T20 World Cup 2028: ಮುಂದಿನ ಟಿ20 ವಿಶ್ವಕಪ್​ಗೆ 12 ತಂಡಗಳು ಆಯ್ಕೆ

Updated on: Feb 19, 2026 | 11:27 AM

T20 World Cup 2028: ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 2028ರ ಟಿ20 ವಿಶ್ವಕಪ್​ನಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಈ ಇಪ್ಪತ್ತು ತಂಡಗಳಲ್ಲಿ 12 ಟೀಮ್​ಗಳು ಫೈನಲ್ ಆಗಿವೆ. ಇನ್ನುಳಿದ 8 ತಂಡಗಳು ಅರ್ಹತಾ ಸುತ್ತಿನ ಮೂಲಕ ಆಯ್ಕೆಯಾಗಲಿದೆ.

1 / 13
T20 World Cup 2026: 2026ರ ಟಿ20 ವಿಶ್ವಕಪ್​ನ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ತಲುಪಿದೆ. ಇದರ ನಡುವೆ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ 12 ತಂಡಗಳು ನೇರವಾಗಿ ಅರ್ಹತೆ ಪಡೆದುಕೊಂಡಿವೆ. ಆಸ್ಟ್ರೇಲಿಯಾ-ನ್ಯೂಝಿಲೆಂಡ್ ಜಂಟಿಯಾಗಿ ಆಯೋಜಿಸಲಿರುವ 11ನೇ ಆವೃತ್ತಿಯ ಟಿ20 ವಿಶ್ವಕಪ್​ಗೆ ಡೈರೆಕ್ಟ್ ಎಂಟ್ರಿ ಪಡೆದಿರುವ ತಂಡಗಳ ಪಟ್ಟಿ ಈ ಕೆಳಗಿನಂತಿದೆ...

2 / 13
ಆಸ್ಟ್ರೇಲಿಯಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಕಳಪೆ ಪ್ರದರ್ಶನ ನೀಡಿ ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಆಸ್ಟ್ರೇಲಿಯಾ 2028ರ ಟಿ20 ವಿಶ್ವಕಪ್​ಗೆ ಆತಿಥೇಯ ರಾಷ್ಟ್ರವಾಗಿ ನೇರವಾಗಿ ಆಯ್ಕೆಯಾಗಿದೆ. ಅದರಂತೆ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಆಸೀಸ್ ಪಡೆ ಕಾಣಿಸಿಕೊಳ್ಳುವುದು ಖಚಿತ.

3 / 13
ನ್ಯೂಝಿಲೆಂಡ್: ಆಸ್ಟ್ರೇಲಿಯಾ ಜೊತೆ ನ್ಯೂಝಿಲೆಂಡ್ ಕೂಡ ಮುಂಬರುವ ಟಿ20 ವಿಶ್ವಕಪ್​ನ ಆತಿಥ್ಯವಹಿಸಲಿದೆ. ಅದರಂತೆ ಕಿವೀಸ್ ಪಡೆ ಕೂಡ 2028ರ ಟಿ20 ವಿಶ್ವಕಪ್​ಗೆ ಆತಿಥೇಯ ರಾಷ್ಟ್ರವಾಗಿ ಡೈರೆಕ್ಟ್ ಆಯ್ಕೆಯಾಗಿದೆ.

4 / 13
ವೆಸ್ಟ್ ಇಂಡೀಸ್: ಪ್ರಸ್ತುತ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿರುವ ವೆಸ್ಟ್ ಇಂಡೀಸ್ ತಂಡ ಕೂಡ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಆಯೋಜಿಸಲಿರುವ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

5 / 13
ಝಿಂಬಾಬ್ವೆ: ಆಸ್ಟ್ರೇಲಿಯಾ ಮತ್ತು ಐರ್ಲೆಂಡ್ ವಿರುದ್ಧ ಗೆದ್ದು ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿಗೆ ಪ್ರವೇಶಿಸಿರುವ ಝಿಂಬಾಬ್ವೆ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್​​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಝಿಂಬಾಬ್ವೆ ಕೂಡ ಕಾಣಿಸಿಕೊಳ್ಳಲಿದೆ.

6 / 13
ಸೌತ್ ಆಫ್ರಿಕಾ; ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಸೂಪರ್-8 ಹಂತಕ್ಕೇರಿರುವ ಸೌತ್ ಆಫ್ರಿಕಾ ತಂಡವು ಕೂಡ 2028 ರಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ಗೆ ನೇರವಾಗಿ ಎಂಟ್ರಿ ಕೊಟ್ಟಿದೆ.

7 / 13
ಇಂಗ್ಲೆಂಡ್: ಈ ಬಾರಿಯ ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನದೊಂದಿಗೆ ಗಮನ ಸೆಳೆದಿರುವ ಇಂಗ್ಲೆಂಡ್ ತಂಡ ಇದೀಗ ಸೂಪರ್-8 ಹಂತದಲ್ಲಿ ಕಣಕ್ಕಿಳಿಯಲು ಸಜ್ಜಾಗಿದೆ. ಅದರಂತೆ ದ್ವಿತೀಯ ಸುತ್ತಿಗೆ ಪ್ರವೇಶಿಸಿರುವ ಇಂಗ್ಲೆಂಡ್ ಕೂಡ 2028 ರ ವಿಶ್ವಕಪ್​ಗೆ ಅರ್ಹತೆ ಪಡೆದುಕೊಂಡಿದೆ.

8 / 13
ಶ್ರೀಲಂಕಾ: ಪ್ರಸ್ತುತ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಶ್ರೀಲಂಕಾ ಕೂಡ ಸೂಪರ್-8 ಸುತ್ತಿಗೆ ಪ್ರವೇಶಿಸಿರುವ ಆಧಾರದ ಮೇಲೆ 2028ರ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ. 

9 / 13
ಭಾರತ: ಟಿ20 ವಿಶ್ವಕಪ್​ನ ಹಾಲಿ ಚಾಂಪಿಯನ್ ಟೀಮ್ ಇಂಡಿಯಾ ಕೂಡ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ. ಸೂಪರ್-8 ಸುತ್ತಿಗೆ ಪ್ರವೇಶಿಸಿರುವ ಭಾರತ ತಂಡವು ಆಸ್ಟ್ರೇಲಿಯಾ ಮತ್ತು ನ್ಯೂಝಿಲೆಂಡ್ ಆಯೋಜಿಸಲಿರುವ ಟಿ20 ವಿಶ್ವಕಪ್​ಗೆ ನೇರವಾಗಿ ಆಯ್ಕೆಯಾಗಿದೆ.

10 / 13
ಪಾಕಿಸ್ತಾನ್: ಟಿ20 ವಿಶ್ವಕಪ್ 2026 ರಲ್ಲಿ ಸೋಲು-ಗೆಲುವುಗಳೊಂದಿಗೆ ಕೊನೆಗೂ ಸೂಪರ್-8 ಹಂತಕ್ಕೇರಿರುವ ಪಾಕಿಸ್ತಾನ್ ತಂಡವು 2028ರ ಟಿ20 ವಿಶ್ವಕಪ್​ ಎಂಟ್ರಿಯನ್ನು ಖಚಿತಪಡಿಸಿಕೊಂಡಿದೆ. ಅದರಂತೆ ಪಾಕ್ ಪಡೆ ಕೂಡ ಆಸ್ಟ್ರೇಲಿಯಾ-ನ್ಯೂಝಿಲೆಂಡ್​ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯಲಿದೆ.

11 / 13
ಅಫ್ಘಾನಿಸ್ತಾನ್: 2026 ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲೇ ಹೊರಬಿದ್ದಿರುವ ಅಫ್ಘಾನಿಸ್ತಾನ್ ತಂಡವು ಐಸಿಸಿ ಶ್ರೇಯಾಂಕದ ಆಧಾರದ ಮೇಲೆ 2028ರ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ. ಹೀಗಾಗಿ 2028ರ ಟಿ20 ವಿಶ್ವಕಪ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

12 / 13
ಬಾಂಗ್ಲಾದೇಶ್: ಈ ಬಾರಿಯ ಟಿ20 ವಿಶ್ವಕಪ್​ನಿಂದ ಹೊರಗುಳಿದಿರುವ ಬಾಂಗ್ಲಾದೇಶ್ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ. ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಬಾಂಗ್ಲಾ ಪಡೆದ 2028ರ ಟಿ20 ವಿಶ್ವಕಪ್​ಗೆ ಅರ್ಹತೆಗಿಟ್ಟಿಸಿಕೊಂಡಿದೆ.

13 / 13
ಐರ್ಲೆಂಡ್: ಐಸಿಸಿ ಶ್ರೇಯಾಂಕದ ಆಧಾರದ ಮೇಲೆ ಐರ್ಲೆಂಡ್ ತಂಡ ಕೂಡ ಮುಂದಿನ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿದೆ.  ಇದರೊಂದಿಗೆ ನ್ಯೂಝಿಲೆಂಡ್ ಮತ್ತು ಆಸ್ಟ್ರೇಲಿಯಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಲ್ಲಿ ಐರ್ಲೆಂಡ್ ಕೂಡ ಕಣಕ್ಕಿಳಿಯುವುದು ಖಚಿತವಾಗಿದೆ.