ICC Champions Trophy 2025: ಪಾಕಿಸ್ತಾನ್ ತಂಡದಲ್ಲಿ ಮೂವರು ‘ಚಾಂಪಿಯನ್’​ ಆಟಗಾರರು..!

Updated on: Feb 02, 2025 | 11:00 AM

ICC Champions Trophy 2025: ಲಂಡನ್​ನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2017ರ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು 50 ಓವರ್​ಗಳಲ್ಲಿ 338 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 158 ರನ್​ಗಳಿಗೆ ಆಲೌಟ್ ಆಗುವ ಮೂಲಕ 180 ರನ್​ಗಳ ಸೋಲನುಭವಿಸಿತ್ತು.

1 / 6
ಚಾಂಪಿಯನ್ಸ್ ಟ್ರೋಫಿಯ ಹಾಲಿ ಚಾಂಪಿಯನ್​ ಪಾಕಿಸ್ತಾನ್ ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. 15 ಸದಸ್ಯರ ಈ ಬಳಗದಲ್ಲಿ 2017 ರಲ್ಲಿ ಚಾಂಪಿಯನ್ ತಂಡದ ಭಾಗವಾಗಿದ್ದ ಮೂವರು ಆಟಗಾರರು ಕಾಣಿಸಿಕೊಂಡಿದ್ದಾರೆ.

2 / 6
ಅಂದರೆ 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪ್ರಶಸ್ತಿ ಹಿಡಿದಿದ್ದ ಮೂವರು ಪಾಕ್ ಆಟಗಾರರು ಈ ಬಾರಿ ಕೂಡ ಸ್ಥಾನ ಪಡೆದಿದ್ದಾರೆ. ಅವರೆಂದರೆ, ಬಾಬರ್ ಆಝಂ, ಫಖರ್ ಝಮಾನ್ ಹಾಗೂ ಫಹೀಮ್ ಅಶ್ರಫ್.

3 / 6
2025 ರ ಚಾಂಪಿಯನ್ಸ್ ಟ್ರೋಫಿಗಾಗಿ ಬಾಬರ್ ಆಝಂ ಹಾಗೂ ಫಖರ್ ಝಮಾನ್ ಆರಂಭಿಕ ದಾಂಡಿಗರಾಗಿ ಆಯ್ಕೆಯಾಗಿದ್ದಾರೆ. ಇನ್ನು ಫಹೀಮ್ ಅಶ್ರಫ್ ಆಲ್​ರೌಂಡರ್ ಆಗಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಪಾಕ್ ಪರ 2 ಚಾಂಪಿಯನ್ಸ್ ಟ್ರೋಫಿ ಆಡಿದ ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

4 / 6
ಇನ್ನು 2017 ರ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿ ಕಾಣಿಸಿಕೊಂಡಿದ್ದ ಟೀಮ್ ಇಂಡಿಯಾದ 6 ಆಟಗಾರರು ಈ ಬಾರಿ ಕೂಡ ಕಣಕ್ಕಿಳಿಯಲಿದ್ದಾರೆ. ಅವರೆಂದರೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಜಸ್​ಪ್ರೀತ್ ಬುಮ್ರಾ ಹಾಗೂ ಮೊಹಮ್ಮದ್ ಶಮಿ. ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಈ ಕೆಳಗಿನಂತಿವೆ...

5 / 6
ಪಾಕಿಸ್ತಾನ್ ತಂಡ: ಬಾಬರ್ ಆಝಂ, ಫಖರ್ ಝಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಝ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

6 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್ ಪಂತ್, ರವೀಂದ್ರ ಜಡೇಜಾ.