ಶುಭ್ಮನ್ ಗಿಲ್: ಟೀಮ್ ಇಂಡಿಯಾ ಯುವ ಆರಂಭಿಕ ಆಟಗಾರ ಶುಭ್ಮನ್ ಗಿಲ್ ಅದ್ಭುತ ಫಾರ್ಮ್ನಲ್ಲಿದ್ದಾರೆ. ಜನವರಿಯಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರು. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ 3ಪಂದ್ಯಗಳಿಂದ 360 ರನ್ ಕಲೆಹಾಕಿದ್ದ ಗಿಲ್, ಟಿ20 ಸರಣಿಯಲ್ಲೂ ಭರ್ಜರಿ ಶತಕ ಬಾರಿಸಿ ಅಬ್ಬರಿಸಿದ್ದರು. ಹೀಗಾಗಿ ಜನವರಿ ತಿಂಗಳ ನಾಮನಿರ್ದೇಶಿತರರ ಪಟ್ಟಿಯಲ್ಲಿ ಟೀಮ್ ಇಂಡಿಯಾದ ಯುವ ಆಟಗಾರ ಸ್ಥಾನ ಪಡೆದಿದ್ದಾರೆ.