- Kannada News Photo gallery Cricket photos I want to break chris gayle's 175 Runs record: vaibhav suryavanshi
Vaibhav Suryavanshi: ಕ್ರಿಸ್ ಗೇಲ್ನ ಆ ಒಂದು ದಾಖಲೆಯನ್ನು ಮುರಿಯಲೇಬೇಕು..!
Vaibhav Suryavanshi: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಐಪಿಎಲ್ ಸೀಸನ್-19 ಗಾಗಿ ಸಜ್ಜಾಗುತ್ತಿದ್ದಾರೆ. ಈ ಸಜ್ಜಾಗುವಿಕೆಯ ನಡುವೆ ಅವರು ಮುಂದಿನ ಗುರಿಯೇನು ಎಂಬುದನ್ನು ಸ್ಪಷ್ಟಪಡಿಸಿದ್ದಾರೆ.
Updated on: Mar 18, 2026 | 11:50 AM

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ದಿನಗಣನೆ ಬೆನ್ನಲ್ಲೇ ಬಾಸ್ ಬೇಬಿ ಖ್ಯಾತಿಯ ವೈಭವ್ ಸೂರ್ಯವಂಶಿ (Vaibhav Suryavanshi) ತಮ್ಮ ಗುರಿಯನ್ನು ಸ್ಪಷ್ಟಪಡಿಸಿದ್ದಾರೆ. ಅದು ಕೂಡ ಯುನಿವರ್ಸ್ ಬಾಸ್ ಖ್ಯಾತಿಯ ಕ್ರಿಸ್ ಗೇಲ್ ಹೆಸರಿನಲ್ಲಿರುವ ಭರ್ಜರಿ ದಾಖಲೆಯನ್ನು ಮುರಿಯುವ ಟಾರ್ಗೆಟ್ನೊಂದಿಗೆ ಎಂಬುದು ವಿಶೇಷ.

ನವದೆಹಲಿಯಲ್ಲಿ ನಡೆದ ಬಿಸಿಸಿಐ ನಮನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ 14 ವರ್ಷದ ಯಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ, ಐಪಿಎಲ್ನಲ್ಲಿ ಕ್ರಿಸ್ ಗೇಲ್ ಅವರ 175 ರನ್ಗಳ ದಾಖಲೆಯನ್ನು ಮುರಿಯುವುದು ನನ್ನ ಗುರಿ ಎಂದು ಘೋಷಿಸಿದ್ದಾರೆ.

2013 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಕ್ರಿಸ್ ಗೇಲ್ ಪುಣೆ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಕೇವಲ 30 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಅಷ್ಟೇ ಅಲ್ಲದೆ 66 ಎಸೆತಗಳಲ್ಲಿ 175 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದರು.

ಇದೀಗ ಈ ಗರಿಷ್ಠ ವೈಯುಕ್ತಿಕ ಸ್ಕೋರ್ ದಾಖಲೆಯನ್ನು ಮುರಿಯುವುದೇ ತನ್ನ ಅತೀ ದೊಡ್ಡ ಗುರಿ ಎಂದಿದ್ದಾರೆ ರಾಜಸ್ಥಾನ್ ರಾಯಲ್ಸ್ ತಂಡದ ಯುವ ದಾಂಡಿಗ ವೈಭವ್ ಸೂರ್ಯವಂಶಿ. ಇನ್ನು ಈ ದಾಖಲೆ ಮುರಿಯವುದು ವೈಭವ್ಗೆ ಕಷ್ಟವೇನಲ್ಲ.

ಏಕೆಂದರೆ ಕಳೆದ ಬಾರಿಯ ಐಪಿಎಲ್ನಲ್ಲಿ ವೈಭವ್ ಕೇವಲ 35 ಎಸೆತಗಳಲ್ಲಿ ಸೆಂಚುರಿ ಸಿಡಿಸಿದ್ದರು. ಅಷ್ಟೇ ಅಲ್ಲದೆ ಫೆಬ್ರವರಿ 2026 ರಲ್ಲಿ ನಡೆದ ಅಂಡರ್-19 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175 ರನ್ ಬಾರಿಸಿದ್ದರು. ಹೀಗಾಗಿ ಈ ಬಾರಿಯ ಐಪಿಎಲ್ನಲ್ಲಿ ವೈಭವ್ ಸೂರ್ಯವಂಶಿ ಕಡೆಯಿಂದ ಪ್ರಚಂಡ ಬ್ಯಾಟಿಂಗ್ ಅನ್ನು ನಿರೀಕ್ಷಿಸಬಹುದು. ಈ ಮೂಲಕ ಅವರು ಕ್ರಿಸ್ ಗೇಲ್ ಅವರ 175 ರನ್ಗಳ ದಾಖಲೆಯನ್ನು ಅಳಿಸಿ ಹಾಕಲಿದ್ದಾರಾ ಕಾದು ನೋಡಬೇಕಿದೆ.
