- Kannada News Photo gallery Cricket photos How many runs does Virat Kohli need to break Sachin's record
ಸಚಿನ್ರ ಸಾರ್ವಕಾಲಿಕ ದಾಖಲೆ ಮುರಿಯಲು ವಿರಾಟ್ ಕೊಹ್ಲಿ ಇನ್ನೆಷ್ಟು ರನ್ಗಳಿಸಬೇಕು?
Virat kohli Record: ನ್ಯೂಝಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ 93 ರನ್ ಗಳಿಸಿದ್ದಾರೆ. ಈ ಅರ್ಧಶತಕದೊಂದಿಗೆ ಕಿಂಗ್ ಕೊಹ್ಲಿ ವಿಶೇಷ ದಾಖಲೆಯನ್ನು ನಿರ್ಮಿಸಿದ್ದಾರೆ. ಈ ದಾಖಲೆಯೊಂದಿಗೆ ಸಚಿನ್ ತೆಂಡೂಲ್ಕರ್ ಅವರ ವಿಶ್ವ ದಾಖಲೆಯತ್ತ ದಾಪುಗಾಲಿಟ್ಟಿದ್ದಾರೆ.
Updated on: Jan 14, 2026 | 8:10 AM

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ (Virat Kohli) ಹೆಸರಿಗೆ ಮತ್ತೊಂದು ದಾಖಲೆ ಸೇರ್ಪಡೆಯಾಗಿದೆ. ಈ ದಾಖಲೆಯೊಂದಿಗೆ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಅದು ಕೂಡ ಶ್ರೀಲಂಕಾದ ಕುಮಾರ ಸಂಗಾಕ್ಕರ ಅವರನ್ನು ಹಿಂದಿಕ್ಕುವ ಮೂಲಕ.

2000 ರಿಂದ 2015 ರವರೆಗೆ ಶ್ರೀಲಂಕಾ ಪರ ಕಣಕ್ಕಿಳಿದಿದ್ದ ಕುಮಾರ ಸಂಗಕ್ಕಾರ ಒಟ್ಟು 594 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 666 ಇನಿಂಗ್ಸ್ ಆಡಿರುವ ಅವರು 63 ಶತಕ ಹಾಗೂ 153 ಅರ್ಧಶತಕಗಳೊಂದಿಗೆ ಒಟ್ಟು 28016 ರನ್ ಕಲೆಹಾಕಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ಅತ್ಯಧಿಕ ರನ್ಗಳಿಸಿದ 2ನೇ ಬ್ಯಾಟರ್ ಎನಿಸಿಕೊಂಡಿದ್ದರು. ಇದೀಗ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿದಿದ್ದಾರೆ.

2008 ರಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಆಡುತ್ತಿರುವ ವಿರಾಟ್ ಕೊಹ್ಲಿ ಈವರೆಗೆ 557 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 624 ಇನಿಂಗ್ಸ್ ಆಡಿರುವ ಕಿಂಗ್ ಕೊಹ್ಲಿ 84 ಶತಕ ಹಾಗೂ 146 ಅರ್ಧಶತಕಗಳೊಂದಿಗೆ 28068 ರನ್ ಕಲೆಹಾಕಿದ್ದಾರೆ. ಈ ಮೂಲಕ ಇಂಟರ್ನ್ಯಾಷನಲ್ ಕ್ರಿಕೆಟ್ನಲ್ಲಿ ಅತೀ ಹೆಚ್ಚು ರನ್ಗಳಿಸಿದ ವಿಶ್ವದ 2ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್.

1989 ರಿಂದ 2013 ರವರೆಗೆ ಸಚಿನ್ ತೆಂಡೂಲ್ಕರ್ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 664 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 782 ಇನಿಂಗ್ಸ್ಗಳಲ್ಲಿ ಬ್ಯಾಟ್ ಬೀಸಿದ್ದ ಅವರು 100 ಶತಕ ಹಾಗೂ 164 ಅರ್ಧಶತಕಗಳೊಂದಿಗೆ ಒಟ್ಟು 34357 ರನ್ಗಳಿಸಿದ್ದಾರೆ. ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ರನ್ ಸರದಾರರ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿರುವ ವಿರಾಟ್ ಕೊಹ್ಲಿಯ ಮುಂದಿರುವುದು ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ. ಈ ದಾಖಲೆ ಮುರಿಯಲು ಕೊಹ್ಲಿಗೆ ಇನ್ನೂ 6289 ರನ್ಗಳು ಬೇಕಿದೆ. ಈಗಾಗಲೇ ಟೆಸ್ಟ್ ಹಾಗೂ ಟಿ20 ಕ್ರಿಕೆಟ್ಗೆ ಗುಡ್ ಬೈ ಹೇಳಿರುವ ಕೊಹ್ಲಿ ಮುಂಬರುವ ದಿನಗಳಲ್ಲಿ ಏಕದಿನ ಪಂದ್ಯಗಳ ಮೂಲಕ 6 ಸಾವಿರಕ್ಕೂ ಅಧಿಕ ರನ್ಗಳಿಸುವುದು ಕಷ್ಟಸಾಧ್ಯ. ಹೀಗಾಗಿ ಸಚಿನ್ ತೆಂಡೂಲ್ಕರ್ ಅವರ ಸಾರ್ವಕಾಲಿಕ ದಾಖಲೆ ಸಾರ್ವಕಾಲಿಕವಾಗಿಯೇ ಉಳಿಯಲಿದೆ.

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.
Read More




