
ICC Men's ODI Rankings: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ICC) ಪುರುಷರ ಏಕದಿನ ಬ್ಯಾಟರ್ ರ‍್ಯಾಕಿಂಗ್ ಪಟ್ಟಿಯನ್ನು ಪ್ರಕಟಿಸಿದೆ. ನೂತನ ಟಾಪ್ 10 ಪಟ್ಟಿಯಲ್ಲಿ ಟೀಮ್ ಇಂಡಿಯಾದ ಮೂರು ಆಟಗಾರರು ಸ್ಥಾನ ಪಡೆದಿದ್ದಾರೆ.

ಅತ್ತ ಪಾಕಿಸ್ತಾನ್ ನಾಯಕ ಬಾಬರ್ ಆಜಂ ಈ ಬಾರಿ ಕೂಡ ಅಗ್ರಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಂದೆಡೆ ನ್ಯೂಜಿಲೆಂಡ್ ವಿರುದ್ಧ ದ್ವಿಶತಕ ಹಾಗೂ ಶತಕ ಸಿಡಿಸಿ ಮಿಂಚಿದ್ದ ಟೀಮ್ ಇಂಡಿಯಾದ ಯುವ ಬ್ಯಾಟರ್ ಶುಭ್ಮನ್ ಗಿಲ್ ಅಗ್ರ ಹತ್ತರಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಿದ್ರೆ ನೂತನ ಏಕದಿನ ಬ್ಯಾಟ್ಸ್ಮನ್ಗಳ ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿರುವ ಆಟಗಾರರು ಯಾರೆಲ್ಲಾ ಎಂದು ನೋಡೋಣ...

1- ಬಾಬರ್ ಆಜಂ (ಪಾಕಿಸ್ತಾನ್)- 887 ಅಂಕಗಳು

2- ರಸ್ಸಿ ವಂಡರ್ ಡುಸ್ಸೆನ್ (ಸೌತ್ ಆಫ್ರಿಕಾ)- 766 ಅಂಕಗಳು

3- ಕ್ವಿಂಟನ್ ಡಿಕಾಕ್ (ಸೌತ್ ಆಫ್ರಿಕಾ)- 759 ಅಂಕಗಳು

4- ಡೇವಿಡ್ ವಾರ್ನರ್ (ಆಸ್ಟ್ರೇಲಿಯಾ)- 747 ಅಂಕಗಳು

5- ಇಮಾಮ್ ಉಲ್ ಹಕ್ (ಪಾಕಿಸ್ತಾನ್)- 740 ಅಂಕಗಳು

6- ಶುಭ್ಮನ್ ಗಿಲ್ (ಭಾರತ)- 734 ಅಂಕಗಳು

7- ವಿರಾಟ್ ಕೊಹ್ಲಿ (ಭಾರತ)- 727 ಅಂಕಗಳು

8- ಸ್ಟೀವ್ ಸ್ಮಿತ್ (ಆಸ್ಟ್ರೇಲಿಯಾ)- 719 ಅಂಕಗಳು

9- ರೋಹಿತ್ ಶರ್ಮಾ (ಭಾರತ)- 719 ಅಂಕಗಳು

10- ಜಾನಿ ಬೈರ್ಸ್ಟೋವ್ (ಇಂಗ್ಲೆಂಡ್)- 710 ಅಂಕಗಳು