AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Award: 4ನೇ ಟೆಸ್ಟ್​ಗೂ ಮುನ್ನ ಜಡೇಜಾ ಖಾತೆಗೆ ಸೇರುತ್ತಾ ಐಸಿಸಿ ಅವಾರ್ಡ್​? ಮೂವರ ನಡುವೆ ಪೈಪೋಟಿ!

ICC Award:ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

ಪೃಥ್ವಿಶಂಕರ
| Edited By: |

Updated on:Mar 08, 2023 | 1:37 PM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಮಾರ್ಚ್ 9 ರಿಂದ ಅಹಮದಾಬಾದ್‌ನಲ್ಲಿ ನಡೆಯಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಅಭ್ಯಾಸ ಆರಂಭಿಸಿದ್ದು, ಅಂತಿಮ ಟೆಸ್ಟ್ ಗೆಲ್ಲುವ ವಿಶ್ವಾಸದಲ್ಲಿದೆ. ಈ ನಡುವೆ ಇಡೀ ಟೂರ್ನಿಯಲ್ಲಿ ಅದ್ಭುತ ಪ್ರದರ್ಶನ ತೋರಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಪಂದ್ಯಕ್ಕೂ ಮುನ್ನ ಸಿಹಿ ಸುದ್ದಿ ಪಡೆದಿದ್ದು, ಐಸಿಸಿ ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ.

1 / 6
ಜಡೇಜಾ ಅವರು ಐಸಿಸಿ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಈ ಪ್ರಶಸ್ತಿಗಾಗಿ ಅವರು ಇಂಗ್ಲೆಂಡ್ ಬ್ಯಾಟ್ಸ್‌ಮನ್ ಹ್ಯಾರಿ ಬ್ರೂಕ್ ಮತ್ತು ವೆಸ್ಟ್ ಇಂಡೀಸ್ ಎಡಗೈ ಸ್ಪಿನ್ನರ್ ಗುಡಾಕೇಶ್ ಮೋತಿ ಅವರೊಂದಿಗೆ ಸ್ಪರ್ಧೆಯಲ್ಲಿದ್ದಾರೆ.

2 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಜಡೇಜಾ ಮೊದಲ ಬಾರಿಗೆ ಈ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಗ್ರ 2 ತಂಡಗಳಾದ ಆಸ್ಟ್ರೇಲಿಯಾ ಮತ್ತು ಭಾರತ ನಡುವೆ 4 ಟೆಸ್ಟ್ ಪಂದ್ಯಗಳ ಸರಣಿ ನಡೆಯುತ್ತಿದ್ದು, ಈ ಸರಣಿಯಲ್ಲಿ ಜಡೇಜಾ ಇಲ್ಲಿಯವರೆಗೆ 21 ವಿಕೆಟ್‌ಗಳನ್ನು ಕಬಳಿಸಿದ್ದಾರೆ.

3 / 6
ಸರಣಿಯ ಮೊದಲ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ 70 ರನ್ ಬಾರಿಸಿದ್ದ ಜಡೇಜಾ ಒಟ್ಟು 7 ವಿಕೆಟ್ ಕೂಡ ಪಡೆದಿದ್ದರು. ಎರಡನೇ ಟೆಸ್ಟ್‌ನಲ್ಲಿ 26 ರನ್‌ಗಳೊಂದಿಗೆ ಒಟ್ಟು 10 ವಿಕೆಟ್‌ ಪಡೆದಿದ್ದರು. ಹಾಗೆಯೇ ಮೂರನೇ ಟೆಸ್ಟ್‌ನಲ್ಲಿ ಜಡೇಜಾ ಖಾತೆಗೆ 4 ವಿಕೆಟ್ ಸೇರಿದ್ದವು.

4 / 6
ಮತ್ತೊಂದೆಡೆ, ಹ್ಯಾರಿ ಬ್ರೂಕ್ ಕೂಡ ಈ ಪ್ರಶಸ್ತಿಗೆ ಪ್ರಬಲ ಸ್ಪರ್ಧಿಯಾಗಿದ್ದು, ಕಳೆದ ತಿಂಗಳು ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ 89 ರನ್ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ 54 ರನ್ ಗಳಿಸಿದ್ದರು. ಆ ಬಳಿಕ ಎರಡನೇ ಟೆಸ್ಟ್‌ನಲ್ಲಿ 186 ರನ್​ಗಳ ಇನ್ನಿಂಗ್ಸ್ ಆಡಿದ್ದರು.

5 / 6
ಇನ್ನು ಕೆರಿಬಿಯನ್ ಬೌಲರ್  ಗುಡಾಕೇಶ್ ಮೋತಿ ಜಿಂಬಾಬ್ವೆ ವಿರುದ್ಧದ ಮೊದಲ ಟೆಸ್ಟ್​ನಲ್ಲಿ ಒಟ್ಟು 6 ವಿಕೆಟ್ ಪಡೆದರೆ, ಎರಡನೇ ಟೆಸ್ಟ್​ನಲ್ಲಿ ಒಟ್ಟು 13 ವಿಕೆಟ್ ಕಬಳಿಸಿದ್ದಾರೆ.

6 / 6

Published On - 1:20 pm, Wed, 8 March 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ

ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು

ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ

ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ

ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್

ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ

ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ

5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್

‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ