ಪಾಕಿಸ್ತಾನದಲ್ಲೇ ನಡೆಯುತ್ತಾ ಚಾಂಪಿಯನ್ಸ್ ಟ್ರೋಫಿ? ಐಸಿಸಿ ಸಿಇಒ ಹೇಳಿದ್ದೇನು?

|

Updated on: Sep 14, 2024 | 6:28 PM

ICC Champions Trophy 2025: ಐಸಿಸಿ ಸಿಇಒ ಜಿಯೋಫ್ ಅಲ್ಲಾರ್ಡೈಸ್, ಪ್ರಸ್ತುತ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ. ಟೂರ್ನಿಯಲ್ಲಿ ಪಾಲ್ಗೊಳ್ಳಲು ಇದುವರೆಗೆ ಯಾವುದೇ ತಂಡ ಪಾಕಿಸ್ತಾನ ಪ್ರವಾಸಕ್ಕೆ ಹಿಂಜರಿಕೆ ತೋರಿಲ್ಲ. ಹೀಗಿರುವಾಗ ಈ ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಲು ಯಾವುದೇ ಸಮರ್ಥನೆ ಇಲ್ಲ ಎಂದಿದ್ದಾರೆ.

1 / 7
ಈ ಬಾರಿಯ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಪಾಕಿಸ್ತಾನ ಆತಿಥ್ಯ ವಹಿಸುತ್ತಿರುವುದು ಎಲ್ಲರಿಗೂ ಗೊತ್ತಿದೆ. ಆದರೆ ಎಂಟು ವರ್ಷಗಳ ನಂತರ ಆಯೋಜನೆಯಾಗುತ್ತಿರುವ ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗಲಿದೆಯೇ ಅಥವಾ ಭಾಗವಹಿಸದೇ ಇರುವುದೇ? ಎಂಬುದರ ಕುರಿತು ಪರಿಸ್ಥಿತಿಯನ್ನು ಇನ್ನೂ ಸ್ಪಷ್ಟಪಡಿಸಲಾಗಿಲ್ಲ.

2 / 7
ಭದ್ರತಾ ಕಾರಣಗಳಿಂದಾಗಿ ಟೀಂ ಇಂಡಿಯಾ ಬಹಳ ವರ್ಷಗಳಿಂದ ಪಾಕಿಸ್ತಾನ ಪ್ರವಾಸ ಕೈಗೊಂಡಿಲ್ಲ. ಅಲ್ಲದೆ ಐಸಿಸಿ ಟೂರ್ನಿಯಲ್ಲಿ ಉಭಯ ತಂಡಗಳ ನಡುವೆ ನಡೆದ ಎಲ್ಲಾ ಪಂದ್ಯಗಳನ್ನು ಬೇರೆ ಯಾವುದೋ ದೇಶದಲ್ಲಿ ಹೈಬ್ರಿಡ್ ಮಾದರಿಯಲ್ಲಿ ಆಡಿಸಲಾಗಿದೆ. ಹೀಗಿರುವಾಗ ಚಾಂಪಿಯನ್ಸ್ ಟ್ರೋಫಿಯನ್ನು ಭಾರತ ಹೈಬ್ರಿಡ್ ಮಾದರಿಯಲ್ಲಿ ಆಡುತ್ತಾ? ಅಥವಾ ಇಡೀ ಪಂದ್ಯಾವಳಿಯನ್ನೇ ಪಾಕಿಸ್ತಾನದ ಹೊರಗೆ ಆಯೋಜಿಸಲಾಗುತ್ತಾ ಎಂಬುದರ ಬಗ್ಗೆ ಸಾಕಷ್ಟು ಪ್ರಶ್ನೆಗಳು ಎದ್ದಿವೆ. ಇದಕ್ಕೆ ಸ್ವತಃ ಐಸಿಸಿ ಸಿಇಒ ಅವರೇ ಉತ್ತರ ನೀಡಿದ್ದಾರೆ.

3 / 7
ಈ ಬಗ್ಗೆ ಪ್ರತಿಕ್ರಿಯಿಸಿರುವ ಐಸಿಸಿ ಸಿಇಒ ಜಿಯೋಫ್ ಅಲ್ಲಾರ್ಡೈಸ್, ಪ್ರಸ್ತುತ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸುವ ಯಾವುದೇ ಯೋಜನೆ ಇಲ್ಲ. ಟೂರ್ನಿಯಲ್ಲಿ ಪಾಲ್ಗೊಳ್ಳಲು ಇದುವರೆಗೆ ಯಾವುದೇ ತಂಡ ಪಾಕಿಸ್ತಾನ ಪ್ರವಾಸಕ್ಕೆ ಹಿಂಜರಿಕೆ ತೋರಿಲ್ಲ. ಹೀಗಿರುವಾಗ ಈ ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಲು ಯಾವುದೇ ಸಮರ್ಥನೆ ಇಲ್ಲ ಎಂದಿದ್ದಾರೆ.

4 / 7
ಇತ್ತ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳಲು ಟೀಂ ಇಂಡಿಯಾ ಪಾಕಿಸ್ತಾನಕ್ಕೆ ಭೇಟಿ ನೀಡಲಿದೆಯೇ ಅಥವಾ ಇಲ್ಲವೇ ಎಂಬುದರ ಕುರಿತು ಇಲ್ಲಿಯವರೆಗೆ ಬಿಸಿಸಿಐ ಅಥವಾ ಭಾರತ ಸರ್ಕಾರ ಯಾವುದೇ ಅಧಿಕೃತ ಹೇಳಿಕೆಯನ್ನು ನೀಡಿಲ್ಲ. ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಹೈಬ್ರಿಡ್ ಮಾದರಿಯಲ್ಲಿ ಮಾತ್ರ ಭಾಗವಹಿಸಲಿದೆ ಎಂದು ನಂಬಲಾಗಿದ್ದು, ಈ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಬಹಿರಂಗವಾಗಿಲ್ಲ.

5 / 7
ಆದರೆ ಈ ಟೂರ್ನಿಯಲ್ಲಿ ಆಡಲು ಟೀಂ ಇಂಡಿಯಾ ಪಾಕಿಸ್ತಾನ ಪ್ರವಾಸ ಕೈಗೊಳ್ಳಲಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ವಿಶ್ವಾಸ ವ್ಯಕ್ತಪಡಿಸಿದೆ. ಭಾರತ ಕ್ರಿಕೆಟ್ ತಂಡವನ್ನು ಹೊರತುಪಡಿಸಿ ಈ ಟೂರ್ನಿಯಲ್ಲಿ ಭಾಗವಹಿಸುವ ಎಲ್ಲಾ ತಂಡಗಳು ತಮ್ಮ ದೇಶಕ್ಕೆ ಭೇಟಿ ನೀಡಿವೆ. ಭಾರತ ಈ ಟೂರ್ನಿಯಲ್ಲಿ ಆಡಲು ಬರದಿರಲು ಯಾವುದೇ ಘನ ಕಾರಣಗಳಿಲ್ಲ ಎಂದು ಪಿಸಿಬಿ ಹೇಳಿದೆ.

6 / 7
ಇನ್ನು ಮುಂದಿನ ವರ್ಷ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಪಾಕಿಸ್ತಾನ ಸೇರಿದಂತೆ ಒಟ್ಟು 8 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ.

7 / 7
2025 ರ ಫೆಬ್ರವರಿ ಹಾಗೂ ಮಾರ್ಚ್ ನಡುವೆ ನಡೆಸಲು ತೀರ್ಮಾನಿಸಿರುವ ಈ ಪಂದ್ಯಾವಳಿಯ ಎಲ್ಲಾ ಪಂದ್ಯಗಳನ್ನು ಕರಾಚಿ, ರಾವಲ್ಪಿಂಡಿ ಮತ್ತು ಲಾಹೋರ್‌ನಲ್ಲಿ ಆಡಲಾಗುತ್ತದೆ. ಭಾರತ ತಂಡದ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ಇರಿಸಲಾಗಿದೆ. ಆದಾಗ್ಯೂ ಟೀಂ ಇಂಡಿಯಾ, ಪಾಕಿಸ್ತಾನಕ್ಕೆ ಹೋಗುವ ಸಾಧ್ಯತೆಗಳು ತೀರ ಕಡಿಮೆ ಎಂದು ಹೇಳಲಾಗುತ್ತಿದೆ.