ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ಬರೆದ 20ರ ಹರೆಯ ಅಫ್ಘಾನ್ ಬ್ಯಾಟರ್
TV9 Web | Updated By: ಝಾಹಿರ್ ಯೂಸುಫ್
Updated on:
Nov 30, 2022 | 9:24 PM
Ibrahim Zadran: ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಇಬ್ರಾಹಿಂ ನೂರು ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಕೇವಲ 8 ಏಕದಿನ ಪಂದ್ಯಗಳನ್ನಾಡಿರುವ ಝದ್ರಾನ್ ಅವರು ಮೂರನೇ ಶತಕವಾಗಿದೆ.
1 / 5
ಶ್ರೀಲಂಕಾ ವಿರುದ್ಧ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡದ ಯುವ ಬ್ಯಾಟ್ಸ್ಮನ್ ಇಬ್ರಾಹಿಂ ಝದ್ರಾನ್ ಭರ್ಜರಿ ಶತಕ ಸಿಡಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಲಂಕಾದ ಪಲ್ಲೇಕಲ್ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ಮೊದಲು ಬ್ಯಾಟ್ ಮಾಡಿತು.
2 / 5
ಅದರಂತೆ ಆರಂಭಿಕರಾಗಿ ಕಣಕ್ಕಿಳಿದ ಝದ್ರಾನ್ ಅತ್ಯುತ್ತಮ ಇನಿಂಗ್ಸ್ ಆಡಿದರು. ಆರಂಭದಿಂದಲೇ ಲಂಕಾ ಬೌಲರ್ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ 20 ವರ್ಷದ ಯುವ ಬ್ಯಾಟರ್ ಆಕರ್ಷಕ ಬೌಂಡರಿಗಳನ್ನು ಬಾರಿಸುವ ಮೂಲಕ ಗಮನ ಸೆಳೆದರು.
3 / 5
ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ಇಬ್ರಾಹಿಂ ನೂರು ಎಸೆತಗಳಲ್ಲಿ ಶತಕ ಪೂರೈಸಿದರು. ವಿಶೇಷ ಎಂದರೆ ಕೇವಲ 8 ಏಕದಿನ ಪಂದ್ಯಗಳನ್ನಾಡಿರುವ ಝದ್ರಾನ್ ಅವರು ಮೂರನೇ ಶತಕವಾಗಿದೆ. ಸೆಂಚುರಿ ಬಳಿಕ ಬ್ಯಾಟಿಂಗ್ ವೇಗ ಹೆಚ್ಚಿಸಿಕೊಂಡ ಅಫ್ಘಾನ್ ಬ್ಯಾಟರ್ ಲಂಕಾ ಬೌಲರ್ಗಳ ಬೆಂಡೆತ್ತಿದರು.
4 / 5
ಅದರಂತೆ 138 ಎಸೆತಗಳಲ್ಲಿ 15 ಬೌಂಡರಿ ಮತ್ತು 4 ಸಿಕ್ಸರ್‌ಗಳೊಂದಿಗೆ 162 ರನ್ ಚಚ್ಚಿದರು. ಈ ಮೂಲಕ ಏಕದಿನ ಕ್ರಿಕೆಟ್ನಲ್ಲಿ ಅಫ್ಘಾನ್ ಪರ ಅತ್ಯಧಿಕ ರನ್ ಕಲೆಹಾಕಿದ ವಿಶೇಷ ದಾಖಲೆಯನ್ನು ಕೂಡ ಇಬ್ರಾಹಿಂ ಝದ್ರಾನ್ ತಮ್ಮದಾಗಿಸಿಕೊಂಡರು.
5 / 5
ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ಶೆಹಝಾದ್ ಹೆಸರಿನಲ್ಲಿತ್ತು. ಶೆಹಝಾದ್ 2015 ರಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 131 ರನ್ ಬಾರಿಸಿದ್ದು ಇದುವರೆಗಿನ ದಾಖಲೆಯಾಗಿತ್ತು. ಇದೀಗ 162 ರನ್ ಬಾರಿಸುವ ಮೂಲಕ ಇಬ್ರಾಹಿಂ ಝದ್ರಾನ್ ಅಫ್ಘಾನ್ ಪರ ಹೊಸ ದಾಖಲೆ ನಿರ್ಮಿಸಿದ್ದಾರೆ.