AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರ‍್ಯಾಂಕಿಂಗ್​ನಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾರನ್ನು ಹಿಂದಿಕ್ಕಿದ ಅಫ್ಘಾನ್ ಬ್ಯಾಟರ್

ICC ODI Batting Rankings: ಐಸಿಸಿ ಪ್ರಕಟಿಸಿರುವ ಏಕದಿನ ಬ್ಯಾಟರ್​ಗಳ ನೂತನ ಪಟ್ಟಿಯಲ್ಲಿ ಟಾಪ್-5 ನಲ್ಲಿ ಟೀಮ್ ಇಂಡಿಯಾದ ಮೂವರು ಬ್ಯಾಟರ್​ಗಳು ಕಾಣಿಸಿಕೊಂಡಿದ್ದಾರೆ. ಈ ಮೂವರಲ್ಲಿ ಅಗ್ರಸ್ಥಾನದಲ್ಲಿರುವುದು ಭಾರತ ತಂಡದ ನಾಯಕ ಶುಭ್​​ಮನ್ ಗಿಲ್. ಇನ್ನು ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಂತರದ ಸ್ಥಾನಗಳಲ್ಲಿ ಕಾಣಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on:Oct 16, 2025 | 10:55 AM

Share
ಐಸಿಸಿ ಏಕದಿನ ಬ್ಯಾಟರ್​ಗಳ ನೂತನ ರ‍್ಯಾಂಕಿಂಗ್​ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಕೂಡ ಅಗ್ರಸ್ಥಾನ ಅಲಂಕರಿಸಿರುವುದು ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್. ಆದರೆ ದ್ವಿತೀಯ ಸ್ಥಾನದಲ್ಲಿ ಅಫ್ಘಾನಿಸ್ತಾನ್ ತಂಡದ ಆರಂಭಿಕ ದಾಂಡಿಗ ಇಬ್ರಾಹಿಂ ಝದ್ರಾನ್ ಕಾಣಿಸಿಕೊಂಡಿದ್ದಾರೆ.

1 / 7
ಕಳೆದ ಬಾರಿ ಶ್ರೇಯಾಂಕ ಪಟ್ಟಿಯಲ್ಲಿ 10ನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದ ಇಬ್ರಾಹಿಂ ಝದ್ರಾನ್ ಇದೀಗ ಎರಡನೇ ಸ್ಥಾನಕ್ಕೇರುವಲ್ಲಿ ಯಶಸ್ವಿಯಾಗಿದ್ದಾರೆ. ಅದು ಸಹ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಂತಹ ದಿಗ್ಗಜರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ. ನೂತನ ಏಕದಿನ ಬ್ಯಾಟರ್​​​ಗಳ ಟಾಪ್-5 ಪಟ್ಟಿ ಈ ಕೆಳಗಿನಂತಿದೆ...

2 / 7
ಶುಭ್​​ಮನ್ ಗಿಲ್: ಟೀಮ್ ಇಂಡಿಯಾ ನಾಯಕ ಶುಭ್​​ಮನ್ ಗಿಲ್ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ಈ ಪ್ರದರ್ಶನದೊಂದಿಗೆ ಅಗ್ರಸ್ಥಾನಕ್ಕೇರಿರುವ ಗಿಲ್ 784 ಅಂಕಗಳೊಂದಿಗೆ ಅಗ್ರಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 7
ಇಬ್ರಾಹಿಂ ಝದ್ರಾನ್: ಬಾಂಗ್ಲಾದೇಶ್ ವಿರುದ್ಧದ ಏಕದಿನ ಸರಣಿಯಲ್ಲಿ ಇಬ್ರಾಹಿಂ ಝದ್ರಾನ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಭರ್ಜರಿ ಪ್ರದರ್ಶನದ ಫಲವಾಗಿ ಇದೀಗ 8 ಸ್ಥಾನ ಮೇಲೇರುವ ಮೂಲಕ 764 ಅಂಕಗಳೊಂದಿಗೆ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.

4 / 7
ರೋಹಿತ್ ಶರ್ಮಾ: ಚಾಂಪಿಯನ್ಸ್ ಟ್ರೋಫಿಯಲ್ಲಿ ಟೀಮ್ ಇಂಡಿಯಾ ಪರ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದ ರೋಹಿತ್ ಶರ್ಮಾ ನೂತನ ಶ್ರೇಯಾಂಕದಲ್ಲಿ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದರು. ಹಿಟ್​​ಮ್ಯಾನ್ ಒಟ್ಟು 756 ಅಂಕಗಳನ್ನು ಹೊಂದಿದ್ದಾರೆ.

5 / 7
ಬಾಬರ್ ಆಝಂ: ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಬಾಬರ್ ಆಝಂ ಈ ಬಾರಿ ಒಂದು ಸ್ಥಾನ ಕುಸಿತ ಕಂಡಿದ್ದಾರೆ. ಈ ಮೂಲಕ 739 ಅಂಕಗಳೊಂದಿಗೆ ಏಕದಿನ ಬ್ಯಾಟರ್​​ಗಳ ರ್ಯಾಂಕಿಂಗ್ ಪಟ್ಟಿಯಲ್ಲಿ ನಾಲ್ಕನೇ ಸ್ಥಾನವನ್ನು ಅಲಂಕರಿಸಿದ್ದಾರೆ.

6 / 7
ವಿರಾಟ್ ಕೊಹ್ಲಿ: ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊನೆಯ ಏಕದಿನ ಪಂದ್ಯವಾಡಿದ್ದ ವಿರಾಟ್ ಕೊಹ್ಲಿ ಈ ಬಾರಿ ಐದನೇ ಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ. ಕಿಂಗ್ ಕೊಹ್ಲಿ ಒಟ್ಟು 736 ಅಂಕಗಳನ್ನು ಹೊಂದಿದ್ದು, ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಮಿಂಚಿದರೆ ಟಾಪ್-3 ಗೆ ಎಂಟ್ರಿ ಕೊಡಬಹುದು.

7 / 7

Published On - 10:54 am, Thu, 16 October 25

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ