AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಸಿಸಿ ತಿಂಗಳ ಆಟಗಾರ ನಾಮನಿರ್ದೇಶಿತರ ಪಟ್ಟಿ ಪ್ರಕಟ

ICC Men’s Player of the Month: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪ್ರತಿ ತಿಂಗಳು ಅತ್ಯುತ್ತಮ ಪ್ರದರ್ಶನ ನೀಡಿದ ಆಟಗಾರರ ಪಟ್ಟಿಯನ್ನು ಪ್ರಕಟಿಸುತ್ತದೆ. ಈ ಆಟಗಾರರಲ್ಲಿ ಯಾರು ಉತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದನ್ನು ಅಭಿಮಾನಿಗಳು ನಿರ್ಧರಿಸುತ್ತಾರೆ. ಅಂದರೆ ಐಸಿಸಿ ಪ್ರಕಟಿಸಿರುವ ನಾಮನಿರ್ದೇಶಿತ ಆಟಗಾರರಲ್ಲಿ ಯಾರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ ಎಂಬುದಕ್ಕೆ ವೋಟಿಂಗ್ ನಡೆಯಲಿದ್ದು, ಈ ವೇಳೆ ಅತೀ ಹೆಚ್ಚು ವೋಟ್ ಪಡೆದ ಆಟಗಾರನನ್ನು ಪ್ಲೇಯರ್ ಆಫ್ ದಿ ಮಂತ್ ಎಂದು ಘೋಷಿಸಲಾಗುತ್ತದೆ.

ಝಾಹಿರ್ ಯೂಸುಫ್
|

Updated on:Jul 07, 2024 | 9:34 AM

Share
ಐಸಿಸಿ ಜೂನ್ ತಿಂಗಳ ಆಟಗಾರ ನಾರ್ಮನಿರ್ದೇಶಿತರ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟಾಪ್-3 ಪಟ್ಟಿಯಲ್ಲಿ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಭಾರತದ ಜಸ್​ಪ್ರೀತ್ ಬುಮ್ರಾ (Jasprit Bumrah), ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಝ್ ಹಾಗೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಸ್ಥಾನ ಪಡೆದಿದ್ದಾರೆ.

1 / 5
ಜಸ್​ಪ್ರೀತ್ ಬುಮ್ರಾ: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವು ಚಾಂಪಿಯನ್ ಪಟ್ಟಕ್ಕೇರಲು ಬಹುಮುಖ್ಯ ಕಾರಣ ಜಸ್​ಪ್ರೀತ್ ಬುಮ್ರಾ ಎಂದರೆ ತಪ್ಪಾಗಲಾರದು. ಏಕೆಂದರೆ ಟೂರ್ನಿಯುದ್ದಕ್ಕೂ ಬುಮ್ರಾ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. 8 ಪಂದ್ಯಗಳಲ್ಲಿ 29.4 ಓವರ್​ಗಳನ್ನು ಎಸೆದಿದ್ದ ಬುಮ್ರಾ ಕೇವಲ 124 ರನ್ ನೀಡಿ 15 ವಿಕೆಟ್ ಕಬಳಿಸಿದ್ದರು. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

2 / 5
ರಹಮಾನುಲ್ಲಾ ಗುರ್ಬಾಝ್: ಅಫ್ಘಾನಿಸ್ತಾನ್ ತಂಡದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಝ್ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದರು. 8 ಪಂದ್ಯಗಳಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಗುರ್ಬಾಝ್ 3 ಅರ್ಧಶತಕದೊಂದಿಗೆ ಒಟ್ಟು 281 ರನ್ ಬಾರಿಸಿದ್ದಾರೆ. ಅಲ್ಲದೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಅತೀ ಹೆಚ್ಚು ರನ್ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅದರಂತೆ ಇದೀಗ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಯಲ್ಲಿ ಗುರ್ಬಾಝ್ ಕೂಡ ನಾರ್ಮನಿರ್ದೇಶಿತರಾಗಿದ್ದಾರೆ.

3 / 5
ರೋಹಿತ್ ಶರ್ಮಾ: ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿರುವ ರೋಹಿತ್ ಶರ್ಮಾ ಬ್ಯಾಟಿಂಗ್​ನಲ್ಲೂ ಮಿಂಚಿದ್ದರು. 8 ಪಂದ್ಯಗಳಲ್ಲಿ ಇನಿಂಗ್ಸ್ ಆರಂಭಿಸಿದ್ದ ಹಿಟ್​ಮ್ಯಾನ್ 3 ಅರ್ಧಶತಕಗಳೊಂದಿಗೆ ಒಟ್ಟು 257 ರನ್ ಕಲೆಹಾಕಿದ್ದಾರೆ. ಈ ಅದ್ಭುತ ಪ್ರದರ್ಶನದ ಫಲವಾಗಿ ಇದೀಗ ರೋಹಿತ್ ಶರ್ಮಾ ಕೂಡ ಐಸಿಸಿ ಜೂನ್ ತಿಂಗಳ ಆಟಗಾರರ ಪಟ್ಟಿಗೆ ನಾರ್ಮನಿರ್ದೇಶಿತರಾಗಿದ್ದಾರೆ.

4 / 5
ಈ ಮೂವರಲ್ಲಿ ಜೂನ್ ತಿಂಗಳ ಆಟಗಾರ ಯಾರಾಗಬೇಕೆಂಬುದನ್ನು ಕ್ರಿಕೆಟ್ ಪ್ರೇಮಿಗಳು ನಿರ್ಧರಿಸಬಹುದು. ಇದಕ್ಕಾಗಿ ನೀವು ಮಾಡಬೇಕಿರುವುದು ಐಸಿಸಿಯ ಅಧಿಕೃತ ವೆಬ್​ಸೈಟ್​ಗೆ ಹೋಗಿ ವೋಟ್ ಮಾಡಬೇಕು. ಈ ಮೂಲಕ ನಿಮ್ಮ ನೆಚ್ಚಿನ ಆಟಗಾರನನ್ನು ಜೂನ್ ತಿಂಗಳ ಪ್ಲೇಯರ್ ಆಗಿ ಆಯ್ಕೆ ಮಾಡಬಹುದು.

5 / 5

Published On - 9:33 am, Sun, 7 July 24

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು

‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?

ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ

ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್

ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ

ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ