AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಇಂದಿನ ಪಂದ್ಯದಲ್ಲಿ RCB ಪಾಲಿಗೆ ಯಾರು ಗೆಲ್ಬೇಕು? ಯಾರು ಸೋಲ್ಬೇಕು?

IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ (ಐಪಿಎಲ್ 2025) 65 ಪಂದ್ಯಗಳು ಪೂರ್ಣಗೊಂಡಿವೆ. ಈ ಪಂದ್ಯಗಳ ಮುಕ್ತಾಯದ ವೇಳೆಗೆ ಅಂಕ ಪಟ್ಟಿಯಲ್ಲಿ ಗುಜರಾತ್ ಟೈಟಾನ್ಸ್ (18 ಅಂಕಗಳು) ಮೊದಲ ಸ್ಥಾನದಲ್ಲಿದ್ದರೆ, ಪಂಜಾಬ್ ಕಿಂಗ್ಸ್ (17) ದ್ವಿತೀಯ ಸ್ಥಾನದಲ್ಲಿದೆ. ಇನ್ನು ಆರ್​ಸಿಬಿ (17) ಮೂರನೇ ಹಾಗೂ ಮುಂಬೈ ಇಂಡಿಯನ್ಸ್ (16) ನಾಲ್ಕನೇ ಸ್ಥಾನಗಳನ್ನು ಅಲಂಕರಿಸಿದೆ.

ಝಾಹಿರ್ ಯೂಸುಫ್
|

Updated on: May 24, 2025 | 10:30 AM

Share
IPL 2025: ಇಂಡಿಯನ್ ಪ್ರೀಮಿಯರ್ ಲೀಗ್​ನ 66ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗಲಿದೆ. ಜೈಪುರದ ಸವಾಯಿ ಮಾನ್​ಸಿಂಗ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಪಂಜಾಬ್ ಕಿಂಗ್ಸ್ ತಂಡವು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಲಿದೆ.

1 / 6
ಅತ್ತ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಸಂಕಷ್ಟ ಎದುರಾಗಲಿದೆ. ಏಕೆಂದರೆ ಪಂಜಾಬ್ ಪಡೆಯು ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯಗಳಲ್ಲಿ ಜಯಗಳಿಸಿದರೆ, ಒಟ್ಟು 21 ಅಂಕಗಳೊಂದಿಗೆ ಮೊದಲ ಕ್ವಾಲಿಫೈಯರ್​ಗೆ ಅರ್ಹತೆ ಪಡೆಯಲಿದೆ.

2 / 6
ಒಂದು ವೇಳೆ ಇಂದು ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ ಗೆದ್ದರೆ ಆರ್​ಸಿಬಿ ಪಾಲಿಗೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಡೆಲ್ಲಿ ವಿರುದ್ಧದ ಸೋಲಿನೊಂದಿಗೆ ಪಂಜಾಬ್ ತಂಡದ ನೆಟ್ ರನ್ ರೇಟ್ ಕುಸಿಯಲಿದೆ. ಇದರಿಂದ ಕೊನೆಯ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಆರ್​ಸಿಬಿ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಹೀಗಾಗಿ ಇಂದಿನ ಪಂದ್ಯದಲ್ಲಿ ಆರ್​ಸಿಬಿ ಪಾಲಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಗೆಲುವು ಅನಿವಾರ್ಯ.

3 / 6
ಹಾಗೆಯೇ ಮುಂದಿನ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆದ್ದರೂ ಆರ್​ಸಿಬಿ ತಂಡಕ್ಕೆ ಪ್ಲಸ್ ಪಾಯಿಂಟ್ ಆಗಲಿದೆ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ತಂಡ ಸೋತರೆ, 18 ಅಂಕಗಳೊಂದಿಗೆ ಲೀಗ್ ಹಂತವನ್ನು ಮುಗಿಸಲಿದೆ.

4 / 6
ಅತ್ತ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಗೆಲ್ಲುವ ಮೂಲಕ ಆರ್​ಸಿಬಿ ತಂಡವು 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನ ಅಲಂಕರಿಸಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯವಾಡಲು ಅರ್ಹತೆ ಪಡೆಯಬಹುದು. ಹೀಗಾಗಿ ಪಂಜಾಬ್ ಕಿಂಗ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲ್ಲುವುದನ್ನು ಆರ್​​ಸಿಬಿ ಎದುರು ನೋಡಲಿದೆ. 

5 / 6
ಒಂದು ವೇಳೆ ಇಂದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ತಂಡ ಗೆದ್ದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಪಾಲಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಫಲಿತಾಂಶ ನಿರ್ಣಾಯಕ. ಏಕೆಂದರೆ ಸಿಎಸ್​ಕೆ ವಿರುದ್ಧ ಗುಜರಾತ್ ಟೈಟಾನ್ಸ್ ಸೋತರೂ ಸಹ ಆರ್​ಸಿಬಿ 19 ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಅಥವಾ ದ್ವಿತೀಯ ಸ್ಥಾನಕ್ಕೇರಬಹುದು. ಈ ಮೂಲಕ ಮೊದಲ ಕ್ವಾಲಿಫೈಯರ್ ಪಂದ್ಯಕ್ಕೆ ಅರ್ಹತೆ ಪಡೆಯಬಹುದು. ಹೀಗಾಗಿ ಆರ್​ಸಿಬಿ ಪಾಲಿಗೆ ಇನ್ನುಳಿದ ಪಂದ್ಯಗಳಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸಿಎಸ್​ಕೆ ತಂಡಗಳು ಗೆಲ್ಲುವುದು ಅನಿವಾರ್ಯ.

6 / 6
ಇಸ್ಕಾನ್​​ನ ಸಸ್ಯಾಹಾರಿ ಹೋಟೆಲ್ ಒಳಗೆ ಚಿಕನ್ ತಿಂದ ಯುವಕ

‘ಬಂದೂಕ್’ ಸಿನಿಮಾದಲ್ಲಿ ಪೊಲೀಸ್ ಪಾತ್ರ ಮಾಡಿದ ನಟಿ ಶ್ವೇತಾ ಪ್ರಸಾದ್

ರಿಸೆಪ್ಷನಿಸ್ಟ್​​ಗೆ ಒದ್ದು, ಕೂದಲು ಎಳೆದಾಡಿದ ರೋಗಿಯ ವಿಡಿಯೋ ವೈರಲ್

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ

ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್

ಮಚ್ಚಿನೊಂದಿಗೆ ಆರೋಪಿ ನ್ಯಾಯಾಲಯ ಪ್ರವೇಶಿಸಿದ್ದು ಪೊಲೀಸರ ಕರ್ತವ್ಯಲೋಪ

‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?

ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?

ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ

ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್