೊದಲ ಸ್ಥಾನದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ 4 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದರೆ 12 ಅಂಕಗಳನ್ನು ಪಡೆಯಲಿದೆ. ಈ ಮೂಲಕ ಟಾಪ್-2 ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ. ಇನ್ನು 4 ರಲ್ಲಿ 3 ಮ್ಯಾಚ್ ಗೆದ್ದರೆ ಅಗ್ರಸ್ಥಾನದೊಂದಿಗೆ ನೇರವಾಗಿ ಫೈನಲ್ಗೆ ಪ್ರವೇಶಿಸಲಿದೆ. ಹೀಗಾಗಿ ಆರ್ಸಿಬಿ ತಂಡವು 14 ಅಂಕಗಳೊಂದಿಗೆ ನೇರವಾಗಿ ಫೈನಲ್ಗೆ ಪ್ರವೇಶಿಸುವುದನ್ನು ಎದುರು ನೋಡಬಹುದು.
