Team India: ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಟೀಮ್ ಇಂಡಿಯಾ ಯಾಕೆ ಗೆಲ್ಲಲೇಬೇಕು ಗೊತ್ತಾ?
TV9 Web | Updated By: ಝಾಹಿರ್ ಯೂಸುಫ್
Updated on:
Dec 14, 2021 | 9:51 PM
India vs South Africa: ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಅದು ಐತಿಹಾಸಿಕ ಗೆಲುವಾಗಿರಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. (ಡೈಲಿಹಂಟ್ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)
1 / 5
ನವ ದೆಹಲಿ. 2021 ರ ವರ್ಷವು ಟೀಮ್ ಇಂಡಿಯಾಕ್ಕೆ ಹೆಚ್ಚು ವಿಶೇಷವಾಗಿಲ್ಲ. ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ತಂಡವು ಪಾಕಿಸ್ತಾನದ ವಿರುದ್ಧ (ಭಾರತ ವಿರುದ್ಧ ಪಾಕಿಸ್ತಾನ) ಪಂದ್ಯದಲ್ಲಿ ಸೋಲನುಭವಿಸಿತು. ಇತ್ತೀಚೆಗಷ್ಟೇ ಮುಕ್ತಾಯಗೊಂಡ 2021ರ ಟಿ20 ವಿಶ್ವಕಪ್‌ನಲ್ಲಿ ಭಾರತವನ್ನು ಪಾಕಿಸ್ತಾನ 10 ವಿಕೆಟ್‌ಗಳಿಂದ ಸೋಲಿಸಿತ್ತು. ಇದಕ್ಕೂ ಮುನ್ನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ನಲ್ಲೂ ಟೀಮ್ ಇಂಡಿಯಾ ಮುಗ್ಗರಿಸಿತ್ತು. ಅಂದರೆ 2021 ಟೀಮ್ ಇಂಡಿಯಾ ಪಾಲಿಗೆ ಆಶಾದಾಯಕವಾಗಿರಲಿಲ್ಲ.
2 / 5
ಇದಾಗ್ಯೂ 2021 ರಲ್ಲಿ ಟೀಮ್ ಇಂಡಿಯಾ ಟೆಸ್ಟ್ನಲ್ಲಿ ಅದ್ಭುತ ಪ್ರದರ್ಶನ ನೀಡಿದೆ. ಟೀಮ್ ಇಂಡಿಯಾ ಈ ವರ್ಷ ಈವರೆಗೂ 13 ಟೆಸ್ಟ್‌ಗಳನ್ನು ಆಡಿದೆ. ಅದರಲ್ಲಿ 7ರಲ್ಲಿ ಗೆಲುವು ಸಾಧಿಸಿದರೆ, 3 ಟೆಸ್ಟ್‌ಗಳಲ್ಲಿ ಸೋತಿದೆ. ಇನ್ನು 3 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಮತ್ತೊಂದೆಡೆ ಪಾಕಿಸ್ತಾನ 9 ಟೆಸ್ಟ್‌ಗಳಲ್ಲಿ 7ರಲ್ಲಿ ಜಯ ಸಾಧಿಸಿದೆ. 2 ಟೆಸ್ಟ್‌ಗಳಲ್ಲಿ ಸೋತಿದ್ದಾರೆ. ಈ ವರ್ಷಾಂತ್ಯದಲ್ಲಿ ಪಾಕಿಸ್ತಾನಕ್ಕೆ ಯಾವುದೇ ಟೆಸ್ಟ್ ಪಂದ್ಯವಿಲ್ಲ.
3 / 5
ಆದರೆ ಮತ್ತೊಂದೆಡೆ, ಭಾರತವು ಡಿಸೆಂಬರ್ 26 ರಿಂದ ದಕ್ಷಿಣ ಆಫ್ರಿಕಾ ವಿರುದ್ದ ಟೆಸ್ಟ್ ಆಡಬೇಕಿದೆ . ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, ಈ ವರ್ಷ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ತಂಡ ಎಂಬ ಹೆಗ್ಗಳಿಕೆಗೆ ಭಾರತ ತಂಡ ಪಾತ್ರವಾಗಲಿದೆ. ಹೀಗಾಗಿ ದಕ್ಷಿಣ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ತುಂಬಾ ಮಹತ್ವದ್ದು.
4 / 5
ಇನ್ನು ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದರೆ ಅದು ಐತಿಹಾಸಿಕ ಗೆಲುವಾಗಿರಲಿದೆ. ಏಕೆಂದರೆ ಭಾರತ ತಂಡವು ಇದುವರೆಗೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದಿಲ್ಲ. ಹೀಗಾಗಿ ಈ ಬಾರಿ ಭಾರತ ತಂಡವು ಟೆಸ್ಟ್ ಸರಣಿ ಗೆದ್ದರೆ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಅಷ್ಟೇ ಅಲ್ಲದೆ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆದ್ದ ಮೊದಲ ನಾಯಕ ಎಂಬ ದಾಖಲೆ ವಿರಾಟ್ ಕೊಹ್ಲಿ ಪಾಲಾಗಲಿದೆ.
5 / 5
ಭಾರತದ ಟೆಸ್ಟ್ ತಂಡ ಹೀಗಿದೆ: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್.ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್