ಅರ್ಜುನ ಪ್ರಶಸ್ತಿ ಸ್ವೀಕರಿಸಿದ ಬೆನ್ನಲ್ಲೇ ಮಹದಾಸೆಯನ್ನು ಹೊರಹಾಕಿದ ಮೊಹಮ್ಮದ್ ಶಮಿ
Mohammad Shami: ಏಕದಿನ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಂದರೆ ಜನವರಿ 9 ರಂದು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿರುವ ಶಮಿ ತನ್ನ ಮಹದಾಸೆಯೊಂದನ್ನು ಹಂಚಿಕೊಂಡಿದ್ದಾರೆ.
1 / 7
ಏಕದಿನ ವಿಶ್ವಕಪ್‌ನಲ್ಲಿ ಸರ್ವಶ್ರೇಷ್ಠ ಪ್ರದರ್ಶನ ನೀಡಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ಅಂದರೆ ಜನವರಿ 9 ರಂದು ಅರ್ಜುನ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿರುವ ಶಮಿ ತನ್ನ ಮಹದಾಸೆಯೊಂದನ್ನು ಹಂಚಿಕೊಂಡಿದ್ದಾರೆ.
2 / 7
ವಾಸ್ತವವಾಗಿ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಿದ್ದ ಶಮಿ ಆ ಬಳಿಕ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಕೈಬಿಡಲಾಗಿತ್ತು. ಇದಾದ ಬಳಿಕ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ 3 ಪಂದ್ಯಗಳ ಟಿ20 ಸರಗೂ ಮೊಹಮ್ಮದ್ ಶಮಿ ಆಯ್ಕೆಯಾಗಿಲ್ಲ.
3 / 7
ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಶಮಿ ಇನ್ನೂ ಚೇತರಿಸಿಕೊಂಡಿಲ್ಲ. ಹೀಗಾಗಿ ಅವರನ್ನು ಈ ಟಿ20 ಸರಣಿಯಿಂದ ಕೈಬಿಡಲಾಗಿದೆ. ಆದರೆ ಶಮಿ ಫಿಟ್ ಆಗಿದ್ದರೆ ಅವರು ಅಫ್ಘಾನಿಸ್ತಾನ ವಿರುದ್ಧ ಆಡುವ ಅವಕಾಶ ಸಿಗುತ್ತಿತ್ತೇ ಎಂಬ ಪ್ರಶ್ನೆಯೂ ಮೂಡಿದೆ.
4 / 7
ಇದೀಗ ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಭಾಜನರಾಗಿರುವ ಶಮಿ ತಮ್ಮ ಮಹದಾಸೆಯೊಂದನ್ನು ಪರ್ತಕರ್ತರ ಬಗ್ಗೆ ಹಂಚಿಕೊಂಡಿದ್ದು ಮತ್ತೊಂದು ವಿಶ್ವಕಪ್ ಆಡುವ ಬಯಕೆಯನ್ನು ಶಮಿ ವ್ಯಕ್ತಪಡಿಸಿದ್ದಾರೆ. ವಾಸ್ತವವಾಗಿ ಇದೇ ವರ್ಷ ಅಂದರೆ ಜೂನ್ 1 ರಿಂದ ಟಿ20 ವಿಶ್ವಕಪ್ ಆರಂಭವಾಗಲಿದೆ. ಈ ಚುಟುಕು ವಿಶ್ವ ಸಮರದಲ್ಲಿ ಭಾರತವನ್ನು ಪ್ರತಿನಿಧಿಸುವ ಇಂಗಿತವನ್ನು ಶಮಿ ಹೊರಹಾಕಿದ್ದಾರೆ.
5 / 7
ಮುಂಬರುವ ಟಿ20 ವಿಶ್ವಕಪ್ ಆಡುತ್ತಿರಾ ಎಂಬ ಪರ್ತಕರ್ತರ ಪ್ರಶ್ನೆಗೆ ಉತ್ತರಿಸಿದ ಶಮಿ, ಎಲ್ಲರಿಗೂ ವಿಶ್ವಕಪ್ ಆಡುವ ಕನಸು ಇರುತ್ತದೆ. ನಾನು ಮಲಗಿದಾಗಲೆಲ್ಲಾ ನಾನು ಟಿ20 ವಿಶ್ವಕಪ್ ಆಡುತ್ತಿದ್ದೇನೆ ಎಂದು ಕನಸು ಕಾಣುತ್ತೇನೆ. ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಲು ನಾನು ಬಯಸುತ್ತೇನೆ ಎಂದಿದ್ದಾರೆ.
6 / 7
ಇದರಿಂದ ಶಮಿಗೆ ಟಿ20 ವಿಶ್ವಕಪ್ ಆಡುವ ಅತೀವ ಆಸೆ ಇದೆ ಎಂಬುದು ಸ್ಪಷ್ಟವಾಗಿದೆ. ಈ ಬಗ್ಗೆ ತಮ್ಮ ಆಸೆಯನ್ನೂ ವ್ಯಕ್ತಪಡಿಸಿದ್ದಾರೆ. ಈಗ ಬಿಸಿಸಿಐ ಶಮಿಗೆ ಟಿ20 ತಂಡದಲ್ಲಿ ಅವಕಾಶ ನೀಡುತ್ತದೋ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ. 2023ರ ಐಸಿಸಿ ವಿಶ್ವಕಪ್‌ನಲ್ಲಿ ಹಾರ್ದಿಕ್ ಪಾಂಡ್ಯ ಬದಲಿಗೆ ಶಮಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿತ್ತು. ಸಿಕ್ಕ ಅವಕಾಶವನ್ನು ಬಳಸಿಕೊಂಡ ಶಮಿ ಅದ್ಭುತ ಪ್ರದರ್ಶನ ನೀಡಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು.
7 / 7
ಆದರೆ ಮೊಹಮ್ಮದ್ ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುವ ಸಾಧ್ಯತೆ ತೀರ ಕಡಿಮೆ. ಇದಕ್ಕೆ ಕಾರಣ ಶಮಿ ವಯಸ್ಸು. ಟಿ20 ಯುವಕರ ಮತ್ತು ಸ್ಫೋಟಕ ಆಟಗಾರರ ಆಟವಾಗಿದ್ದು, ಶಮಿಗೆ ಟಿ20 ವಿಶ್ವಕಪ್‌ನಲ್ಲಿ ಆಡುವ ಅವಕಾಶ ಸಿಗುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಾಗಿದೆ.