- Kannada News Photo gallery Cricket photos How many Matches to win rcb womens to qualify wpl 2026 final
ನೇರವಾಗಿ ಫೈನಲ್ಗೇರಲು RCB ಇನ್ನೆಷ್ಟು ಪಂದ್ಯ ಗೆಲ್ಲಬೇಕು?
WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ನ 4ನೇ ಆವೃತ್ತಿಯಲ್ಲಿ ಒಂದೇ ಒಂದು ಸೋಲು ಕಾಣದೇ 10 ಅಂಕಗಳನ್ನು ಪಡೆದಿರುವ ಏಕೈಕ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು. ಈ 10 ಅಂಕಗಳೊಂದಿಗೆ ಆರ್ಸಿಬಿ ತಂಡ ಪ್ಲೇಆಫ್ಗೆ ಎಂಟ್ರಿ ಕೊಟ್ಟಿದೆ. ಇನ್ನುಳಿದ ಮೂರು ಮ್ಯಾಚ್ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಫೈನಲ್ಗೇರಲು ಉತ್ತಮ ಅವಕಾಶವಿದೆ.
Updated on: Jan 20, 2026 | 8:23 AM

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4 ರಲ್ಲಿ ಕೇವಲ 5 ಪಂದ್ಯಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್ಗೆ ಪ್ರವೇಶಿಸಿದೆ. ಆಡಿರುವ ಐದು ಮ್ಯಾಚ್ಗಳಲ್ಲೂ ಗೆಲ್ಲುವ ಮೂಲಕ ಆರ್ಸಿಬಿ ಪಡೆ ಒಟ್ಟು 10 ಅಂಕಗಳನ್ನು ಪಡೆದಿದ್ದು, ಈ ಮೂಲಕ ಟಾಪ್-3 ನಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಂಡಿದೆ.

ಇತ್ತ ಪ್ಲೇಆಫ್ ಆಡುವುದನ್ನು ಖಚಿತಪಡಿಸಿಕೊಂಡಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ನೇರವಾಗಿ ಫೈನಲ್ಗೇರಲು ಉತ್ತಮ ಅವಕಾಶವಿದೆ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ನಲ್ಲಿ ಪ್ಲೇಆಫ್ ಆಡಲಿರುವುದು ಅಂಕ ಪಟ್ಟಿಯಲ್ಲಿ ಟಾಪ್-3 ಸ್ಥಾನಗಳನ್ನು ಪಡೆದಿರುವ ತಂಡಗಳು.

ಅದರಲ್ಲೂ ಲೀಗ್ ಹಂತದ ಮುಕ್ತಾಯದ ವೇಳೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸುವ ತಂಡವು ನೇರವಾಗಿ ಫೈನಲ್ಗೆ ಅರ್ಹತೆ ಪಡೆಯುತ್ತದೆ. ಇನ್ನುಳಿದ ಎರಡು ತಂಡಗಳು ಎಲಿಮಿನೇಟರ್ ಪಂದ್ಯವಾಡಲಿದೆ. ಇದರಲ್ಲಿ ಗೆಲ್ಲುವ ತಂಡವು ಫೈನಲ್ಗೆ ಪ್ರವೇಶಿಸುತ್ತದೆ.

ಇದೀಗ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮೊದಲ ಸ್ಥಾನದಲ್ಲಿದೆ. ಹೀಗಾಗಿ ಇನ್ನುಳಿದ ಮೂರು ಮ್ಯಾಚ್ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಫೈನಲ್ ಆಡುವುದು ಖಚಿತವಾಗಲಿದೆ. ಏಕೆಂದರೆ ಆರ್ಸಿಬಿ ತಂಡವನ್ನು ಹೊರತುಪಡಿಸಿ ಯಾವುದೇ ತಂಡಕ್ಕೆ 12 ಅಂಕಗಳನ್ನು ಗಳಿಸಲು ಅವಕಾಶವಿಲ್ಲ.

ಎಲ್ಲಾ ತಂಡಗಳು ಈಗಾಗಲೇ ಐದು ಮ್ಯಾಚ್ಗಳನ್ನಾಡಿದ್ದು, ಇದರಲ್ಲಿ ಮುಂಬೈ ಇಂಡಿಯನ್ಸ್, ಗುಜರಾತ್ ಜೈಂಟ್ಸ್ ಹಾಗೂ ಯುಪಿ ವಾರಿಯರ್ಸ್ ತಂಡಗಳು ತಲಾ 2 ಗೆಲುವು ದಾಖಲಿಸಿ ಒಟ್ಟು 4 ಅಂಕಗಳನ್ನು ಪಡೆದುಕೊಂಡಿದೆ. ಇನ್ನುಳಿದ ಮೂರು ಮ್ಯಾಚ್ಗಳಲ್ಲಿ ಗೆದ್ದರೂ ಈ ತಂಡಗಳ ಒಟ್ಟು 10 ಅಂಕಗಳ ನ್ನು ಮಾತ್ರ ಪಡೆಯಲಿದೆ.

ಆದರೆ ಈಗಾಗಲೇ 10 ಅಂಕಗಳನ್ನು ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂದಿನ ಮೂರು ಮ್ಯಾಚ್ಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಒಟ್ಟು 12 ಅಂಕಗಳನ್ನು ತನ್ನದಾಗಿಸಿಕೊಳ್ಳಬಹುದು. ಈ ಮೂಲಕ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಅಲಂಕರಿಸಿ ಫೈನಲ್ಗೆ ಅರ್ಹತೆ ಪಡೆಯಬಹುದು. ಅದರಂತೆ ಈ ಬಾರಿಯ ಟೂರ್ನಿಯಲ್ಲಿ ಆರ್ಸಿಬಿ ಫೈನಲ್ ಆಡುವುದನ್ನು ಎದುರು ನೋಡಬಹುದು.
