AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೊಚ್ಚಲ ಹ್ಯಾಟ್ರಿಕ್ ವಿಕೆಟ್..! ಆರ್‌ಸಿಬಿ ಸೇರಿದ ತಕ್ಷಣ ಫಾರ್ಮ್‌ಗೆ ಮರಳಿದ ಭುವನೇಶ್ವರ್ ಕುಮಾರ್

Bhuvneshwar Kumar's Hat-trick: ಭಾರತ ತಂಡದಿಂದ ಹೊರಗಿರುವ ಭುವನೇಶ್ವರ್ ಕುಮಾರ್, ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಜಾರ್ಖಂಡ್ ವಿರುದ್ಧ ಹ್ಯಾಟ್ರಿಕ್ ವಿಕೆಟ್ ಪಡೆದು ಸಂಚಲನ ಮೂಡಿಸಿದ್ದಾರೆ. ಇದು ಅವರ ಟಿ20 ಕ್ರಿಕೆಟ್‌ನ ಮೊದಲ ಹ್ಯಾಟ್ರಿಕ್. ಈ ಸಾಧನೆಯು ಆರ್‌ಸಿಬಿ ಅಭಿಮಾನಿಗಳ ಉತ್ಸಾಹ ಹೆಚ್ಚಿಸಿದ್ದು, ಭುವಿ ಟೀಂ ಇಂಡಿಯಾಗೆ ಮರಳುವ ಸಾಧ್ಯತೆಗಳನ್ನೂ ಹೆಚ್ಚಿಸಿದೆ.

ಪೃಥ್ವಿಶಂಕರ
|

Updated on: Dec 05, 2024 | 4:42 PM

Share
ಟೀಂ ಇಂಡಿಯಾದಿಂದ ಹೊರಗುಳಿದಿರುವ ತಂಡದ ಅನುಭವಿ ವೇಗಿ ಭುವನೇಶ್ವರ್ ಕುಮಾರ್ ಸೈಯದ್ ಮುಷ್ತಾಕ್ ಅಲಿ ಟ್ರೋಫಿ ಅದ್ಭುತ ಸಾಧನೆ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆಯಷ್ಟೇ ನಡೆದ ಐಪಿಎಲ್ ಹರಾಜಿನ ವೇಳೆ ಭಾರೀ ಬೆಲೆಗೆ ಮಾರಾಟವಾಗಿದ್ದ ಭುವಿ ಇದೀಗ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಸಂಚಲನ ಮೂಡಿಸಿದ್ದಾರೆ.

1 / 6
ಭಾರತ ತಂಡದಿಂದ ಹೊರಗಿರುವ ಕಾರಣ ಭುವನೇಶ್ವರ್ ಕುಮಾರ್ ಅವರ ಈ ಸಾಧನೆ ಇನ್ನಷ್ಟು ವಿಶೇಷವಾಗಿದೆ. ಇದು ಟಿ20 ಕ್ರಿಕೆಟ್‌ನಲ್ಲಿ ಭುವಿಯ ಮೊದಲ ಹ್ಯಾಟ್ರಿಕ್ ಆಗಿದೆ. ಈ ಹ್ಯಾಟ್ರಿಕ್‌ನೊಂದಿಗೆ, ಭುವನೇಶ್ವರ್ ಕುಮಾರ್ ಮತ್ತೊಮ್ಮೆ ಟೀಂ ಇಂಡಿಯಾಗೆ ಮರಳುವ ಸಿಗ್ನಲ್ ನೀಡಿರುವುದರ ಜೊತೆಗೆ ಆರ್​ಸಿಬಿ ಅಭಿಮಾನಿಗಳ ಕಪ್​ ಬಯಕೆಗೆ ಮತ್ತಷ್ಟು ಬಲ ತುಂಬಿದ್ದಾರೆ.

2 / 6
ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಉತ್ತರ ಪ್ರದೇಶದ ಪರ ಆಡುತ್ತಿರುವ ಭುವನೇಶ್ವರ್ ಕುಮಾರ್ ಅವರು ಜಾರ್ಖಂಡ್ ವಿರುದ್ಧದ ಪಂದ್ಯದಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದಿದ್ದಾರೆ. 17ನೇ ಓವರ್​ನಲ್ಲಿ ಭುವನೇಶ್ವರ್ ಕುಮಾರ್ ಈ ಸಾಧನೆ ಮಾಡಿದರು. ಭುವನೇಶ್ವರ್ ಕುಮಾರ್ ಈ ಓವರ್‌ನ ಮೊದಲ ಮೂರು ಎಸೆತಗಳಲ್ಲಿ ಬ್ಯಾಕ್ ಟು ಬ್ಯಾಕ್ ವಿಕೆಟ್‌ಗಳನ್ನು ಕಬಳಿಸಿದರು.

3 / 6
ಪಂದ್ಯದ 17ನೇ ಓವರ್‌ನಲ್ಲಿ ಭುವನೇಶ್ವರ್ ಕುಮಾರ್ ಬೌಲಿಂಗ್ ಮಾಡಲು ಬರುವ ವೇಳೆಗೆ ಜಾರ್ಖಂಡ್ ತಂಡ 116 ರನ್ ಗಳಿಸಿತ್ತು. ಓವರ್‌ನ ಮೊದಲ ಎಸೆತದಲ್ಲಿ 11 ರನ್ ಗಳಿಸಿದ್ದ ರಾಬಿನ್ ಮಿಂಜ್ ಅವರನ್ನು ಔಟ್ ಮಾಡಿದ ಭುವಿ ಅದೇ ಓವರ್​ನ ಎರಡನೇ ಎಸೆತದಲ್ಲಿ ಬಾಲಕೃಷ್ಣ ಅವರನ್ನು ಔಟ್ ಮಾಡಿದರು. ಇದಾದ ಬಳಿಕ ಮೂರನೇ ಎಸೆತದಲ್ಲಿ ವಿವೇಕಾನಂದ ತಿವಾರಿ ಅವರನ್ನು ಔಟ್ ಮಾಡಿದರು.

4 / 6
ವಾಸ್ತವವಾಗಿ ಭುವಿ ಹ್ಯಾಟ್ರಿಕ್ ವಿಕೆಟ್ ಉರುಳಿಸಿರುವುದು ಆರ್​ಸಿಬಿಗೆ ಆನೆಬಲ ತಂದಿದೆ. ಏಕೆಂದರೆ ಐಪಿಎಲ್ ಮೆಗಾ ಹರಾಜಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು 10.75 ಕೋಟಿ ರೂಪಾಯಿ ಬೆಲೆ ನೀಡಿ ಭುವನೇಶ್ವರ್ ಕುಮಾರ್​ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ. ಇದು ಐಪಿಎಲ್ ಇತಿಹಾಸದಲ್ಲಿ ಭುವನೇಶ್ವರ್ ಅವರ ಅತಿದೊಡ್ಡ ಸಂಭಾವನೆಯಾಗಿದೆ.

5 / 6
ಈ ಹಿಂದೆ ಅವರು ಹೈದರಾಬಾದ್‌ನಲ್ಲಿ 4.2 ಕೋಟಿ ರೂ. ವೇತನ ಪಡೆಯುತ್ತಿದ್ದರು. ಆರ್‌ಸಿಬಿಗೆ ಸೇರಿದ ತಕ್ಷಣ ಭುವನೇಶ್ವರ್ ತಮ್ಮ ಹಳೆಯ ಲಯದಲ್ಲಿ ಕಾಣಿಸಿಕೊಳ್ಳಲಾರಂಭಿಸಿದ್ದಾರೆ. ಇದುವರೆಗೆ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ 7 ಪಂದ್ಯಗಳನ್ನಾಡಿರುವ ಭುವಿ 9 ವಿಕೆಟ್ ಪಡೆದಿದ್ದಾರೆ.

6 / 6
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​

ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?

ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು