AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ಬರೆದ 20ರ ಹರೆಯ ಅಫ್ಘಾನ್ ಬ್ಯಾಟರ್

Ibrahim Zadran: ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದ ಇಬ್ರಾಹಿಂ ನೂರು ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಕೇವಲ 8 ಏಕದಿನ ಪಂದ್ಯಗಳನ್ನಾಡಿರುವ ಝದ್ರಾನ್ ಅವರು ಮೂರನೇ ಶತಕವಾಗಿದೆ.

TV9 Web
| Edited By: |

Updated on: Nov 30, 2022 | 9:24 PM

Share
ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಯುವ ಬ್ಯಾಟ್ಸ್​ಮನ್ ಇಬ್ರಾಹಿಂ ಝದ್ರಾನ್ ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಕಾದ ಪಲ್ಲೇಕಲ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಮೊದಲು ಬ್ಯಾಟ್ ಮಾಡಿತು.

1 / 5
ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಝದ್ರಾನ್ ಅತ್ಯುತ್ತಮ ಇನಿಂಗ್ಸ್ ಆಡಿದರು. ಆರಂಭದಿಂದಲೇ ಲಂಕಾ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ 20 ವರ್ಷದ ಯುವ ಬ್ಯಾಟರ್ ಆಕರ್ಷಕ ಬೌಂಡರಿಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು.

2 / 5
ಎಚ್ಚರಿಕೆಯ ಬ್ಯಾಟಿಂಗ್​ ಪ್ರದರ್ಶಿಸಿದ ಇಬ್ರಾಹಿಂ ನೂರು ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಕೇವಲ 8 ಏಕದಿನ ಪಂದ್ಯಗಳನ್ನಾಡಿರುವ ಝದ್ರಾನ್ ಅವರು ಮೂರನೇ ಶತಕವಾಗಿದೆ. ಸೆಂಚುರಿ ಬಳಿಕ ಬ್ಯಾಟಿಂಗ್ ವೇಗ ಹೆಚ್ಚಿಸಿಕೊಂಡ ಅಫ್ಘಾನ್ ಬ್ಯಾಟರ್ ಲಂಕಾ ಬೌಲರ್​ಗಳ ಬೆಂಡೆತ್ತಿದರು.

3 / 5
ಅದರಂತೆ 138 ಎಸೆತಗಳಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 162 ರನ್​ ಚಚ್ಚಿದರು. ಈ ಮೂಲಕ ಏಕದಿನ ಕ್ರಿಕೆಟ್​ನಲ್ಲಿ ಅಫ್ಘಾನ್ ಪರ ಅತ್ಯಧಿಕ ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ಕೂಡ ಇಬ್ರಾಹಿಂ ಝದ್ರಾನ್ ತಮ್ಮದಾಗಿಸಿಕೊಂಡರು.

4 / 5
ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಶೆಹಝಾದ್ ಹೆಸರಿನಲ್ಲಿತ್ತು. ಶೆಹಝಾದ್ 2015 ರಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 131 ರನ್​ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 162 ರನ್ ಬಾರಿಸುವ ಮೂಲಕ ಇಬ್ರಾಹಿಂ ಝದ್ರಾನ್ ಅಫ್ಘಾನ್ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.

5 / 5
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ