AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇರವಾಗಿ ಫೈನಲ್​ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿಯಲ್ಲಿ ಒಂದೇ ಒಂದು ಸೋಲು ಕಾಣದೇ 10 ಅಂಕಗಳನ್ನು ಪಡೆದಿರುವ ಏಕೈಕ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ 10 ಅಂಕಗಳೊಂದಿಗೆ ಆರ್​ಸಿಬಿ ತಂಡ ಪ್ಲೇಆಫ್​ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಮ್ಯಾಚ್​ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೈನಲ್​ಗೇರಲು ಉತ್ತಮ ಅವಕಾಶವಿದೆ.

ಝಾಹಿರ್ ಯೂಸುಫ್
|

Updated on: Jan 20, 2026 | 8:23 AM

Share
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್​ಗಳಲ್ಲೂ ಗೆಲ್ಲುವ ಮೂಲಕ ಆರ್​ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

1 / 6
ಇತ್ತ ಪ್ಲೇಆಫ್​ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್​ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ ಪಟ್ಟಿಯಲ್ಲಿ ಟಾಪ್-3 ಸ್ಥಾನಗಳನ್ನು ಪಡೆದಿರುವ ತಂಡಗಳು.

2 / 6
ಅದರಲ್ಲೂ ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯುತ್ತದೆ. ಇನ್ನುಳಿದ ಎರಡು ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್​​​ಗೆ ಪ್ರವೇಶಿಸುತ್ತದೆ.

3 / 6
ಇದೀಗ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್​ ಆಡುವುದು ಖಚಿತವಾಗಲಿದೆ. ಏಕೆಂದರೆ ಆರ್​ಸಿಬಿ ತಂಡವನ್ನು ಹೊರತುಪಡಿಸಿ ಯಾವುದೇ ತಂಡಕ್ಕೆ 12 ಅಂಕಗಳನ್ನು ಗಳಿಸಲು ಅವಕಾಶವಿಲ್ಲ.

4 / 6
ಎಲ್ಲಾ ತಂಡಗಳು ಈಗಾಗಲೇ ಐದು ಮ್ಯಾಚ್​ಗಳನ್ನಾಡಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ತಲಾ 2 ಗೆಲುವು ದಾಖಲಿಸಿ ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನುಳಿದ ಮೂರು ಮ್ಯಾಚ್​ಗಳಲ್ಲಿ ಗೆದ್ದರೂ ಈ ತಂಡಗಳ ಒಟ್ಟು 10 ಅಂಕಗಳ ನ್ನು ಮಾತ್ರ ಪಡೆಯಲಿದೆ.

5 / 6
ಆದರೆ ಈಗಾಗಲೇ 10 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಮ್ಯಾಚ್​ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಒಟ್ಟು 12 ಅಂಕಗಳನ್ನು ತನ್ನದಾಗಿಸಿಕೊಳ್ಳಬಹುದು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿ ಫೈನಲ್​ಗೆ ಅರ್ಹತೆ ಪಡೆಯಬಹುದು. ಅದರಂತೆ ಈ ಬಾರಿಯ ಟೂರ್ನಿಯಲ್ಲಿ ಆರ್​ಸಿಬಿ ಫೈನಲ್ ಆಡುವುದನ್ನು ಎದುರು ನೋಡಬಹುದು.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಚಂದನವನದಲ್ಲಿ ಹಲವು ಸಮಸ್ಯೆ: ಪರಿಹಾರ ಹುಡುಕಲು ಮುಂದಾದ ವಾಣಿಜ್ಯ ಮಂಡಳಿ

ಕಾಕ್ರೋಚ್‌ ಪಕ್ಷದ ಸಂಸ್ಥಾಪಕ ಯಾರು?ಭಾರತದ ಬಗ್ಗೆ ಧ್ವನಿ ಎತ್ತಿದ್ದೇಕೆ?

ಕೋರ್ಟ್​ ಮುಂದೆ ಶರಣಾದ ತ್ವಿಶಾ ಶರ್ಮಾ ಗಂಡನ ಕಾನೂನು ಲೈಸೆನ್ಸ್ ರದ್ದು

ಕೇದಾರನಾಥ ಮಾರ್ಗದ ಸೋನ್‌ಪ್ರಯಾಗ್ ಬಳಿ ಪ್ರವಾಸಿಗರ ಮೇಲೆ ಉರುಳಿದ ಬಂಡೆಗಳು

3 ಜೀವದಾನಗಳ ಲಾಭ ಪಡೆದು ಅರ್ಧಶತಕ ಬಾರಿಸಿದ ಅಭಿಷೇಕ್

4 ವರ್ಷಗಳ ಬಳಿಕ ಸಿಕ್ಕ ಮಗನನ್ನು ನೋಡಿ ಕಣ್ಣೀರು ಹಾಕಿದ ಅಮ್ಮ

ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ಭಾರಿ ಗಾಳಿಗೆ ಮುರಿದು ಬಿದ್ದ ಬೃಹತ್ ಫಲಕ

ನೋರಾ ಫತೇಹಿ ಮ್ಯೂಸಿಕ್ ವಿಡಿಯೋ, ತೆರೆ ಹಿಂದಿನ ಶ್ರಮ ತೋರಿಸಿದ ನಟಿ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದು ಸೈ ಎನಿಸಿಕೊಂಡ ಬೀದರ್ ರೈತ

ನಿಯಂತ್ರಣ ತಪ್ಪಿದ ಬೈಕ್‌ನ ಅಬ್ಬರ; ಕಬ್ಬಿಣದ ಗೇಟ್ ಪುಡಿ ಪುಡಿ, CCTVನಲ್ಲಿ ಸ