AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲೇಆಫ್​ಗೇರಿಲ್ಲ… ಹೀಗಾದ್ರೆ RCB ಟೂರ್ನಿಯಿಂದಲೇ ಔಟ್..!

RCB Playoff Scenarios: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ಲೇಆಫ್​ಗೇರಲಿದೆಯಾ? 16 ಅಂಕಗಳನ್ನು ಪಡೆದರೂ ಸಹ ಇಂತಹದೊಂದು ಪ್ರಶ್ನೆ ಮೂಡಲು ಮುಖ್ಯ ಕಾರಣ ಪ್ರಸ್ತುತ ಅಂಕ ಪಟ್ಟಿ. ಏಕೆಂದರೆ ಆರ್​ಸಿಬಿ ತಂಡ ಮುಂಬರುವ ಪಂದ್ಯಗಳಲ್ಲಿ ತಂಡ ಸಣ್ಣ ತಪ್ಪು ಮಾಡಿದರೂ ಸಹ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ. ಆರ್‌ಸಿಬಿ ಎಲಿಮಿನೇಟ್ ಆಗಲು ಇರುವ ಪ್ರಮುಖ ಕಾರಣಗಳು ಮತ್ತು ಸಮೀಕರಣಗಳು ಇಲ್ಲಿವೆ.

ಝಾಹಿರ್ ಯೂಸುಫ್
|

Updated on:May 14, 2026 | 2:28 PM

Share
IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಪ್ರದರ್ಶನ ನೀಡಿದೆ. ಈ ಪ್ರದರ್ಶನದೊಂದಿಗೆ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಸಿದೆ. ಈ ಅಗ್ರಸ್ಥಾನದ ಹೊರತಾಗಿಯೂ ಆರ್​ಸಿಬಿ ತಂಡದ ಪ್ಲೇಆಫ್ ಪ್ರವೇಶ ಇನ್ನೂ ಸಹ ಖಾತರಿಯಾಗಿಲ್ಲ!

1 / 9
ಏಕೆಂದರೆ ಪ್ರಸ್ತುತ ಅಂಕ ಪಟ್ಟಿಯಲ್ಲಿರುವ 7 ತಂಡಗಳಿಗೆ 16+ ಅಂಕಗಳನ್ನು ಗಳಿಸಲು ಅವಕಾಶವಿದೆ. ಹೀಗಾಗಿ ಮುಂದಿನ ಪಂದ್ಯಗಳಲ್ಲಿ ಆರ್​ಸಿಬಿ ಎಡವಿದರೆ ಟೂರ್ನಿಯಿಂದಲೇ ಹೊರಬೀಳಬಹುದು. ಹೀಗೆ ಆಘಾತಕಾರಿಯಾಗಿ ಹೊರಬೀಳಲು ಕಾರಣವಾಗುವ ಸಮೀಕರಣಗಳು ಈ ಕೆಳಗಿನಂತಿವೆ...

2 / 9
ಗುಜರಾತ್ ಟೈಟಾನ್ಸ್: ಗುಜರಾತ್ ಟೈಟಾನ್ಸ್ ತಂಡವು ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿದೆ. ಶುಭ್​ಮನ್ ಗಿಲ್ ಪಡೆಯು ಮುಂದಿನ ಎರಡು ಮ್ಯಾಚ್​ಗಳಲ್ಲಿ ಜಯ ಸಾಧಿಸಿದರೆ ಒಟ್ಟು 20 ಅಂಕಗಳೊಂದಿಗೆ ಪ್ಲೇಆಫ್​ಗೆ ಎಂಟ್ರಿ ಕೊಡಲಿದೆ. ಇಲ್ಲಿ ಗುಜರಾತ್ ಟೈಟಾನ್ಸ್ ತಂಡದ ಮುಂದಿನ ಮ್ಯಾಚ್​ಗಳು ಸಿಎಸ್​ಕೆ ಮತ್ತು ಕೆಕೆಆರ್ ವಿರುದ್ಧ. ಈ ಗೆಲುವುಗಳೊಂದಿಗೆ ಗುಜರಾತ್ ಟೈಟಾನ್ಸ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸಿ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಬಹುದು.

3 / 9
ಸನ್​ರೈಸರ್ಸ್ ಹೈದರಾಬಾದ್: ಪ್ರಸ್ತುತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ಒಟ್ಟು 14 ಅಂಕಗಳನ್ನು ಹೊಂದಿದೆ. ಮುಂದಿನ ಎರಡು ಮ್ಯಾಚ್​ಗಳಲ್ಲಿ ಎಸ್​ಆರ್​ಹೆಚ್ ಗೆದ್ದರೆ ಒಟ್ಟು 18 ಅಂಕಗಳನ್ನು ಪಡೆಯಲಿದೆ. ಇಲ್ಲಿ ಸನ್​ರೈಸರ್ಸ್ ಹೈದರಾಬಾದ್ ತಂಡದ ಎದುರಾಳಿಗಳು ಸಿಎಸ್​ಕೆ ಮತ್ತು ಆರ್​ಸಿಬಿ. ಎಸ್​ಆರ್​ಹೆಚ್ ವಿರುದ್ಧ ಆರ್​ಸಿಬಿ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಇದರಿಂದ ಸನ್​ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ನೆಟ್ ರನ್ ಹಾಗೂ 16 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಲಿದೆ.

4 / 9
ಪಂಜಾಬ್ ಕಿಂಗ್ಸ್​: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಂದಿನ ಎದುರಾಳಿ ಪಂಜಾಬ್ ಕಿಂಗ್ಸ್​. ಮುಂಬೈ ಇಂಡಿಯನ್ಸ್ ಹಾಗೂ ಆರ್​ಸಿಬಿ ವಿರುದ್ಧ ಗೆದ್ದರೆ ಶ್ರೇಯಸ್ ಅಯ್ಯರ್ ಪಡೆ ಗೆದ್ದರೆ ಒಟ್ಟು 17 ಅಂಕಗಳನ್ನು ಪಡೆಯಲಿದೆ. ಇದರಿಂದಾಗಿ ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಲಿದೆ. ಇನ್ನು ಕೊನೆಯ ಮ್ಯಾಚ್​ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಪಂಜಾಬ್ ಕಿಂಗ್ಸ್ ತಂಡಕ್ಕೆ ಒಟ್ಟು 19 ಅಂಕಗಳನ್ನು ಪಡೆಯಲು ಅವಕಾಶವಿದೆ.

5 / 9
ರಾಜಸ್ಥಾನ್ ರಾಯಲ್ಸ್: ರಿಯಾನ್ ಪರಾಗ್ ಮುಂದಾಳತ್ವದ ರಾಜಸ್ಥಾನ್ ರಾಯಲ್ಸ್​ ಒಟ್ಟು 12 ಅಂಕಗಳನ್ನು ಹೊಂದಿದೆ. ಅಲ್ಲದೆ ಇನ್ನೂ ಮೂರು ಮ್ಯಾಚ್​ಗಳಿವೆ. ಈ ಮೂರು ಪಂದ್ಯಗಳಲ್ಲಿ ಆರ್​ಆರ್​ ತಂಡವು ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಎದುರಿಸಲಿದೆ. ಈ ಪಂದ್ಯಗಳಲ್ಲಿ ಜಯ ಸಾಧಿಸಿದರೆ ಒಟ್ಟು 18 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಬಹುದು.

6 / 9
ಅಂದರೆ ಗುಜರಾತ್ ಟೈಟಾನ್ಸ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಜಯ ಸಾಧಿಸಿದರೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನವನ್ನು ಅಲಂಕರಿಲಿದೆ. ಇನ್ನು ಸನ್​ರೈಸರ್ಸ್ ಹೈದರಾಬಾದ್ ತಂಡವು ಮುಂದಿನ 2 ಪಂದ್ಯಗಳಲ್ಲಿ ಗೆದ್ದರೆ ಒಟ್ಟು 18 ಅಂಕಗಳನ್ನು ಪಡೆಯಲಿದೆ. ಅತ್ತ ಪಂಜಾಬ್ ಕಿಂಗ್ಸ್ ಮುಂದಿನ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದರೆ 19 ಅಂಕಗಳನ್ನು ತನ್ನದಾಗಿಸಿಕೊಳ್ಳಲಿದೆ. ಇನ್ನು ರಾಜಸ್ಥಾನ್ ರಾಯಲ್ಸ್ ತಂಡವು ಮುಂದಿನ ಮೂರು ಪಂದ್ಯಗಳ ಮೂಲಕ ಒಟ್ಟು 18 ಅಂಕಗಳನ್ನು ಪಡೆಯಲು ಅವಕಾಶವಿದೆ.

7 / 9
ಇಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಕೊನೆಯ ಎರಡು ಪಂದ್ಯಗಳನ್ನಾಡಲಿರುವುದು ಪ್ಲೇಆಫ್ ರೇಸ್​ನಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ ಎಂಬುದು ಉಲ್ಲೇಖಾರ್ಹ. ಈ ಎರಡು ಮ್ಯಾಚ್​ಗಳಲ್ಲಿ ಆರ್​ಸಿಬಿ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ. ಅದೇ ವೇಳೆ ಸನ್​ರೈಸರ್ಸ್ ಹೈದರಾಬಾದ್ ತಂಡಕ್ಕೆ ಮುಂದಿನ 2 ಗೆಲುವುಗಳೊಂದಿಗೆ 18 ಅಂಕಗಳನ್ನು ಪಡೆಯಲು ಅವಕಾಶವಿದೆ. ಇತ್ತ ಪಂಜಾಬ್ ಕಿಂಗ್ಸ್ ತಂಡವು ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ಅಥವಾ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿದರೆ 17 ಅಂಕಗಳನ್ನು ಪಡೆಯಬಹುದು. ಹಾಗೆಯೇ ರಾಜಸ್ಥಾನ್ ರಾಯಲ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ವಿರುದ್ಧ ಗೆದ್ದರೆ 18 ಅಂಕಗಳನ್ನು ಪಡೆಯಲಿದೆ.

8 / 9
ಅಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಮುಂದಿನ ಎರಡು ಮ್ಯಾಚ್​ಗಳು ನಿರ್ಣಾಯಕ. ಏಕೆಂದರೆ ಆರ್​ಸಿಬಿ ತಂಡವು ತನ್ನ ಕೊನೆಯ ಎರಡು ಲೀಗ್ ಪಂದ್ಯಗಳನ್ನು ಆಡಲಿರುವುದು ಪ್ಲೇಆಫ್ ರೇಸ್​ನಲ್ಲಿರುವ ಸನ್​ರೈಸರ್ಸ್ ಹೈದರಾಬಾದ್ ಹಾಗೂ ಪಂಜಾಬ್ ಕಿಂಗ್ಸ್ ವಿರುದ್ಧ. ಈ ಎರಡು ತಂಡಗಳು ಜಯ ಸಾಧಿಸಿದರೆ ಆರ್​ಸಿಬಿ ತಂಡದ ಪಾಯಿಂಟ್ಸ್ 16 ರಲ್ಲೇ ಉಳಿಯಲಿದೆ. ಅತ್ತ ಪಂಜಾಬ್ ಕಿಂಗ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್​ ಮುಂದಿನ ಎಲ್ಲಾ ಮ್ಯಾಚ್​ಗಳನ್ನು ಗೆದ್ದರೆ, ರಾಜಸ್ಥಾನ್ ರಾಯಲ್ಸ್ ಮುಂಬರುವ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿದರೆ ಆರ್​ಸಿಬಿ ತಂಡ ಮೊದಲ ಸುತ್ತಿನಲ್ಲೇ ಹೊರಬೀಳಲಿದೆ.

9 / 9

Published On - 2:21 pm, Thu, 14 May 26

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು

ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ

ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!

ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ

ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ

ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ

ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!

ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ

ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ