AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023 Final: ಐಪಿಎಲ್ ಫೈನಲ್​ನಲ್ಲಿ CSK ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು..!

IPL 2023 Final CSK vs GT: 2 ವರ್ಷಗಳ ಬ್ಯಾನ್ ಬಳಿಕ 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್​ಕೆ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

TV9 Web
| Edited By: |

Updated on: May 27, 2023 | 9:22 PM

Share
IPL 2023 CSK vs GT: ಐಪಿಎಲ್​ನ 16ನೇ ಆವೃತ್ತಿಗೆ ಭಾನುವಾರ ತೆರೆ ಬೀಳಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ.

1 / 8
ವಿಶೇಷ ಎಂದರೆ ಈ ಪಂದ್ಯದಲ್ಲಿ ಸಿಎಸ್​ಕೆ ತಂಡ ಗೆದ್ದರೆ ಐದನೇ ಬಾರಿಗೆ ಚಾಂಪಿಯನ್​ ಪಟ್ಟಕ್ಕೇರಲಿದೆ. ಸಿಎಸ್​ಕೆ ಸೋತರೆ ಗುಜರಾತ್ ಟೈಟಾನ್ಸ್ 2ನೇ ಬಾರಿ ಕಿರೀಟ ಮುಡಿಗೇರಿಸಿಕೊಳ್ಳಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ಕೇವಲ 2 ಸೀಸನ್​ಗಳ ಮೂಲಕ 2 ಬಾರಿ ಫೈನಲ್​ಗೇರಿದರೆ, ಸಿಎಸ್​ಕೆ ತಂಡವು 14 ಸೀಸನ್​ಗಳ ಮೂಲಕ 10ನೇ ಬಾರಿ ಫೈನಲ್ ಪ್ರವೇಶಿಸಿದೆ.

2 / 8
ಆದರೆ 9 ಬಾರಿ ಫೈನಲ್ ಆಡಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಅಂತಿಮ ಪಂದ್ಯದಲ್ಲಿ ಗೆದ್ದಿದ್ದಕ್ಕಿಂತ ಸೋತಿದ್ದೇ ಹೆಚ್ಚು. ಅಂದರೆ ಹತ್ತು ಫೈನಲ್​ಗಳಲ್ಲಿ ಧೋನಿ ಪಡೆ 5 ಬಾರಿ ಸೋಲನುಭವಿಸಿದೆ.

3 / 8
2008 ರಲ್ಲಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದ್ದ ಸಿಎಸ್​ಕೆ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೋತು ರನ್ನರ್​ ಅಪ್ ಪಟ್ಟಕ್ಕೆ ತೃಪ್ತಿಪಟ್ಟುಕೊಂಡಿತ್ತು. ಇದಾದ ಬಳಿಕ 2010 ರಲ್ಲಿ ಮುಂಬೈ ಇಂಡಿಯನ್ಸ್​ ಅನ್ನು ಸೋಲಿಸಿ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು.

4 / 8
ಇನ್ನು 2011 ರಲ್ಲಿ ಆರ್​ಸಿಬಿಗೆ ಸೋಲುಣಿಸಿ ಚಾಂಪಿಯನ್ ಆದರೆ, 2012 ರ ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಸೋಲನುಭವಿಸಿತು. ಹಾಗೆಯೇ 2013 ರಲ್ಲಿ ಸಿಎಸ್​ಕೆಗೆ ಸೋಲುಣಿಸಿ ಮುಂಬೈ ಇಂಡಿಯನ್ಸ್ ತಂಡವು ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿತು. 2015 ರಲ್ಲಿ ಮತ್ತೆ ಫೈನಲ್ ಪ್ರವೇಶಿಸಿದ ಸಿಎಸ್​ಕೆ ತಂಡವು ಮುಂಬೈ ಇಂಡಿಯನ್ಸ್ ವಿರುದ್ಧ ಮುಗ್ಗರಿಸಿತು.

5 / 8
2 ವರ್ಷಗಳ ಬ್ಯಾನ್ ಬಳಿಕ 2018 ರಲ್ಲಿ ಮತ್ತೆ ಕಂಬ್ಯಾಕ್ ಮಾಡಿದ ಸಿಎಸ್​ಕೆ ತಂಡವು ಸನ್​ರೈಸರ್ಸ್ ಹೈದರಾಬಾದ್ ವಿರುದ್ಧ ಗೆದ್ದು ಮತ್ತೆ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆದರೆ 2019 ರ ಫೈನಲ್​ನಲ್ಲಿ ಸಿಎಸ್​ಕೆ ತಂಡಕ್ಕೆ ಮುಂಬೈ ಇಂಡಿಯನ್ಸ್ ಸೋಲುಣಿಸಿತು.

6 / 8
ಇದಾದ ಬಳಿಕ 2021 ರಲ್ಲಿ ಮತ್ತೆ ಫೈನಲ್​ಗೆ ಪ್ರವೇಶಿಸಿದ ಸಿಎಸ್​ಕೆ ತಂಡವು ಕೆಕೆಆರ್ ವಿರುದ್ಧ ಜಯ ಸಾಧಿಸಿತು. ಇದೀಗ 10ನೇ ಬಾರಿಗೆ ಫೈನಲ್​ಗೆ ಲಗ್ಗೆಯಿಟ್ಟಿದೆ.

7 / 8
ಅಂದರೆ 2008, 2012, 2013, 2015, 2019 ರ ಐಪಿಎಲ್​ ಫೈನಲ್​ನಲ್ಲಿ ಸೋತಿರುವ ಸಿಎಸ್​ಕೆ ತಂಡವು ಈ ಬಾರಿ ಗೆದ್ದರೆ 5 ಚಾಂಪಿಯನ್​ ಪಟ್ಟ ಅಲಂಕರಿಸಿದ 2ನೇ ತಂಡ ಎನಿಸಿಕೊಳ್ಳಲಿದೆ. ಈ ಪಟ್ಟಿಯಲ್ಲಿ 6 ಬಾರಿ ಫೈನಲ್ ಆಡಿ 5 ಸಲ ಪ್ರಶಸ್ತಿ ಮುಡಿಗೇರಿಸಿಕೊಂಡ ಮುಂಬೈ ಇಂಡಿಯನ್ಸ್ ಅಗ್ರಸ್ಥಾನದಲ್ಲಿದೆ.

8 / 8
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!

ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​

‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್

ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!

ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ

ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?

ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್

ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು

ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು