ICC: ಕಪಿಲ್ ಟು ರೋಹಿತ್; ಐಸಿಸಿ ಫೈನಲ್​ಗಳಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ ಐವರು ನಾಯಕರಿವರು

ICC Finals: ರೋಹಿತ್ ಶರ್ಮಾ ನಾಯಕತ್ವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೆಸ್ಟ್ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದು, ಚಾಂಪಿಯನ್ ಪಟ್ಟಕ್ಕೇರುವ ತವಕದಲ್ಲಿದೆ.

ಪೃಥ್ವಿಶಂಕರ
|

Updated on: Jun 08, 2023 | 6:08 PM

ಭಾರತವು ಮತ್ತೊಂದು ಐಸಿಸಿ ಈವೆಂಟ್‌ನ ಫೈನಲ್‌ನಲ್ಲಿ ಆಡುತ್ತಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವೆ 2021-23 ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿದೆ. ರೋಹಿತ್ ಶರ್ಮಾ ನಾಯಕತ್ವ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟೆಸ್ಟ್ ವಿಶ್ವಕಪ್ ಫೈನಲ್ ಪ್ರವೇಶಿಸಿದ್ದು, ಚಾಂಪಿಯನ್ ಪಟ್ಟಕ್ಕೇರುವ ತವಕದಲ್ಲಿದೆ. ಡಬ್ಲ್ಯುಟಿಸಿ ಫೈನಲ್​ನಲ್ಲಿ ತಂಡದ ನಾಯಕತ್ವವಹಿಸುವುದರೊಂದಿಗೆ ಐಸಿಸಿ ಈವೆಂಟ್​ ಫೈನಲ್​ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ 5ನೇ ನಾಯಕ ಎಂಬ ದಾಖಲೆಯನ್ನೂ ರೋಹಿತ್ ಬರೆದಿದ್ದಾರೆ.

1 / 9
ಐತಿಹಾಸಿಕ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಕಪಿಲ್ ದೇವ್ ನಾಯಕತ್ವದಲ್ಲಿ 1983ರ ಏಕದಿನ ವಿಶ್ವಕಪ್ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ತನ್ನ ಮೊದಲ ಐಸಿಸಿ ಟ್ರೋಫಿ ಗೆದ್ದು ಬೀಗಿತ್ತು. ಆದರೆ ಆಗ ಐಸಿಸಿ ಹೆಸರು ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ ಆಗಿರಲಿಲ್ಲ. ಬದಲಿಗೆ ಇಂಪಿರಿಯಲ್ ಕ್ರಿಕೆಟ್ ಕೌನ್ಸಿಲ್ ಎಂದಿತ್ತು. ಆ ನಂತರ  1965 ರಲ್ಲಿ ಇಂಟರ್​ನ್ಯಾಷನಲ್ ಕ್ರಿಕೆಟ್ ಕಾನ್ಫರೆನ್ಸ್ ಎಂದಾಯಿತು. ಅಂತಿಮವಾಗಿ 1987 ರಲ್ಲಿ ಈಗಿನ ಹೆಸರನ್ನು ಪಡೆದುಕೊಂಡಿತು.

2 / 9
ಆ ನಂತರ ಟೀಂ ಇಂಡಿಯಾವನ್ನು ಫೈನಲ್​ನಲ್ಲಿ ಮುನ್ನಡೆಸಿದ ಶ್ರೇಯ ಸೌರವ್ ಗಂಗೂಲಿಗೆ ಸಲ್ಲುತ್ತದೆ. ದಾದಾ, 2000 ರಲ್ಲಿ ಮೊದಲ ಬಾರಿಗೆ ಐಸಿಸಿ ಈವೆಂಟ್‌ನ ಫೈನಲ್‌ನಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಿದ್ದರು. ಐಸಿಸಿ ಟ್ರೋಫಿಯ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆದಿತ್ತು.  ಸೌರವ್ ನೇತೃತ್ವದ ಭಾರತ ಫೈನಲ್‌ನಲ್ಲಿ 4 ವಿಕೆಟ್‌ಗಳಿಂದ ಸೋತಿತ್ತು.

3 / 9
ಸೌರವ್ ಅವರ ನಾಯಕತ್ವದಲ್ಲಿ ಭಾರತವು ಇನ್ನೂ ಎರಡು ಐಸಿಸಿ ಈವೆಂಟ್‌ಗಳ ಫೈನಲ್‌ಗೆ ತಲುಪಿತು.  2002 ರಲ್ಲಿ, ಶ್ರೀಲಂಕಾದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯವನ್ನು ಆಡಲಾಯಿತು.  ಭಾರೀ ಮಳೆಯಿಂದಾಗಿ ಪಂದ್ಯ ರದ್ದಾಗಿತ್ತು.  ರಿಸರ್ವ್ ಡೇಗೂ ಮಳೆ ಅಡ್ಡಿಯಾದ ಕಾರಣ ಭಾರತ ಮತ್ತು ಶ್ರೀಲಂಕಾ ಜಂಟಿ ವಿಜೇತರೆಂದು ಘೋಷಿಸಲಾಯಿತು.  ನಂತರ ಸೌರವ್ 2003 ರಲ್ಲಿ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ತಂಡವನ್ನು ಮುನ್ನಡೆಸಿದ್ದರು. ಆದರೆ ಆ ಪಂದ್ಯದಲ್ಲಿ ಭಾರತ ಸೋತಿತ್ತು.

4 / 9
ಸೌರವ್ ಬಳಿಕ 2007ರ ಟಿ20 ವಿಶ್ವಕಪ್​ನಲ್ಲಿ ಮಹೇಂದ್ರ ಸಿಂಗ್ ಧೋನಿ ಭಾರತವನ್ನು ಗೆಲುವಿನತ್ತ ಮುನ್ನಡೆಸಿದ್ದರು.

5 / 9
ಅದರ ನಂತರ ಭಾರತವು ಧೋನಿ ನಾಯಕತ್ವದಲ್ಲಿ ಇನ್ನೂ ಮೂರು ಐಸಿಸಿ ಈವೆಂಟ್‌ಗಳ ಫೈನಲ್‌ನಲ್ಲಿ ಆಡಿತು ಮತ್ತು ಅವುಗಳಲ್ಲಿ ಎರಡನ್ನು ಗೆದ್ದಿತು.  2011ರ ಏಕದಿನ ವಿಶ್ವಕಪ್ ಮತ್ತು 2013ರ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವ ಮೂಲಕ  ಭಾರತದ ಇತಿಹಾಸದಲ್ಲಿ ಎಲ್ಲಾ ಐಸಿಸಿ ಟ್ರೋಫಿಗಳನ್ನು ಗೆದ್ದ ಮೊದಲ ನಾಯಕ ಎಂಬ ದಾಖಲೆಯನ್ನು ಧೋನಿ ಬರೆದರು. ಆ ನಂತರ 2014ರಲ್ಲಿ ಧೋನಿ ನಾಯಕತ್ವದಲ್ಲಿ ಟೀಂ ಇಂಡಿಯಾ ಮತ್ತೊಂದು ಟಿ20 ವಿಶ್ವಕಪ್ ಫೈನಲ್ ಆಡಿತ್ತು.

6 / 9
ಧೋನಿ ನಂತರ 2017 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಐಸಿಸಿ ಟ್ರೋಫಿಯ ಫೈನಲ್‌ಗೆ ಭಾರತವನ್ನು ಮುನ್ನಡೆಸಿದರು. ಆದರೆ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಭಾರತ ಸೋತಿತ್ತು.

7 / 9
ಭಾರತವು 2021 ರಲ್ಲಿ ವಿರಾಟ್ ನಾಯಕತ್ವದಲ್ಲಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ತಲುಪಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ಸೋತು ಖಾಲಿ ಕೈಯಲ್ಲಿ ವಾಪಸ್ಸಾಗಿತ್ತು.

8 / 9
ಈ ಪಟ್ಟಿಯಲ್ಲಿರುವ ಕೊನೆಯ ನಾಯಕ ರೋಹಿತ್ ಶರ್ಮಾ.  ಮತ್ತೊಂದು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್​ನಲ್ಲಿ  ರೋಹಿತ್ ಮೊದಲ ಬಾರಿಗೆ ಐಸಿಸಿ ಈವೆಂಟ್‌ನ ಫೈನಲ್‌ನಲ್ಲಿ ದೇಶವನ್ನು ಮುನ್ನಡೆಸುತ್ತಿದ್ದಾರೆ.  ಭಾರತದ ಐಸಿಸಿ ಟ್ರೋಫಿ ಬರ ನೀಗಿಸುವ ಸವಾಲು ಅವರ ಮುಂದಿದೆ.

9 / 9
Follow us
ಗಯಾನಾದಲ್ಲಿ ಗಾಂಧಿಗೆ ನಮನ ಸಲ್ಲಿಸಿ, ರಾಮ ಭಜನೆಗೆ ತಾಳ ನುಡಿಸಿದ ಮೋದಿ

ಅವಾಚ್ಯ ಶಬ್ದ ಬಳಕೆ ಮಾಡಿದ ರಜತ್​ಗೆ ದೊಡ್ಡ ಶಿಕ್ಷೆ

ಅಯ್ಯಪ್ಪ ಮಾಲೆಯ ವಸ್ತ್ರದ ಬಗ್ಗೆ ನಿಮಗೆ ಗೊತ್ತಿರದ ವಿಚಾರ

ಇಂದಿನ ರಾಶಿಫಲ: ಮೇಷ, ವೃಷಭ, ಮಿಥುನ ಸೇರಿದಂತೆ 12 ರಾಶಿಗಳ ದೈನಂದಿನ ಭವಿಷ್ಯ

ಮ್ಯಾಂಗೋ ಲಸ್ಸಿಗೆ ಜರ್ಮನ್ ಸ್ನೇಹಿತರನ್ನು ಭಾರತಕ್ಕೆ ಆಹ್ವಾನಿಸಿದ ವೈಷ್ಣವ್

ಭಾರತದ ಬೆಳವಣಿಗೆಗೆ ಪ್ರಮುಖ 4 ಪಿಲ್ಲರ್​ಗಳನ್ನು ಬಹಿರಂಗಪಡಿಸಿದ ಎ ವೈಷ್ಣವ್

ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?

ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ

ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ

ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ