ಹಳೆಯ ದಾಖಲೆಗಳು ಧೂಳೀಪಟ: ಹೊಸ ವಿಶ್ವ ದಾಖಲೆ ನಿರ್ಮಿಸಿದ ಇಬ್ರಾಹಿಂ ಝದ್ರಾನ್

|

Updated on: Feb 27, 2025 | 8:23 AM

AFG vs ENG: ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಅಫ್ಘಾನಿಸ್ತಾನ್ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿ ಅಫ್ಘಾನಿಸ್ತಾನ್ ಪರ ಇಬ್ರಾಹಿಂ ಝದ್ರಾನ್ (177) ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ಅಫ್ಘಾನ್ ತಂಡ 50 ಓವರ್‌ಗಳಲ್ಲಿ 325 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ 317 ರನ್ ಗಳಿಗೆ ಆಲೌಟ್ ಆಗಿ 8 ರನ್ ಗಳಿಂದ ಸೋಲೊಪ್ಪಿಕೊಂಡಿದೆ.

1 / 6
ಚಾಂಪಿಯನ್ಸ್ ಟ್ರೋಫಿಯ 8ನೇ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿ ಅಫ್ಘಾನಿಸ್ತಾನ್ ಬ್ಯಾಟರ್ ಇಬ್ರಾಹಿಂ ಝದ್ರಾನ್ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬಲಿಷ್ಠ ಇಂಗ್ಲೆಂಡ್ ವಿರುದ್ಧ 177 ರನ್​ಗಳ ಮ್ಯಾರಥಾನ್ ಇನಿಂಗ್ಸ್ ಆಡುವ ಮೂಲಕ ಎಂಬುದು ವಿಶೇಷ.

2 / 6
ಲಾಹೋರ್​ನ ಗದ್ದಾಫಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಅಫ್ಘಾನಿಸ್ತಾನ್ ಪರ ಇಬ್ರಾಹಿಂ ಝದ್ರಾನ್ ಆರಂಭಿಕನಾಗಿ ಕಣಕ್ಕಿಳಿದಿದ್ದರು. ಆರಂಭದಿಂದಲೇ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದ ಇಬ್ರಾಹಿಂ 106 ಎಸೆತಗಳಲ್ಲಿ ಶತಕ ಪೂರೈಸಿದರು.

3 / 6
ಈ ಆಕರ್ಷಕ ಶತಕದ ಬೆನ್ನಲ್ಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಇಬ್ರಾಹಿಂ ಝದ್ರಾನ್ ಸಿಕ್ಸ್ ಫೋರ್ ಗಳ ಸುರಿಮಳೆಗೈದರು. ಈ ಮೂಲಕ ಕೇವಲ 146 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 12 ಫೋರ್ ಗಳೊಂದಿಗೆ 177 ರನ್ ಬಾರಿಸಿದ್ದಾರೆ.

4 / 6
ಈ 177 ರನ್ ಗಳೊಂದಿಗೆ ಚಾಂಪಿಯನ್ಸ್ ಟ್ರೋಫಿ ಇತಿಹಾಸದಲ್ಲೇ ಅತ್ಯಧಿಕ ವೈಯಕ್ತಿಕ ಸ್ಕೋರ್ ದಾಖಲಿಸಿದ ವಿಶ್ವ ದಾಖಲೆ ಇಬ್ರಾಹಿಂ ಝದ್ರಾನ್ ಪಾಲಾಯಿತು. ಇದಕ್ಕೂ ಮುನ್ನ ಈ ರೆಕಾರ್ಡ್ ಇಂಗ್ಲೆಂಡಿನ ಬೆನ್ ಡಕೆಟ್ ಹೆಸರಿನಲ್ಲಿತ್ತು.

5 / 6
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯ 4ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಬೆನ್ ಡಕೆಟ್ 143 ಎಸೆತಗಳಲ್ಲಿ 165 ರನ್ ಬಾರಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆ ಮುರಿಯುವಲ್ಲಿ ಅಫ್ಘಾನಿಸ್ತಾನ್ ಬ್ಯಾಟರ್ ಯಶಸ್ವಿಯಾಗಿದ್ದಾನೆ.

6 / 6
ಲಾಹೋರ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆದ ಪಂದ್ಯದಲ್ಲಿ ಅಫ್ಘಾನ್ ಬ್ಯಾಟರ್ 177 ರನ್ ಬಾರಿಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ 175+ ರನ್ ಗಳಿಸಿದ ವಿಶ್ವದ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಸಹ ತಮ್ಮದಾಗಿಸಿಕೊಂಡಿದ್ದಾರೆ.

Published On - 7:55 am, Thu, 27 February 25