ಭರ್ಜರಿ ಸೆಂಚುರಿಯೊಂದಿಗೆ ಕಿಂಗ್ ಕೊಹ್ಲಿಯ ದಾಖಲೆ ಮುರಿದ ಇಬ್ರಾಹಿಂ ಝದ್ರಾನ್

Ibrahim Zadran: ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.

| Updated By: ಝಾಹಿರ್ ಯೂಸುಫ್

Updated on: Nov 07, 2023 | 9:21 PM

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ ಅಫ್ಘಾನಿಸ್ತಾನ್ ಆಟಗಾರ ಇಬ್ರಾಹಿಂ ಝದ್ರಾನ್ ಹಲವು ದಾಖಲೆಗಳನ್ನು ಬರೆದಿದ್ದಾರೆ. ಆ ದಾಖಲೆಗಳ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ...

1 / 8
ಈ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಇಬ್ರಾಹಿಂ ಝದ್ರಾನ್ 143 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ ಅಜೇಯ 129 ರನ್ ಬಾರಿಸಿದ್ದರು. ಈ ಶತಕದೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ಪರ ಸೆಂಚುರಿ ಸಿಡಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಬರೆದರು.

2 / 8
ಇದರೊಂದಿಗೆ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಬಾರಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡರು. ಇಬ್ರಾಹಿಂ ಝದ್ರಾನ್ ತಮ್ಮ 21ನೇ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದಾರೆ.

3 / 8
ಅಷ್ಟೇ ಅಲ್ಲದೆ ಏಕದಿನ ವಿಶ್ವಕಪ್​ನಲ್ಲಿ ಶತಕ ಬಾರಿಸಿದ ನಾಲ್ಕನೇ ಕಿರಿಯ ಬ್ಯಾಟ್ಸ್​ಮನ್ ಎಂಬ ಹೆಗ್ಗಳಿಕೆಗೂ ಇಬ್ರಾಹಿಂ ಝದ್ರಾನ್ ಪಾತ್ರರಾಗಿದ್ದಾರೆ. ಅದು ಕೂಡ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

4 / 8
2011ರ ಏಕದಿನ ವಿಶ್ವಕಪ್​ನಲ್ಲಿ 22 ವರ್ಷದ ವಿರಾಟ್ ಕೊಹ್ಲಿ ಬಾಂಗ್ಲಾದೇಶ್ ವಿರುದ್ಧ ಶತಕ ಬಾರಿಸಿದ್ದರು. ಈ ಮೂಲಕ ವರ್ಲ್ಡ್​ಕಪ್​ನಲ್ಲಿ ಸೆಂಚುರಿ ಸಿಡಿಸಿದ 4ನೇ ಕಿರಿಯ ಬ್ಯಾಟರ್ ಎನಿಸಿಕೊಂಡಿದ್ದರು.

5 / 8
ಇದೀಗ 21ನೇ ವಯಸ್ಸಿನಲ್ಲಿ ಶತಕದ ಸಾಧನೆ ಮಾಡುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ್ದಾರೆ. ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಐರ್ಲೆಂಡ್​ನ ಪೌಲ್ ಸ್ಟೀರ್ಲಿಂಗ್.

6 / 8
2011 ರ ವಿಶ್ವಕಪ್​ನಲ್ಲಿ ನೆದರ್​ಲೆಂಡ್ಸ್​ ವಿರುದ್ಧ 20 ವರ್ಷದ ಪೌಲ್ ಸ್ಟಿರ್ಲಿಂಗ್ ಭರ್ಜರಿ ಶತಕ ಸಿಡಿಸಿ ದಾಖಲೆ ಬರೆದಿದ್ದರು. ಇದೀಗ 21ನೇ ವಯಸ್ಸಿನಲ್ಲಿ ಚೊಚ್ಚಲ ವಿಶ್ವಕಪ್ ಶತಕ ಸಿಡಿಸುವ ಮೂಲಕ ಇಬ್ರಾಹಿಂ ಝದ್ರಾನ್ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಿರುವುದು ವಿಶೇಷ.

7 / 8
ಇನ್ನು ಇಬ್ರಾಹಿಂ ಝದ್ರಾನ್ ಅವರ ಅಜೇಯ 129 ರನ್​ಗಳ ನೆರವಿನಿಂದ ಆಸ್ಟ್ರೇಲಿಯಾ ವಿರುದ್ಧ ಅಫ್ಘಾನಿಸ್ತಾನ್ ತಂಡವು 5 ವಿಕೆಟ್ ನಷ್ಟಕ್ಕೆ 291 ರನ್​ ಕಲೆಹಾಕಿದೆ.

8 / 8
Follow us
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ

ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ

ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ

ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ

ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ

ಕೆಳಗೆ ಬಿದ್ದ ಹಣವನ್ನು ಡಿಕೆ ಶಿವಕುಮಾರ್​ ಏನು ಮಾಡಿದರು ನೋಡಿ

ಬಿಗ್​ಬಾಸ್​ ಮನೆಯಲ್ಲಿ ‘ಮುಂಗಾರು ಮಳೆ’ ಧನರಾಜ್​ ಡೈಲಾಗ್​ಗೆ ಚಪ್ಪಾಳೆ

ಬೀದರ್​ನಲ್ಲಿ ರೌಡಿಶೀಟರ್​ಗಳ ಬೆವರಿಳಿಸಿದ ಎಸ್​ಪಿ; ವಿಡಿಯೋ ನೋಡಿ

ಆ್ಯಪಲ್ ಐಫೋನ್ 15 ಜತೆ ₹6,900 ಮೌಲ್ಯದ ಬೀಟ್ಸ್ ಬಡ್ಸ್ ಫ್ರೀ!

ಮೈಸೂರು ದಸರಾ 2024: ಬಗೆ ಬಗೆಯ ರಂಗೋಲಿಗಳಿಂದ ಶೃಂಗಾರಗೊಂಡ ಅರಮನೆ ಆವರಣ